AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ಉಳವಿ ಗ್ರಾಮದಲ್ಲಿ ಅನಿಷ್ಟ ಪದ್ಧತಿ: ರಸ್ತೆ ಕಾಮಗಾರಿ ಕಳಪೆ ಎಂದು ದೂರು ನೀಡಿದ ಗ್ರಾಮಸ್ಥರಿಗೆ 5 ವರ್ಷದಿಂದ ಬಹಿಷ್ಕಾರ

ಮಾಜಿ ಸಿಎಂ ದಿ. ಎಸ್ ಬಂಗಾರಪ್ಪ ತವರೂರಲ್ಲಿ ಅನಿಷ್ಟ ಪದ್ದತಿ ಇನ್ನೂ ಜೀವಂತವಾಗಿದೆ ಎಂದರೆ ನಂಬುತ್ತೀರಾ? ನಂಬಲೇಬೇಕು. ಇಂದಿನ ಹೈಟೆಕ್ ಯುಗದಲ್ಲೂ ಗ್ರಾಮಸ್ಥರಿಗೆ ಬಹಿಷ್ಕಾರ ಹಾಕಲಾಗಿದೆ. ಅದೂ ಕೂಡ ಸಮಸ್ಯೆಗಳ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ! ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತವರೂರಿನಲ್ಲಿ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ.

ಶಿವಮೊಗ್ಗ ಉಳವಿ ಗ್ರಾಮದಲ್ಲಿ ಅನಿಷ್ಟ ಪದ್ಧತಿ: ರಸ್ತೆ ಕಾಮಗಾರಿ ಕಳಪೆ ಎಂದು ದೂರು ನೀಡಿದ ಗ್ರಾಮಸ್ಥರಿಗೆ 5 ವರ್ಷದಿಂದ ಬಹಿಷ್ಕಾರ
ಸಾಮಾಜಿಕ ಬಹಿಷ್ಕಾರ ಪ್ರಕರಣImage Credit source: tv9
ಬಸವರಾಜ್​ ಯರಗಣವಿ
| Edited By: |

Updated on: Feb 13, 2026 | 9:20 AM

Share

ಶಿವಮೊಗ್ಗ, ಫೆಬ್ರವರಿ 13: ಇದು ನಾಗರೀಕ ಸಮಾಜವೇ ತಲೆ ತಗ್ಗಿಸುವ ವಿಚಾರ. ಮನೆಯನ್ನೆಲ್ಲಾ ಕಿತ್ತು ಬಿಸಾಡಿದ್ದಾರೆ. ಊರಲ್ಲಿ ಯಾವ ಕಾರ್ಯಕ್ರಮಕ್ಕೂ ಇವರು ಹೋಗುವಂತಿಲ್ಲ. ಯಾರ ಬಳಿಯೂ ಕೆಲಸಕ್ಕೆ ಹೋಗಲು ಆಗ್ತಿಲ್ಲ. ಇದಕ್ಕೆ ಕಾರಣವೇ ಸಾಮಾಜಿಕ ಬಹಿಷ್ಕಾರ. ಹಳ್ಳಿ ರಾಜಕೀಯ ದಿಲ್ಲಿಯನ್ನೂ ಮೀರಿಸುತ್ತೆ ಎನ್ನುತ್ತಾರೆ. ಇದಕ್ಕೆ ಜ್ವಲಂತ ಉದಾಹರಣೆಯಾಗಿದೆ ಶಿವಮೊಗ್ಗ (Shivamogga) ಜಿಲ್ಲೆ. ಇಲ್ಲಿ ನಡೆಯುತ್ತಿರುವ ರಾಜಕೀಯ ಮೇಲಾಟದಿಂದ ಕುಟುಂಬಗಳು ಬೀದಿಗೆ ಬಿದ್ದಿವೆ. ಸೊರಬ ತಾಲೂಕಿನ ಅರಣ್ಯಭಾಗದಲ್ಲಿರುವ ಉಳವಿ ಗ್ರಾಮದಲ್ಲಿ ಮೂರು ಬಾರಿ ರಸ್ತೆ ಕಾಮಗಾರಿ ಆಗಿತ್ತು. ಅದು ಕಳಪೆಯಾಗಿದೆ ಎಂದು ಚಂದ್ರಪ್ಪ ಎಂಬವರು ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಇಡೀ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿ, 25 ಸಾವಿರ ರೂ. ದಂಡ ವಿಧಿಸಲಾಗಿದೆ. ಈ ಬಗ್ಗೆ ಸೊರಬ ತಹಶೀಲ್ದಾರ್ ಸೇರಿದಂತೆ ಪೊಲೀಸರು, ಸಮಾಜ ಕಲ್ಯಾಣ ಅಧಿಕಾರಿಗಳಿಗೆ ದೂರು ನೀಡಿದರೂ ಏನೂ ಪ್ರಯೋಜನವಾಗಿಲ್ಲ.

ಇದು ಒಬ್ಬಿಬ್ಬರ ಕಥೆಯಲ್ಲ. ಗ್ರಾಮದಲ್ಲಿ ಬಹಿಷ್ಕಾರ ಮಾಡಿರುವುದು ಗ್ರಾಮ ಸಮಿತಿ. ಗ್ರಾಮ ಸಮಿತಿಯ ತೀರ್ಮಾನ ಒಪ್ಪದಿದ್ರೆ, ಬಹಿಷ್ಕಾರ ಹಾಕುತ್ತಾರೆ. ಬಹಿಷ್ಕಾರ ಹಾಕಿದ ಕುಟುಂಬದ ಜೊತೆ ಮಾತನಾಡಿದವರಿಗೂ 5 ಸಾವಿರ ದಂಡ ವಿಧಿಸುತ್ತಾರೆ. ಈ ಹಿನ್ನಲೆಯಲ್ಲಿ ಬಹಿಷ್ಕಾರ ಹಾಕಿದ ಕುಟುಂಬದ ಜೊತೆ ಗ್ರಾಮಸ್ಥರು ಭಯದಿಂದ ದೂರ ಇರುತ್ತಾರೆ ಎನ್ನಲಾಗಿದೆ. ಮಾಜಿ ಸಿಎಂ ದಿ. ಎಸ್ ಬಂಗಾರಪ್ಪ ಮತ್ತು ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪರ ತವರೂರಿನಲ್ಲೇ ಈ ರೀತಿ ಅನ್ಯಾಯ ನಡೆದಿದೆ. ಸೊರಬ ತಾಲೂಕಿನ ಗುಡವಿ, ದೂಗುರು, ಮಳಲಿ ಗದ್ದೆ, ಕುದುರೆ ಗಣಿ, ಚಿಮ್ಮನೂರು, ಉಳವಿ ಗ್ರಾಮದಲ್ಲಿ ಈ ಅನಿಷ್ಟ ಪದ್ಧತಿಗೆ ಜನ ಹೈರಾಣಾಗಿದ್ದಾರೆ.

ಗ್ರಾಮ ಸಭೆಗಳಲ್ಲಿ ಸಮಸ್ಯೆಗಳ ಬಗ್ಗೆ ಪ್ರಶ್ನಿಸುವಂತಿಲ್ಲ!

ಗ್ರಾಮ ಸಭೆಗಳಲ್ಲಿ ಸಮಸ್ಯೆಗಳ ಬಗ್ಗೆ ಪ್ರಶ್ನಿಸಿದ್ರೆ, ಅಂತಹ ಕುಟುಂಬಗಳನ್ನು ಗುರಿಯಾಗಿಸಲಾಗುತ್ತದೆ. ಜೀವನ ನಿರ್ವಹಣೆಗೆ ಅಂಗಡಿಗಳಲ್ಲಿ ಧವಸ-ಧಾನ್ಯ ನೀಡುತ್ತಿಲ್ಲ. ಶಾಲಾ-ಕಾಲೇಜಿಗೆ ತೆರಳಲು ಆಟೋಗಳಲ್ಲಿ ಪ್ರವೇಶ ನೀಡುತ್ತಿಲ್ಲ. ಕೂಡಲೇ ಜಿಲ್ಲಾಡಳಿತ ಗ್ರಾಮ ಸಮಿತಿ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ. ಬಹಿಷ್ಕಾರಕ್ಕೆ ಮುಕ್ತಿ ಹಾಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಸವರಾಜ್​ ಯರಗಣವಿ
ಬಸವರಾಜ್​ ಯರಗಣವಿ

ಬಸವರಾಜ್ ಯರಗಣವಿಯವರು ಮೂಲತಃ ಧಾರವಾಡ ಜಿಲ್ಲೆಯವರು. ಇವರು ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ವರದಿಗಾರರಾಗಿ 2008ರ ಏಪ್ರಿಲ್ ನಿಂದ ವೃತ್ತಿ ಆರಂಭಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 3 ವರ್ಷ, ನಂತರ ಹಾವೇರಿ ಜಿಲ್ಲೆಯಲ್ಲಿ 3 ವರ್ಷ ವರದಿಗಾರಿಕೆಯ ಕೆಲಸ ನಿರ್ವಹಿಸಿದ್ದಾರೆ. ಸಧ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಟಿವಿ9 ಕನ್ನಡ ಸುದ್ದಿ ವಾಹಿನಿಯ ಹಿರಿಯ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯ ರಾಜಕೀಯ, ಅಪರಾಧ, ಮಹತ್ವದ ಬೆಳವಣಿಗೆ ಹಾಗೂ ಮಾನವೀಯ ಸುದ್ದಿಗಳನ್ನು ವರದಿ ಮಾಡಿರುವ ಅನುಭವವಿದೆ.

Read More
Live: ಬೆಂಗಳೂರಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಮೋದಿ ಚಾಲನೆ
Live: ಬೆಂಗಳೂರಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಮೋದಿ ಚಾಲನೆ
ನಮ್ಮ ಮೆಟ್ರೋ ಗುಲಾಬಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
ನಮ್ಮ ಮೆಟ್ರೋ ಗುಲಾಬಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
ಗೆಳೆಯರ ಗಲಾಟೆ: ಕುನ್ನಿ ಎಂದ ಗಗನ್​​ಗೆ ಖಡಕ್ ವಾರ್ನಿಂಗ್ ಕೊಟ್ಟ ತಾಂಡವ್
ಗೆಳೆಯರ ಗಲಾಟೆ: ಕುನ್ನಿ ಎಂದ ಗಗನ್​​ಗೆ ಖಡಕ್ ವಾರ್ನಿಂಗ್ ಕೊಟ್ಟ ತಾಂಡವ್
ಪ್ರಧಾನಿ ಮೋದಿಯಿಂದ ಪಿಂಕ್ ಲೈನ್ ಮೆಟ್ರೊ ಉದ್ಘಾಟನೆ ನೇರಪ್ರಸಾರ
ಪ್ರಧಾನಿ ಮೋದಿಯಿಂದ ಪಿಂಕ್ ಲೈನ್ ಮೆಟ್ರೊ ಉದ್ಘಾಟನೆ ನೇರಪ್ರಸಾರ
ನಾಗ ಚೌತಿ ಹಬ್ಬದ ದಿನವೇ ದೇವಾಲಯದಲ್ಲಿ ಪ್ರತ್ಯಕ್ಷವಾದ ಹಾವು
ನಾಗ ಚೌತಿ ಹಬ್ಬದ ದಿನವೇ ದೇವಾಲಯದಲ್ಲಿ ಪ್ರತ್ಯಕ್ಷವಾದ ಹಾವು
ಬೆಂಗಳೂರು: ಮಾರಕಾಸ್ತ್ರಗಳಿಂದ ದಾಳಿ ನಡೆಸಿ ರಿಯಲ್ ಎಸ್ಟೇಟ್ ಉದ್ಯಮಿಯ ಕೊಲೆ
ಬೆಂಗಳೂರು: ಮಾರಕಾಸ್ತ್ರಗಳಿಂದ ದಾಳಿ ನಡೆಸಿ ರಿಯಲ್ ಎಸ್ಟೇಟ್ ಉದ್ಯಮಿಯ ಕೊಲೆ
ಮೆಟ್ರೋಗೆ ಅನುದಾನ ಸಮರ: ತೇಜಸ್ವಿ ಸೂರ್ಯ ಆರೋಪಕ್ಕೆ ಕೃಷ್ಣ ಭೈರೇಗೌಡ ಕೌಂಟರ್​
ಮೆಟ್ರೋಗೆ ಅನುದಾನ ಸಮರ: ತೇಜಸ್ವಿ ಸೂರ್ಯ ಆರೋಪಕ್ಕೆ ಕೃಷ್ಣ ಭೈರೇಗೌಡ ಕೌಂಟರ್​
ಪ್ರಶಾಂತಿ ಕುಟೀರ ಸುವರ್ಣ ಮಹೋತ್ಸವದಲ್ಲಿ ಮೋದಿ ಭಾಗಿ ನೇರಪ್ರಸಾರ
ಪ್ರಶಾಂತಿ ಕುಟೀರ ಸುವರ್ಣ ಮಹೋತ್ಸವದಲ್ಲಿ ಮೋದಿ ಭಾಗಿ ನೇರಪ್ರಸಾರ
ಮೋದಿ ಸಂಚರಿಸುವಲ್ಲೆಲ್ಲ ಕೈ-ಕಮಲ ಕಾರ್ಯಕರ್ತರ ಫ್ಲೆಕ್ಸ್​ಗಳು ಝಗಮಗ!
ಮೋದಿ ಸಂಚರಿಸುವಲ್ಲೆಲ್ಲ ಕೈ-ಕಮಲ ಕಾರ್ಯಕರ್ತರ ಫ್ಲೆಕ್ಸ್​ಗಳು ಝಗಮಗ!
ಲಾಭ ಪಡೆಯಲು ಕಳ್ಳಾಟ ಆಡಿದ್ರಾ ಆಸಿಯಾ? ಸೌಂದರ್ಯಾ ಛೀಮಾರಿ
ಲಾಭ ಪಡೆಯಲು ಕಳ್ಳಾಟ ಆಡಿದ್ರಾ ಆಸಿಯಾ? ಸೌಂದರ್ಯಾ ಛೀಮಾರಿ