ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಅಂಗನವಾಡಿ ಸಹಾಯಕಿ ಸಾವು, ಸರ್ಕಾರದ ವಿರುದ್ದ ಸಿದ್ದರಾಮಯ್ಯ ಆಕ್ರೋಶ

ಅಂಗನವಾಡಿ ಸಹಾಯಕಿ ಸಾವಿನ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಟ್ವಿಟ್ ಮೂಲಕ ಸರ್ಕಾರದ ವಿರುದ್ಧ ಕೆಂಡಕಾರಿದ್ದಾರೆ. ನೀಲಮ್ಮ ಅವರ ಸಾವಿಗೆ ರಾಜ್ಯ ಬಿಜೆಪಿ ಸರ್ಕಾರದ ಹೊಣೆಗೇಡಿತನ ಕಾರಣ.

ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಅಂಗನವಾಡಿ ಸಹಾಯಕಿ ಸಾವು, ಸರ್ಕಾರದ ವಿರುದ್ದ ಸಿದ್ದರಾಮಯ್ಯ ಆಕ್ರೋಶ
ಸಿದ್ದರಾಮಯ್ಯ
Follow us
TV9 Web
| Updated By: ಆಯೇಷಾ ಬಾನು

Updated on:Jan 21, 2023 | 9:10 AM

ಶಿವಮೊಗ್ಗ: ಬೇಡಿಕೆಗಳ ಈಡೇರಿಕೆಗೆ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ಮಾಡಿ ಊರಿಗೆ ಮರಳಿದ ನಂತರ ಅಂಗನವಾಡಿ ಕಾರ್ಯಕರ್ತೆ- ಸಹಾಯಕಿಯಾಗಿದ್ದ ನೀಲಮ್ಮ ದಾನಪ್ಪಗೌಡ(58) ಮೃತಪಟ್ಟಿದ್ದಾರೆ. ಈ ಘಟನೆ ಸಂಬಂಧ ಟ್ವೀಟ್​​ ಮೂಲಕ ಸರ್ಕಾರದ ವಿರುದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ. ನೀಲಮ್ಮ ಸಾವಿಗೆ ರಾಜ್ಯ ಬಿಜೆಪಿ ಸರ್ಕಾರದ ಹೊಣೆಗೇಡಿತನ ಕಾರಣ ಎಂದು ಗುಡುಗಿದ್ದಾರೆ.

ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಇಡುಕ್ಕಿನ ಹೊಸಕೊಪ್ಪ ಗ್ರಾಮದ ಅಂಗನವಾಡಿ ಸಹಾಯಕಿ ನೀಲಮ್ಮ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾಗ ಅವರಿಗೆ ಅನಾರೋಗ್ಯ ಸಮಸ್ಯೆ ಎದುರಾಗಿತ್ತು. ಹೀಗಾಗಿ ಅವರು ತಮ್ಮ ಊರಿಗೆ ಮರಳಿದ್ದರು. ಆದ್ರೆ ಊರಿಗೆ ಹೋದ ಬಳಿಕ ಅವರ ಪ್ರಾಣ ಪಕ್ಷಿ ಹಾರಿಹೋಗಿದೆ. ಸದ್ಯ ಅಂಗನವಾಡಿ ಸಹಾಯಕಿ ಸಾವಿನ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಟ್ವಿಟ್ ಮೂಲಕ ಸರ್ಕಾರದ ವಿರುದ್ಧ ಕೆಂಡಕಾರಿದ್ದಾರೆ. ನೀಲಮ್ಮ ಅವರ ಸಾವಿಗೆ ರಾಜ್ಯ ಬಿಜೆಪಿ ಸರ್ಕಾರದ ಹೊಣೆಗೇಡಿತನ ಕಾರಣ. ಮೃತರ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಆಲಿಸುವ ಸೌಜನ್ಯವೂ ಸರ್ಕಾರಕ್ಕೆ ಇಲ್ಲ. ಆರುವ ದೀಪ ಜೋರಾಗಿ ಉರಿಯುತ್ತದೆಯಂತೆ. ಬಿಜೆಪಿ ಸರ್ಕಾರವೂ ಹಾಗೇ ಎಂದು ಟ್ವಿಟ್ ಮೂಲಕ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸಿಂದಗಿ ಕ್ಷೇತ್ರದ ಘೋಷಿತ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ಸೋಮಜಾಳ(54) ಹೃದಯಾಘಾತದಿಂದ ನಿಧನ

ಘಟನೆ ಹಿನ್ನೆಲೆ

ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸ್ವತಂತ್ರ ಸಂಘಟನೆಯಿಂದ ಬೆಂಗಳೂರಿನಲ್ಲಿ ನಡೆದ ಪ್ರತಿಭಟವೆಯಲ್ಲಿ ಪಾಲ್ಗೊಂಡು ಅನಾರೋಗ್ಯಕ್ಕೀಡಾಗಿ ಊರಿಗೆ ಮರಳಿದ್ದ ಶಿಕಾರಿಪುರ ತಾಲ್ಲೂಕಿನ ಇಡಕಿನ ಹೊಸಕೊಪ್ಪದ ಅಂಗನವಾಡಿ ಸಹಾಯಕಿ ನೀಲಮ್ಮ (58) ಶುಕ್ರವಾರ ಸಾವಿಗೀಡಾಗಿದ್ದಾರೆ.

‘ನೌಕರಿ ಕಾಯಂಗೊಳಿಸಬೇಕು. ನಮ್ಮನ್ನು ಶಿಕ್ಷಕಿಯರನ್ನಾಗಿ ಪರಿಗಣಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಘಟನೆಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಿಂದ ತೆರಳಿದ್ದ ನೀಲಮ್ಮ ಜನವರಿ 18 ರಂದು ಬೆಂಗಳೂರಿನಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ದಿಢೀರನೆ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಊರಿಗೆ ಕರೆತರಲಾಗಿತ್ತು. ಶಿಕಾರಿಪುರದಲ್ಲಿ ಅವರು ಸಾವಿಗೀಡಾಗಿದ್ದಾರೆ.

‘ನೀಲಮ್ಮಗೆ ಅಸ್ತಮಾ ಇದ್ದು, ಬೆಂಗಳೂರಿನ ಚಳಿಯಿಂದ ಅಸ್ವಸ್ಥರಾಗಿದ್ದರು. ಹೀಗಾಗಿ ಊರಿಗೆ ವಾಪಸ್ ತೆರಳಿದ್ದರು. ಅಲ್ಲಿ ಸಾವಿಗೀಡಾಗಿದ್ದಾರೆ’ ಎಂದು ಸಂಘಟನೆಯ ಶಿಕಾರಿಪುರದ ಪ್ರತಿನಿಧಿ ಭಾರತಿ ಟಿವಿ9ಗೆ ತಿಳಿಸಿದರು.

ಮಾಜಿ ಸಿಎಂ ಬಿಎಸ್ ವೈ ಅವರ,ಕ್ಷೇತ್ರದ ಅಂಗನವಾಡಿ ಕಾರ್ಯಕರ್ತೆಯು ಮೃತಪಟ್ಟಿದ್ದು ಸದ್ಯ ಕ್ಷೇತ್ರದಲ್ಲಿ ಬಹುದೊಡ್ಡ ಚರ್ಚೆ ನಡೆಯುತ್ತಿದೆ. ಮಾಜಿ ಸಿಎಂ ಬಿಎಸ್ ವೈ ಅವರು ಮೃತಳ ಕುಟುಂಬ ಕ್ಕೆ ಸೂಕ್ತ ಪರಿಹಾರ ಮತ್ತು ಬೆಂಗಳೂರಿನಲ್ಲಿ ನಡೆಯುತ್ತಿರುವ ಹೋರಾಟದತ್ತ ಗಮನಹರಿಸಬೇಕಿದೆ. ಈ ಸಾವಿನಿಂದ ಆದರೂ ಸರ್ಕಾರವು ಪಾಠ ಕಲೆತೂ ಹೋರಾಟಗಾರರ ಸಮಸ್ಯೆಗೆ ಸ್ಪಂಧಿಸಬೇಕಿದೆ.

ವರದಿ: ಬಸವರಾಜ್ ಯರಗಣವಿ, ಟಿವಿ9 ಶಿವಮೊಗ್ಗ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:01 am, Sat, 21 January 23