AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಗಂದೂರು ಸೇತುವೆಗೆ ”ಚೌಡೇಶ್ವರಿ ದೇವಿ” ಹೆಸರು ನಾಮಕರಣ: ನಿತಿನ್​ ಗಡ್ಕರಿ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಸಿಗಂದೂರು ಸೇತುವೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಿದರು. ಈ ಸೇತುವೆಯ ನಿರ್ಮಾಣದಿಂದ ಪ್ರಯಾಣ ಸುಲಭವಾಗಲಿದೆ ಎಂದು ಅವರು ಹೇಳಿದರು. ಸಿಗಂದೂರು ಸೇತುವೆಗೆ ಚೌಡೇಶ್ವರಿ ದೇವಿ ಹೆಸರು ನಾಮಕರಣ ಮಾಡಿದರು. ಅಲ್ಲದೆ, ರಾಜ್ಯದಲ್ಲಿ ನಡೆಯುತ್ತಿರುವ ಇತರ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳ ಬಗ್ಗೆಯೂ ಮಾಹಿತಿ ನೀಡಿದರು.

ಸಿಗಂದೂರು ಸೇತುವೆಗೆ ''ಚೌಡೇಶ್ವರಿ ದೇವಿ ಹೆಸರು ನಾಮಕರಣ: ನಿತಿನ್​ ಗಡ್ಕರಿ
ಸಿಗಂದೂರು ಚೌಡೇಶ್ವರಿ, ಸಿಗಂದೂರು ಸೇತುವೆ
Basavaraj Yaraganavi
| Updated By: ವಿವೇಕ ಬಿರಾದಾರ|

Updated on:Jul 14, 2025 | 4:46 PM

Share

ಶಿವಮೊಗ್ಗ, ಜುಲೈ 14: ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ನಿರ್ಮಾಣ ಮಾಡಲಾಗಿರುವ ಸೇತುವೆಯನ್ನು (Sigandur Bridge) ಕೇಂದ್ರ ಸಚಿವ ನಿತಿನ್​ ಗಡ್ಕರಿ (Nitin Gadkari) ಅವರು ಸೋಮವಾರ ಲೋಕಾರ್ಪಣೆಗೊಳಿಸಿದರು. ಬಳಿಕ, ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವ ನಿತಿನ್​ ಗಡ್ಕರಿ, ಸೇತುವೆಗೆ ಸಿಗಂದೂರು ಚೌಡೇಶ್ವರಿ ದೇವಿ (Sigandur Chowdeshwari Devi) ಸೇತುವೆ ಎಂದು ನಾಮಕರಣ ಮಾಡಲಾಗಿದೆ ಎಂದು ಘೋಷಿಸಿದರು.

ಸಾಗರ ಪಟ್ಟಣದ ನೆಹರು ಮೈದಾನದಲ್ಲಿ ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ದೇಶಿಸಿ ಸಚಿವ ನಿತಿನ್​ ಗಡ್ಕರಿ ಮಾತನಾಡಿದರು. ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ನಿರ್ಮಾಣಕ್ಕೆ ನಾನೇ ಭೂಮಿಪೂಜೆ ಮಾಡಿದ್ದೆ. ಇದೀಗ, ನಾನೇ ಉದ್ಘಾಟನೆ ಮಾಡಿದ್ದು ನನ್ನ ಸೌಭಾಗ್ಯ ಎಂದು ಹೇಳಿದರು.

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನೂತನ ಹೆದ್ದಾರಿ ನಿರ್ಮಾಣ ಮಾಡಿದ್ದೇವೆ. ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಶಿವಮೊಗ್ಗ-ತುಮಕೂರು ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಹುಬ್ಬಳ್ಳಿ-ಧಾರವಾಡ ಹೆದ್ದಾರಿ ಕಾಮಗಾರಿ ಶೀಘ್ರದಲ್ಲೇ ಪೂರ್ಣ ಆಗಲಿದೆ ಎಂದು ತಿಳಿಸಿದರು.

ಇದನ್ನೂ ಓದಿ
Image
ರಾಜ್ಯದ ಅತಿ ಉದ್ದದ ಸಿಗಂದೂರು ತೂಗುಸೇತುವೆ ಲೋಕಾರ್ಪಣೆಗೊಳಿಸಿದ ಸಚಿವ ಗಡ್ಕರಿ
Image
ಸಿಗಂದೂರು ಸೇತುವೆಯ ವಿಶೇಷತೆಗಳೇನು? ಕೇಬಲ್ ಬ್ರಿಡ್ಜ್​ನಿಂದ ಹಲವು ಪ್ರಯೋಜನ
Image
ಸಿಂಗಾರಗೊಂಡು ಕಂಗೊಳಿಸುತ್ತಿದೆ ಸಿಗಂದೂರು ಸೇತುವೆ, ವಿಡಿಯೋ ಇಲ್ಲಿದೆ
Image
ಸಿಗಂದೂರು ಸೇತುವೆ ಲೋಕಾರ್ಪಣೆ ಕ್ಷಣಗಣನೆ: ಅಚ್ಚರಿ ಮೂಡಿಸಿದ ಸಿಎಂ ಪತ್ರ

5000 ಕೋಟಿ ರೂ. ವೆಚ್ಚದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಗುರಿ ಹೊಂದಿದ್ದೇವೆ. 1300 ಸಾವಿರ ಕೋಟಿ ರೂ. ವೆಚ್ಚದಲ್ಲಿ ಹಾಸನದಿಂದ ರಾಯಚೂರಿಗೆ ಸಂಪರ್ಕ ಕಲ್ಪಿಸುವ ನಾಲ್ಕು ಲೈನ್​ ಹೆದ್ದಾರಿ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಇದರಿಂದ ಪ್ರಯಾಣದ ಸಮಯ ಅರ್ಧದಷ್ಟು ಕಡಿಮೆಯಾಗಲಿದೆ. ಬೆಂಗಳೂರು-ಚೆನೈ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ ಎಂದರು.

ಇದನ್ನೂ ಓದಿ: ನಿಮ್ಮ ಅಧ್ಯಕ್ಷತೆಯಲ್ಲೇ ಕಾರ್ಯಕ್ರಮ ಆಗಬೇಕು: ಸಿಗಂದೂರು ಸೇತುವೆ ಉದ್ಘಾಟನೆಗೆ ಸಿದ್ದರಾಮಯ್ಯಗೆ 2 ಬಾರಿ ಆಹ್ವಾನಿಸಿದ್ದ ಗಡ್ಕರಿ

ಬೆಂಗಳೂರಿನಲ್ಲಿ ಟ್ರಾಫಿಕ್​ ಸಮಸ್ಯೆ ನಿವಾರಣೆಗೆ 15 ಸಾವಿರ ಕೋಟಿ ರೂ. ವೆಚ್ಚದಲ್ಲಿ ರಿಂಗ್ ರೋಡ್ ಕಾಮಗಾರಿ ನಡೆಯುತ್ತಿದೆ. ಶೇ 40 ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಶೀಘ್ರದಲ್ಲೇ ಉಳಿದ ಕಾಮಗಾರಿಯೂ ಪೂರ್ಣಗೊಳ್ಳಲಿದೆ ಎಂದರು.

ಶಿವಮೊಗ್ಗ-ತುಮಕೂರು ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಹುಬ್ಬಳ್ಳಿಯಿಂದ ಧಾರವಾಡಕ್ಕೆ ಪ್ರಯಾಣಿಸಲು ಸದ್ಯ 40 ನಿಮಿಷ ಸಮಯ ಬೇಕಾಗುತ್ತದೆ. ಹೆದ್ದಾರಿ ಕಾಮಗಾರಿ ಪೂರ್ಣಗೊಂಡ ಬಳಿಕ ಕೇವಲ 20 ನಿಮಿಷದಲ್ಲಿ ಹುಬ್ಬಳ್ಳಿಯಿಂದ ಧಾರವಾಡಕ್ಕೆ ತಲುಪಬಹುದು. ಶೀಘ್ರದಲ್ಲಿ ಈ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 4:44 pm, Mon, 14 July 25