AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಮದುವೆಗೂ ಮುನ್ನವೇ ಗರ್ಭಿಣಿಯಾದ ಮಗಳು, ಹೀನ ಕೃತ್ಯ ಎಸಗಿದ ತಂದೆ

ಸೊರಬ ತಾಲೂಕಿನ ಮಳವಳ್ಳಿ ಗ್ರಾಮದಲ್ಲಿ ಮದುವೆಗೂ ಮುನ್ನ ಗರ್ಭಿಣಿಯಾದ ಮಗಳನ್ನು ತಂದೆ ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕೊಲ್ಲಲು ಯತ್ನಿಸಿದ ತಂದೆ ಧರ್ಮನಾಯ್ಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಗಳು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಸೊರಬ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ: ಮದುವೆಗೂ ಮುನ್ನವೇ ಗರ್ಭಿಣಿಯಾದ ಮಗಳು, ಹೀನ ಕೃತ್ಯ ಎಸಗಿದ ತಂದೆ
ಆರೋಪಿ ಧರ್ಮನಾಯ್ಕ್
Basavaraj Yaraganavi
| Edited By: |

Updated on: Jun 29, 2025 | 7:38 PM

Share

ಶಿವಮೊಗ್ಗ, ಜೂನ್​ 28: ಮದುವೆಗೂ ಮುನ್ನವೇ ಗರ್ಭಿಣಿಯಾದ ಮಗಳನ್ನು ತಂದೆ ಕೊಲೆ ಮಾಡಲು ಯತ್ನಿಸಿರುವ ಘಟನೆ ಸೊರಬ (Soraba) ತಾಲೂಕಿನ ಮಳವಳ್ಳಿ ಗ್ರಾಮದಲ್ಲಿ ನಡೆದಿದೆ. ಮಗಳನ್ನು ಕೊಲೆ ಮಾಡಲು ಯತ್ನಿಸಿದ ತಂದೆ ಧರ್ಮನಾಯ್ಕ್​ನನ್ನು ಸೊರಬ ಪೊಲೀಸರು ಬಂಧಿಸಿದ್ದಾರೆ. ಮಳವಳ್ಳಿ ಗ್ರಾಮದ ನಿವಾಸಿಯಾದ ಆರೋಪಿ ಧರ್ಮನಾಯ್ಕ್​ಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ದೊಡ್ಡ ಮಗಳ ಮದುವೆಯನ್ನು ಅದ್ಧೂರಿಯಾಗಿ ಮಾಡಬೇಕೆಂದು ಕನಸು ಕಂಡಿದ್ದ ಧರ್ಮನಾಯ್ಕ್ ಈ ಸಲುವಾಗಿ ಹಗಲು ರಾತ್ರಿ ಕಷ್ಟಪಟ್ಟು ದುಡಿಯುತ್ತಿದ್ದನು. ಆದರೆ, ಮಗಳು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದಾಳೆ.

ಈ ವಿಷಯ ತಿಳಿದು ಧರ್ಮನಾಯ್ಕ್ ಆಘಾತಗೊಂಡಿದ್ದಾನೆ. ಆಕಾಶವೇ ಕಳಚಿ ಬಿದ್ದಂತಾಗಿದೆ. ಈ ವಿಚಾರ ಊರಿನವರಿಗೆ ಗೊತ್ತಾದರೆ ತಾನು ಮುಖ ಎತ್ತಿಕೊಂಡು ಓಡಾಡುವುದು ಹೇಗೆ ಎಂಬ ಪ್ರಶ್ನೆ ಧರ್ಮನಾಯ್ಕ್​ಗೆ ಕಾಡಿದೆ. ನನ್ನ ಮಾನ, ಮರ್ಯಾದೆ ಹೋಗುತ್ತದೆ ಎಂದು ಧರ್ಮನಾಯ್ಕ್ ಚಿಂತೆಗೆ ಈಡಾಗಿದ್ದಾನೆ.

ಬಳಿಕ, ಧರ್ಮನಾಯ್ಕ್ ಆಸ್ಪತ್ರೆಗೆ ಹೋಗೋಣವೆಂದು ಜೂ. 27 ರಂದು ಮಗಳು ಮತ್ತು ಪತ್ನಿಯನ್ನು ಕರೆದುಕೊಂಡು ಉಳವಿ ಸಮೀಪದ ಕಣ್ಣೂರು ಕಾಡಿನೊಳಗೆ ಕರೆದುಕೊಂಡು ಹೋಗಿದ್ದಾನೆ. ಕಾಡಿನಲ್ಲಿ ಧರ್ಮನಾಯ್ಕ್ ಮಗಳ ಕುತ್ತಿಯನ್ನು ಹಗ್ಗದಿಂದ ಬಿಗಿದು ಕೊಲೆ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಪತ್ನಿ, ಮಗಳನ್ನು ಸಾಯಿಸಬೇಡಿ ಅಂತ ಪತಿ ಧರ್ಮನಾಯ್ಕ್ ಬಳಿ ಬೇಡಿಕೊಂಡರೂ ಮಾತು ಕೇಳದೇ ಕೊಲೆ ಮಾಡಲು ಯತ್ನಿಸಿದ್ದಾನೆ.

ಇದನ್ನೂ ಓದಿ
Image
ಡಿಕೆ ಶಿವಕುಮಾರ್ ಭಾರತೀಯ ಸಂಸ್ಕೃತಿಯನ್ನು ಪ್ರತಿನಿಧಿಸುತ್ತಾರೆ: ಈಶ್ವರಪ್ಪ
Image
ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆಗೆ ಮುಹೂರ್ತ ಫಿಕ್ಸ್: ಈಶ್ವರಪ್ಪ ಸಂಚಲನ
Image
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
Image
ಕ್ರಾಂತಿವೀರ ಬ್ರಿಗೇಡ್: ಈಶ್ವರಪ್ಪ ನೇತೃತ್ವದಲ್ಲಿ ಹೊಸ ಸಂಘಟನೆ!

ಈ ವೇಳೆ ಯುವತಿ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಆಗ, ಧರ್ಮನಾಯ್ಕ್ ಮಗಳು ಸತ್ತು ಹೋದಳು ಅಂತ ಭಾವಿಸಿ ಪತ್ನಿಯನ್ನು ಕರೆದುಕೊಂಡು ವಾಪಸ್ ಮನೆಗೆ ಹೋಗಿದ್ದಾನೆ. ಆದರೆ, ಸ್ವಲ್ಪ ಹೊತ್ತಿನ ಬಳಿಕ ಯುವತಿಗೆ ಎಚ್ಚರವಾಗಿದೆ. ಬಳಿಕ ಸ್ಥಳೀಯರ ಸಹಾಯದಿಂದ ಯುವತಿ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾಳೆ.

ಲವ್ವಿನಲ್ಲಿ ಬಿದ್ದಿದ್ದ ಯುವತಿ

ಯುವತಿ ತನ್ನ ಸಂಬಂಧಿಯಾದ ಓರ್ವ ಯುವಕನನ್ನು ಪ್ರೀತಿಸುತ್ತಿದ್ದಾಳೆ ಎಂದು ತಿಳಿದುಬಂದಿದೆ. ಇದರಿಂದ ಯುವತಿ ಗರ್ಭಿಣಿಯಾಗಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಮಗಳನ್ನು ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಧರ್ಮನಾಯ್ಕ್​ ಜೈಲು ಸೇರಿದ್ದಾನೆ. ಇತ್ತ ತಾಯಿ, ಮಗಳನ್ನು ಬದುಕಿಸಲು ಹೋರಾಟ ನಡೆಸುತ್ತಿದ್ದಾರೆ. ಯುವತಿ ಸ್ಥಿತಿ ಗಂಭೀರವಾಗಿದೆ.

ಧರ್ಮನಾಯ್ಕ್ ಪತ್ನಿ ಮತ್ತು ಎರಡನೇ ಮಗಳು ಪ್ರಕರಣಕ್ಕೆ ಟ್ವಿಸ್ಟ್​ ನೀಡಿದ್ದಾರೆ. ದೊಡ್ಡ ಮಗಳು ಮಾನಸಿಕ ಅಸ್ವಸ್ಥೆ, ಅವಳೇ ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದಳು ಎಂದು ಹೇಳುತ್ತಿದ್ದಾರೆ. ಆದರೆ, ಚಿಕಿತ್ಸೆ ಪಡೆಯುತ್ತಿರುವ ಯುವತಿ ತಂದೆ ವಿರುದ್ಧ ಕೊಲೆ ಯತ್ನ ದೂರು ನೀಡಿದ್ದಾರೆ. ಪೊಲೀಸರು ಧರ್ಮನಾಯ್ಕ್​ನನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ