ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮಪ್ರಭು ಹೆಸರು; ಸಿಎಂ ಸಿದ್ದರಾಮಯ್ಯ ಘೋಷಣೆ

Allama Prabhu Name For Shivamogga Freedom Park: ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಅವರ ಹೆಸರನ್ನು ಇಡುವುದು ಸೂಕ್ತ ಎಂದು ನಾನೂ ಸಹ ಭಾವಿಸಿದ್ದೇನೆ. ಈ ಬಗ್ಗೆ ಯಾರಿಗೂ ಸಮಸ್ಯೆ ಇಲ್ಲವೆಂದಾದರೆ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಎಂದು ನಾಮಕರಣ ಮಾಡಲು ನಾನು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮಪ್ರಭು ಹೆಸರು; ಸಿಎಂ ಸಿದ್ದರಾಮಯ್ಯ ಘೋಷಣೆ
ಸಿದ್ದರಾಮಯ್ಯ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 12, 2024 | 4:23 PM

ಶಿವಮೊಗ್ಗ, (ಜನವರಿ 12): ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ (Shivamogga Freedom Park) ಅಲ್ಲಮ ಪ್ರಭು (Allama Prabhu) ಅವರ ಹೆಸರನ್ನು ಇಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿಂದು ನಡೆದ  ಕಾಂಗ್ರೆಸ್‌ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಿದ್ದರಾಮಯ್ಯ(Siddaramaiah), ಶಿವಮೊಗ್ಗದ ಫ್ರೀಡಂಪಾರ್ಕ್‌ಗೆ ಅಲ್ಲಮಪ್ರಭು ಹೆಸರಿಡುತ್ತೇವೆ. ಯಾಕಂದ್ರೆ, ಅಲ್ಲಮಪ್ರಭು ಅವರು ಶಿವಮೊಗ್ಗ ಜಿಲ್ಲೆಯವರೇ. ಅಲ್ಲದೇ ಅವರು ಅನುಭವ ಮಂಟಪದ ಅಧ್ಯಕ್ಷರಾಗಿದ್ದರು. ಹೀಗಾಗಿ ಶಿವಮೊಗ್ಗದ ಫ್ರೀಡಂಪಾರ್ಕ್‌ಗೆ ಅಲ್ಲಮಪ್ರಭುರವರ ಹೆಸರು ಸೂಕ್ತ ಎಂದು ಘೋಷಿಸಿದರು.

ಅಲ್ಲಮ ಪ್ರಭು ಒಬ್ಬ ಶ್ರೇಷ್ಠ ಕವಿಯಾಗಿದ್ದು, ಅವರು ಶಿವಮೊಗ್ಗ ಜಿಲ್ಲೆಯವರಾಗಿದ್ದಾರೆ. ನಮ್ಮ ನಾಡಿಗೆ ಅವರ ಕೊಡುಗೆ ಅಪಾರವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಅವರ ಆಶಯದಂತೆ ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಅವರ ಹೆಸರನ್ನು ಇಡುವುದು ಸೂಕ್ತ ಎಂದು ನಾನೂ ಸಹ ಭಾವಿಸಿದ್ದೇನೆ. ಹೀಗಾಗಿ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಎಂದು ನಾಮಕರಣ ಮಾಡಲು ನಾನು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಇದನ್ನೂ ಓದಿ: Yuvanidhi Scheme Launch: ಯುವ ನಿಧಿಗೆ ಶಿವಮೊಗ್ಗದಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ

ಮಧು ಬಂಗಾರಪ್ಪ ಮನವಿ

ಸಿಎಂ ಭಾಷಣಕ್ಕೂ ಮೊದಲು ಮಾತನಾಡಿ ಜಿಲ್ಲಾ ಉಸ್ತುವಾರಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, 12ನೇ ಶತಮಾನದಲ್ಲಿ ಒಬ್ಬ ಪ್ರಸಿದ್ಧ ಕವಿ, ಹೆಸರಾಂತ ತತ್ವಜ್ಞಾನಿಯಾಗಿದ್ದ ಅಲ್ಲಮ ಪ್ರಭುಗಳು ನಮ್ಮ ಶಿವಮೊಗ್ಗ ಜಿಲ್ಲೆಯವರು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ. ಹೀಗಾಗಿ ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಅವರ ಹೆಸರಿಡಬೇಕು ಎಂದು ವೇದಿಕೆ ಮೇಲಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು ಈ ವೇಳೆ ಬಿಜೆಪಿ ಶಾಸಕ ಚನ್ನಬಸಪ್ಪ ಆಕ್ಷೇಪ ವ್ಯಕ್ತಪಡಿಸಿದ್ದು, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಹೋರಾಟಗಾರ ಚಂದ್ರಶೇಖರ್ ಅಜಾದ್ ಹೆಸರಿಡಬೇಕು. ಈ ಹಿಂದೆಯೇ ಬಿಎಸ್‌ವೈ ಪ್ರಸ್ತಾಪಿಸಿದ್ದರು. ಹೀಗಾಗಿ ರಾಜ್ಯ ಸರ್ಕಾರ ಈ ಫ್ರೀಡಂ ಪಾರ್ಕ್‌ಗೆ ಚಂದ್ರಶೇಖರ್‌ ಅಜಾದ್ ಹೆಸರಿಡಿ ಎಂದರು. ಈ ವೇಳೆ ಬೇಡ ಬೇಡ ಎಂದು ಕಾರ್ಯಕ್ರಮದಲ್ಲಿ ನೆರೆದಿದ್ದ ಕಾರ್ಯಕರ್ತರು ಕೂಗಿದರು.

ಬಳಿಕ ಮಾತನಾಡಿದ ಸಿದ್ದರಾಮಯ್ಯ, ನಾನು ಈ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಶಿವಮೊಗ್ಗ ನಗರದಲ್ಲಿ ಈ ಫ್ರೀಡಂ ಪಾರ್ಕ್ ಮಾಡಿದ್ದೆ. ಶಾಸಕರಾದ ಚೆನ್ನಬಸಪ್ಪನವರೇ, ಅಲ್ಲಮ ಪ್ರಭು ನಿಮ್ಮ ಜಿಲ್ಲೆಯವರು. ನಿಮ್ಮ ಊರಿನವರು ಕಣ್ರೀ, ಈಗ ನೀವೇ ಹೇಳಿ ಈ ಫ್ರೀಡಂ ಪಾರ್ಕ್‌ಗೆ ಯಾರ ಹೆಸರಿಡಬೇಕು? ನನಗಂತೂ ಮಧು ಬಂಗಾರಪ್ಪ ಅವರು ಹೇಳಿದಂತೆ ಅಲ್ಲಮ ಪ್ರಭು ಅವರ ಹೆಸರನ್ನು ಇಡುವುದು ಸೂಕ್ತ ಎಂದು ಟಾಂಗ್ ಕೊಟ್ಟರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್  ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ