AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸಪ್ಪನ ಕಾಟಕ್ಕೆ ವಿಧವೆ ಮಹಿಳೆ ಆತ್ಮಹತ್ಯೆ: ವಾಟ್ಸಾಪ್​​ನಲ್ಲಿದ್ದ ಡೆತ್​ನೋಟ್​​​ನಲ್ಲಿ ಏನಿದೆ?

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ಪೊಲೀಸ್ ಕಿರುಕುಳಕ್ಕೆ ವಿಧವೆ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ನಡೆದಿದೆ. ವಾಟ್ಸ್‌ಆ್ಯಪ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ತಾಯಿಯನ್ನ ಕಳೆದುಕೊಂಡ ಎರಡು ಪುಟ್ಟ ಹೆಣ್ಣುಮಕ್ಕಳು ಅನಾಥವಾಗಿದ್ದಾರೆ. ಪೊಲೀಸರ ವಿರುದ್ಧ ಕಠಿಣ ಕ್ರಮಕ್ಕೆ ಕುಟುಂಬಸ್ಥರು ಒತ್ತಾಯಿಸಿದ್ದಾರೆ.

ಪೊಲೀಸಪ್ಪನ ಕಾಟಕ್ಕೆ ವಿಧವೆ ಮಹಿಳೆ ಆತ್ಮಹತ್ಯೆ: ವಾಟ್ಸಾಪ್​​ನಲ್ಲಿದ್ದ ಡೆತ್​ನೋಟ್​​​ನಲ್ಲಿ ಏನಿದೆ?
ಮೃತ ಸ್ವಾತಿ, ಪೊಲೀಸ್​ Image Credit source: tv9 kannada
Basavaraj Yaraganavi
| Edited By: |

Updated on: Feb 20, 2026 | 5:09 PM

Share

ಶಿವಮೊಗ್ಗ, ಫೆಬ್ರವರಿ 20: ಪೊಲೀಸಪ್ಪನ (Police) ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್​​ನಲ್ಲಿ ಡೆತ್ ನೋಟ್​ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಸ್ವಾತಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತೀರ್ಥಹಳ್ಳಿ ಪೊಲೀಸ್​ ಸ್ಟೇಷನ್​ನಲ್ಲಿ ಕರ್ತವ್ಯ ನಿರ್ವಹಿಸುವ ಮೋಹನ್​ ಹೆಸರು ಡೆತ್ ನೋಟ್​ನಲ್ಲಿ ಉಲ್ಲೇಖಿಸಲಾಗಿದೆ. ಇನ್ನು ತಂದೆ ಮತ್ತು ತಾಯಿ ಸಾವಿನಿಂದ ಹೆಣ್ಣು ಮಕ್ಕಳ್ಳಿಬ್ಬರು ಅನಾಥವಾಗಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಮೃತಳ ಹೆತ್ತವರು ಟಾರ್ಚರ್ ಕೊಟ್ಟ ಪೋಲಿಸ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ನಡೆದಿದ್ದೇನು?

ಸ್ವಾತಿಗೆ ಮದುವೆ ಆಗಿ 7 ವರ್ಷವಾಗಿತ್ತು. ಒಂದು ವಾರದ ಹಿಂದಷ್ಟೇ ಪತಿ ಜಗದೀಶ್ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಪೊಲೀಸ್ ಮೋಹನ್,​ ಸ್ವಾತಿಗೆ ಫೇಸ್​ಬುಕ್​ನಲ್ಲಿ ಮೆಸೇಜ್ ಮಾಡಿದ್ದ. ಆತನ ಅಕೌಂಟ್​ ಅನ್ನು ಸ್ವಾತಿ ಬ್ಲಾಕ್ ಮಾಡಿದ್ದರು. ಇದಕ್ಕೆ ಕೋಪಗೊಂಡ ಪೋಲಿಸ್ ಬೇರೆ ಅಕೌಂಟ್​ ನಿಂದ ಸ್ವಾತಿ ಬಗ್ಗೆ ಅಪಪ್ರಚಾರ ಮಾಡಿದ್ದ. ಬಳಿಕ ಈತನ ಕಾಟ ತಾಳಲಾರದೆ ಸ್ವಾತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನ್ಯೂ ಟೌನ್​​ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಡೆತ್ ನೋಟ್​ನಲ್ಲಿ ಏನಿದೆ?

ಸ್ವಾರಿ ಅಮ್ಮ. ನನ್ನ ಬಗ್ಗೆ ಇಲ್ಲದೆ ಇರುವುದು ಎಲ್ಲಾ ಕೆಟದಾಗಿ ಜನಗಳ ಹತ್ತಿರ ಮೋಹನ್​ ಹೇಳಿದ್ದಾರೆ. ನನಗೆ ತಡಿಯುವುದಕ್ಕೆ ಆಗುತ್ತಿಲ್ಲ. ನನ್ನ ಗಂಡ ಸತ್ತಿದು ಫುಲ್ ಡ್ರಿಂಕ್ಸ್ ಮಾಡಿ. ಈ ಮೋಹನ್ ಎನ್ನುವ ಪೊಲೀಸ್ ನನ್ನ ಬಗ್ಗೆ ಕೆಟದಾಗಿ ಜನಗಳ ಹತ್ತಿರ ಏನೇನೋ ಹೇಳಿರುವುದು ನನಗೆ ಈಗ ಬೆಳಿಗ್ಗೆ ವಿಷಯ ಗೊತಾಯ್ತು. ಅವನನ್ನು ಮಾತ್ರ ಸಮ್ಮನೇ ಬಿಡಬೇಡಿ ಎಂದಿದ್ದಾರೆ.

ಇದನ್ನೂ ಓದಿ: ಗಂಡ ಫಾರಿನ್ ಟ್ರಿಪ್ ಕಳಿಸದಿದ್ದಕ್ಕೆ ದುಡುಕಿನ ನಿರ್ಧಾರ ಕೈಗೊಂಡ ಹೆಂಡ್ತಿ: ಆಗಿದ್ದೇನು?

ಅವರು ಯಾರು ಅಂತಾನೆ ನಂಗೆ ಗೊತ್ತಿಲ್ಲ. ಫೇಸ್​ಬುಕ್​ನಲ್ಲಿ ಮೆಸೇಜ್​​ ಮಾಡಿದ್ದರು. ನಾನು ಬ್ಲಾಕ್ ಮಾಡಿದೆ. ಅದೇ ಸಿಟ್ಟಿಗೆ ಏನೇನೋ ಹೇಳಿದ್ದಾರೆ. ನನ್ನ ಮಕ್ಕಳನ್ನ ಚೆನ್ನಾಗಿ ನೋಡಿಕೊಳ್ಳಿ. ದಯವಿಟ್ಟು ಸ್ವಾರಿ ಅಮ್ಮ ಎಂದು ಸ್ವಾತಿ ಡೆತ್ ನೋಟ್ ಬರೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ