Sigandur Bridge: ಸಿಗಂದೂರು ಸೇತುವೆ ವಿಶೇಷತೆಗಳೇನು? ಕೇಬಲ್ ಬ್ರಿಡ್ಜ್ನಿಂದ ಇದೆ ಹಲವು ಪ್ರಯೋಜನ
ಸಿಗಂದೂರು ಸೇತುವೆ ವಿಶೇಷತೆಗಳು: ಶಿವಮೊಗ್ಗದ ಸಾಗರ ತಾಲೂಕಿನಲ್ಲಿ ನಿರ್ಮಾಣಗೊಂಡ 2.1 ಕಿಲೋಮೀಟರ್ ಉದ್ದದ ಸಿಗಂದೂರು ಸೇತುವೆ ಇಂದು ಲೋಕಾರ್ಪಣೆಯಾಗುತ್ತಿದೆ. ಇದು ದೇಶದ ಎರಡನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆಯಾಗಿದ್ದು, ಸಾಗರ ಮತ್ತು ಸಿಗಂದೂರು ನಡುವಿನ ಪ್ರಯಾಣದ ಅವಧಿಯನ್ನು ಗಣನೀಯವಾಗಿ ಕಡಿಮೆ ಮಾಡಲಿದೆ. ಸೇತುವೆಯ ವಿಶೇಷತೆಗಳ ಬಗ್ಗೆ ಮಾಹಿತಿ ಇಲ್ಲಿದೆ.

ಸಿಗಂದೂರು ಸೇತುವೆ
ಶಿವಮೊಗ್ಗ, ಜುಲೈ 14: ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ ತಾಲೂಕಿನಲ್ಲಿ ಶರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಅಂಬಾರಗೋಡ್ಲು – ಕಳಸವಳ್ಳಿ – ಸಿಗಂಧೂರು ಸಂಪರ್ಕಿಸುವ ಸಿಗಂದೂರು ಸೇತುವೆ (Sigandur Bridge) ಇಂದು ಲೋಕಾರ್ಪಣೆಯಾಗುತ್ತಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಸೇತುವೆಯನ್ನು ಲೋಕಾರ್ಪಣೆಗೊಳಿಸುತ್ತಿದ್ದಾರೆ. ಸುಮಾರು 2.1 ಕಿಲೋಮೀಟರ್ ಉದ್ದವಿರುವ ಈ ಸೇತುವೆ ದೇಶದ ಎರನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆ ಆಗಿದೆ.
ಸಿಂಗದೂರು ಸೇತುವೆಯ ವಿಶೇಷತೆಗಳು ಮತ್ತು ಪ್ರಯೋಜನಗಳು
- 2.1 ಕಿಲೋಮೀಟರ್ ಉದ್ದ ಹಾಗೂ 16 ಮೀಟರ್ ಅಗಲ ಇದ್ದು, ಇದು ದೇಶದ ಎರಡನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆ.
- ಕರ್ನಾಟಕದ ಅತಿ ದೊಡ್ಡ ಒಳನಾಡು ಸೇತುವೆಯೂ ಆಗಿದೆ.
- ಈ ಸೇತುವೆಯನ್ನು ಶರಾವತಿ ನದಿಯ ಭೋರ್ಗರೆವ ಪ್ರವಾಹವನ್ನು ತಡೆದುಕೊಳ್ಳುವ ಸಾಮರ್ಥ್ಯದೊಂದಿಗೆ ವಿನ್ಯಾಸಗೊಳಿಸಲಾಗಿದೆ.
- 423 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾದ ಸೇತುವೆ ಇದಾಗಿದೆ.
- 2018 ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಸಿಗಂದೂರು ಸೇತುವೆ ಕಾಮಗಾರಿಗೆ ಚಾಲನೆ ನೀಡಿದ್ದರು.
- 2020ರ ಡಿಸೆಂಬರ್‌ನಲ್ಲಿ ಕಾಮಗಾರಿ ಪ್ರಾರಂಭವಾಗಿತ್ತು. ಕೊರೊನಾ ಹಾಗೂ ಹೆಚ್ಚಿನ ಪ್ರಮಾಣದ ಹಿನ್ನೀರಿನ ಕಾರಣ
- ಆರಂಭದ ಎರಡು ವರ್ಷ ನಿಧಾನವಾಗಿ ಸಾಗಿದ ಕಾಮಗಾರಿ ಕೆಲಸ ನಂತರ ವೇಗ ಪಡೆದಿತ್ತು.
- ಸಿಗಂದೂರು ಸೇತುವೆಯು ಸಾಗರ ಮತ್ತು ಸಿಗಂದೂರು ನಡುವಿನ ಪ್ರಯಾಣದ ಅವಧಿಯನ್ನು ಸುಮಾರು 2 ಗಂಟೆಗಷ್ಟು ಕಡಿಮೆ ಮಾಡಲಿದೆ.
- ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಭಕ್ತರು ತೆರಳಲು ನೆರವಾಗಲಿದೆ. ಪ್ರಾದೇಶಿಕ ಪ್ರವಾಸೋದ್ಯಮ ಮತ್ತು ವಾಣಿಜ್ಯ ವ್ಯವಹಾರವನ್ನು ಉತ್ತೇಜಿಸಲಿದೆ.
- ಈ ಸೇತುವೆಯು ಕರ್ನಾಟಕದ ಎರಡು ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ಕೊಲ್ಲೂರು ಮತ್ತು ಸಿಗಂದೂರು ದೇವಸ್ಥಾನಗಳನ್ನು ಸಂಪರ್ಕಿಸುವ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಲಿದೆ.
- ಈ ಸೇತುವೆಯು ಸಾಗರ ತಾಲೂಕಿನ ಅಂಬಾರಗೋಡ್ಲು ಮತ್ತು ಕಳಸವಳ್ಳಿ (ತುಮರಿ) ಗ್ರಾಮಗಳನ್ನು ಸಂಪರ್ಕಿಸಲಿದೆ.
- ಸೇತುವೆಯು, ಆರು ದಶಕಗಳಿಂದ ಸಂಚಾರದ ಮೂಲಭೂತ ಸೌಕರ್ಯಗಳನ್ನೇ ಕಾಣದೆ ಬದುಕುತ್ತಿದ್ದ ಶರಾವತಿ ಹಿನ್ನೀರು ಭಾಗದ 40ಕ್ಕೂ ಹೆಚ್ಚು ಗ್ರಾಮಗಳ ಜನರಿಗೆ ಇತರ ಊರುಗಳನ್ನು ಸಂಪರ್ಕಿಸುವ ನಿಟ್ಟಿನಲ್ಲಿ ಮಹತ್ವದ್ದಾಗಿದೆ.
- ಸೇತುವೆ ನಿರ್ಮಾಣಕ್ಕೆ ಸುಮಾರು 60 ವರ್ಷಗಳಿಂದ ಹೋರಾಟ ನಡೆದಿತ್ತು. ಅಂತಿಮವಾಗಿ ಇದೀಗ ನನಸಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:52 am, Mon, 14 July 25




