AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ರಾಗಿಗುಡ್ಡದಲ್ಲಿ ಗಲಾಟೆ ಪ್ರಕರಣ, 24 ಜನರ ವಿರುದ್ಧ ಎಫ್​ಐಆರ್ ದಾಖಲು

ಈದ್ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗ ಜಿಲ್ಲೆಯ ರಾಗಿಗುಡ್ಡದಲ್ಲಿ ಹಿಂದೂಗಳ ಮನೆಗಳನ್ನು ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆಸಲಾಗಿತ್ತು. ಈ ಪ್ರಕರಣ ಸಂಬಂಧ 24 ಜನರ ವಿರುದ್ಧ FIR ದಾಖಲಾಗಿದ್ದು, 60 ಜನರ ವಿಚಾರಣೆ ಮಾಡಲಾಗಿದೆ. ಎಂಟು ಮಂದಿ ತಲೆಮರೆಸಿಕೊಂಡಿದ್ದಾರೆ ಎಂದು ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದಾರೆ.

ಶಿವಮೊಗ್ಗ: ರಾಗಿಗುಡ್ಡದಲ್ಲಿ ಗಲಾಟೆ ಪ್ರಕರಣ, 24 ಜನರ ವಿರುದ್ಧ ಎಫ್​ಐಆರ್ ದಾಖಲು
ಜಿ.ಕೆ. ಮಿಥುನ್ ಕುಮಾರ್, ಶಿವಮೊಗ್ಗ ಎಸ್​ಪಿ
TV9 Web
| Edited By: Rakesh Nayak Manchi|

Updated on: Oct 03, 2023 | 12:50 PM

Share

ಶಿವಮೊಗ್ಗ, ಅ.3: ಈದ್ ಮಿಲಾದ್ (Eid Milad) ಮೆರವಣಿಗೆ ವೇಳೆ ಜಿಲ್ಲೆಯ ರಾಗಿಗುಡ್ಡದಲ್ಲಿ (Ragigudda) ಹಿಂದೂಗಳ ಮನೆಗಳನ್ನು ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆಸಲಾಗಿತ್ತು. ಈ ಪ್ರಕರಣ ಸಂಬಂಧ 24 ಜನರ ವಿರುದ್ಧ FIR ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಹೇಳಿದ್ದಾರೆ.

ಪ್ರಕರಣ ಸಂಬಂಧ ಎಂಟು ಜನರು ತಲೆಮರೆಸಿಕೊಂಡಿದ್ದಾರೆ. 60 ಮಂದಿಯನ್ನು ವಿಚಾರಣೆ ಮಾಡಲಾಗಿದೆ ಎಂದು ಹೇಳಿದ ಮಿಥುನ್ ಕುಮಾರ್, ವಿಡಿಯೋ, ಫೋಟೋ ಆಧರಿಸಿ ಆರೋಪಿಗಳನ್ನು ಬಂಧಿಸಲಾಗುತ್ತಿದೆ. ಕಲ್ಲು ತೂರಾಟ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು.

ಇದನ್ನೂ ಓದಿ: ಶಿವಮೊಗ್ಗ ಗಲಭೆ: ರಾಗಿಗುಡ್ಡ ಏರಿಯಾದಲ್ಲಿ ವಾಸವಾಗಿರುವ ಈ ಕುಟುಂಬ ಅನುಭವಿಸಿದ ಆತಂಕ, ಯಾತನೆ ಪದಗಳಲ್ಲಿ ಹೇಳಲಾಗದು

ಪ್ರಕರಣ ಸಂಬಂಧ ಊಹಾಪೋಹ ಬೇಡ. ವಾಹನ ಯಾರದ್ದು, ವಾಹನದಲ್ಲಿ ಇದ್ದವರು ಯಾರು ಎಂದು ತನಿಖೆ ನಡೆಯುತ್ತಿದೆ. ಅವರನ್ನ ಕರೆತಂದು ವಿಚಾರಣೆ ಮಾಡುತ್ತೇವೆ.

ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿಲ್ಲ: ಎಸ್​ಪಿ

ರಾಗಿಗುಡ್ಡದಲ್ಲಿ 144 ಸೆಕ್ಷನ್​ ಮುಂದುವರಿಯಲಿದೆ. ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಇದ್ದರೂ ವ್ಯಾಪಾರ ವಹಿವಾಟಿಗೆ ಸಮಸ್ಯೆ ಇಲ್ಲ. ಶಿವಮೊಗ್ಗ ನಗರದಲ್ಲಿ ಎಲ್ಲೂ ಕೂಡ ಅಂಗಡಿ ಬಂದ್ ಮಾಡಿಸಿಲ್ಲ. ಯಾರೂ ಭಯಪಡುವ ಅವಶ್ಯಕತೆ ಇಲ್ಲ, ಪೊಲೀಸರ ನಿಯೋಜಿಸಿದ್ದೇವೆ. ರಾಗಿಗುಡ್ಡ ಹೊರತುಪಡಿಸಿ ಶಿವಮೊಗ್ಗ ನಗರದಾದ್ಯಂತ ಸಹಜ ಸ್ಥಿತಿ ಇದೆ ಎಂದು ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದಾರೆ.

ನಗರದಲ್ಲಿ ಹಾಕಿದ ಫ್ಲೆಕ್ಸ್​ನಲ್ಲಿ ತಿದ್ದುಪಡಿ ಮಾಡಬೇಕಿತ್ತು. ಮುಖಂಡರಿಗೆ ಕರೆಕ್ಷನ್ ಮಾಡುವಂತೆ ಹೇಳಿದ್ದೆವು. ಆದರೆ ಅವರು ತಡ ಮಾಡಿದರು. ನಂತರ ಜಿಲ್ಲಾಡಳಿತದ ಕಡೆಯಿಂದ ಅದನ್ನು ಮಾಡಲಾಗಿತ್ತು. ಅದಕ್ಕೂ ಈ ಘಟನೆಗೂ ಸಂಭಂದ ಇಲ್ಲ. ಕಲ್ಲೂ ತೂರಾಟ ಮಾಡಿದವರು ಮೇಲೆ ಕಾನೂನು ಕ್ರಮ ಜರುಗಿಸಿದ್ದೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ