ಶಿವಮೊಗ್ಗ, ಅ.03: ಈದ್-ಮಿಲಾದ್(Eid Milad) ಹಬ್ಬದಲ್ಲಿ ಆದ ಗಲಾಟೆಯ ಕುರಿತು ನಿನ್ನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಊಹಾಪೋಹಗಳು ಹಬ್ಬುತ್ತಿವೆ. ಬೇರೆ ಬೇರೆ ರಾಜ್ಯದ ವೀಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿದೆ. ಈ ರೀತಿ ಊಹಾಪೋಹಗಳನ್ನ ಹರಿಬಿಡುತ್ತಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಜೊತೆಗೆ ಈ ಕುರಿತು ಸಾರ್ವಜನಿಕರು ಆತಂಕಕ್ಕೊಳಗಾಗುವ ಅವಶ್ಯಕತೆ ಇಲ್ಲ ಎಂದು ಶಿವಮೊಗ್ಗ ಎಸ್ಪಿ.ಮಿಥುನ್ ಕುಮಾರ ಹೇಳಿದರು.
ಹೌದು, ಈದ್-ಮಿಲಾದ್ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಮೆರವಣಿಗೆ ವೇಳೆ ಶಿವಮೊಗ್ಗ ನಗರದ ರಾಗಿಗುಡ್ಡ ಶಾಂತಿ ನಗರದಲ್ಲಿ ಕಲ್ಲು ತೂರಾಟ ನಡೆಸಲಾಗಿತ್ತು. ಈ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ‘ಅಂದಿನ ದಿನ ರಾಗಿಗುಡ್ಡದಲ್ಲಿ ಯಾರೋ ಒಬ್ಬರ ಎನ್ ಕೌಂಟರ್ ಆಗಿದೆ ಎನ್ನುವ ಊಹಾಪೋಹ ಹರಿದಾಡಿದೆ. ಆ ರೀತಿ ಊಹಾಪೋಹಗಳ ಕುರಿತು ಈಗಾಗಲೇ ನಾವು ಸ್ಪಷ್ಟನೆಯನ್ನ ಪಡೆದುಕೊಂಡಿದ್ದೇವೆ.
ಸಾರ್ವಜನಿಕರು ಯಾವುದೇ ಊಹಾಪೋಹಗಳಿಗೆ ಕಿವಿಗೊಡುವ ಅವಶ್ಯಕತೆ ಇಲ್ಲ. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಇನ್ನು ಈಗಾಗಲೇ ಕಲ್ಲು ತೂರಾಟದಿಂದ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಇದನ್ನೂ ಓದಿ:ಶಿವಮೊಗ್ಗ ಈದ್ ಮಿಲಾದ್ ಮೆರವಣಿಗೆಯಲ್ಲಿ ತಲ್ವಾರ್, ಚೂರಿ ಝಳಪಿಸಿದ ವಿಡಿಯೋ ಹರಿಬಿಟ್ಟ ಬಿಜೆಪಿ
ಮೆರವಣಿಗೆ ವೇಳೆ ಎರಡು ಓಮಿನಿ ವಾಹನಗಳಲ್ಲಿ ಆಗಮಿಸಿದ ವಿಚಾರ ‘ ದಾವಣಗೆರೆ ವ್ಯಾಪ್ತಿಯ ನ್ಯಾಮತಿ ಇಂದ ಓಮಿನಿ ಬಂದಿದ್ದು, ಆ ಎರಡೂ ಓಮಿನಿಗಳಲ್ಲಿ ಬಂದವರನ್ನೂ ಸಹ ನಾವು ತನಿಖೆ ಮಾಡಿದ್ದೇವೆ. ಆ ವಾಹನದಲ್ಲಿ ಎರಡೂ ಸಮುದಾಯದ ಜನರು ಬಂದಿದ್ದಾರೆ. ಇನ್ನು ಈ ಬಗ್ಗೆ ನಾವು ಕೂಲಂಕಶವಾಗಿ ತನಿಖೆ ಮಾಡುತ್ತೇವೆ. ಈಗಾಗಲೇ ಸ್ಥಳೀಯ ಪೊಲೀಸರ ವಿಚಾರಣೆಯಿಂದ ಓಮಿನಿ ಕುರಿತು ಸ್ಪಷ್ಟನೆ ಸಿಕ್ಕಿದೆ. ಜೊತೆಗೆ ಬಂಧನ ಮಾಡಿರುವ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.
ಇನ್ನು ಸಾಗರದಲ್ಲಿ ನಿನ್ನೆ ನಡೆದ ಪ್ರಕರಣದ ಕುರಿತೂ ಸಹ ತನಿಖೆ ಮಾಡಲಾಗಿದೆ. ಆದ್ರೆ, ಶಿವಮೊಗ್ಗದಲ್ಲಿ ಸುಖಾ ಸುಮ್ಮನೇ ಊಹಾಪೋಹಗಳು ಹರಿದಾಡುತ್ತಿದ್ದು, ಇದರಿಂದ ನಗರದ ಶಾಂತಿ ಹಾಳಾಗುತ್ತಿದೆ. ಈ ಪ್ರಕರಣದಲ್ಲಿ ಯಾವುದೇ ರೀತಿ ತಪ್ಪುಗಳಿದ್ದರೆ, ಆ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ರಾಗಿಗುಡ್ಡದಲ್ಲಿ ಮೂರು ಸಮುದಾಯದವರ ಮನೆಗಳ ಮೇಲೂ ದಾಳಿಯಾಗಿದೆ ಎಂದು ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ