AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ: ಬೆಂಗಳೂರು, ಶಿವಮೊಗ್ಗ, ತಾಳಗುಪ್ಪಕ್ಕೆ ವಿಶೇಷ ರೈಲು; ಇಲ್ಲಿದೆ ವೇಳಾಪಟ್ಟಿ

ಮುಂಗಾರು ಮಳೆಯಿಂದಾಗಿ ಮಲೆನಾಡು ಪ್ರವಾಸೋದ್ಯಮ ಚುರುಕಾಗಿದ್ದು, ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು ನೈಋತ್ಯ ರೈಲ್ವೆ ಬೆಂಗಳೂರಿನಿಂದ ತಾಳಗುಪ್ಪಕ್ಕೆ ವಿಶೇಷ ರೈಲು ಸಂಚಾರ ಆರಂಭಿಸಿದೆ. ಜುಲೈ 25 ಮತ್ತು 26 ರಂದು ಚಲಿಸುವ ಈ ರೈಲಿನ ವೇಳಾಪಟ್ಟಿ, ಮಾರ್ಗ ಮತ್ತು ಬೋಗಿಗಳ ವಿವರಗಳನ್ನು ಈ ಲೇಖನ ಒಳಗೊಂಡಿದೆ. ಪ್ರಯಾಣಿಕರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.

ಪ್ರಯಾಣಿಕರ ಗಮನಕ್ಕೆ: ಬೆಂಗಳೂರು, ಶಿವಮೊಗ್ಗ, ತಾಳಗುಪ್ಪಕ್ಕೆ ವಿಶೇಷ ರೈಲು; ಇಲ್ಲಿದೆ ವೇಳಾಪಟ್ಟಿ
ತಾಳಗುಪ್ಪ ರೈಲು ನಿಲ್ದಾಣ
ವಿವೇಕ ಬಿರಾದಾರ
|

Updated on:Jul 20, 2025 | 9:25 AM

Share

ಬೆಂಗಳೂರು, ಜುಲೈ 20: ಮುಂಗಾರು ಮಳೆ (Monsoon) ಆರಂಭವಾಗಿದ್ದು, ಮಲೆನಾಡು ಭಾಗದಲ್ಲಿನ ಜಲಪಾತಗಳು ಮೈದುಂಬಿ ಧುಮ್ಮುಕ್ಕುತ್ತಿವೆ. ಈ ಹಿನ್ನೆಲೆಯಲ್ಲಿ ಮಲೆನಾಡಿನ ಜಿಲ್ಲೆಗಳಿಗೆ ಪ್ರಯಾಣಿಸುವ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದೆ. ಪ್ರವಾಸಿಗರ ಬೇಡಿಕೆ ಮತ್ತು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು (South Western Railway) ಬೆಂಗಳೂರಿನ (Bengaluru) ಯಶವಂತಪುರದಿಂದ ಶಿವಮೊಗ್ಗ ಮಾರ್ಗವಾಗಿ ತಾಳಗುಪ್ಪಗೆ (Talguppa) ಒಂದು ಟ್ರಿಪ್​ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ.

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಯಶವಂತಪುರ ಮತ್ತು ತಾಳಗುಪ್ಪ ನಡುವೆ (ರೈಲು ಸಂಖ್ಯೆ 06587/0658) ಒಂದು ಟ್ರಿಪ್​ ವಿಶೇಷ ಎಕ್ಸ್​ಪ್ರೆಸ್​ ರೈಲನ್ನು ಓಡಿಸಲು ನಿರ್ಧರಿಸಲಾಗಿದೆ. ಈ ರೈಲು ಜುಲೈ 25 ಮತ್ತು 26 ರಂದು ಸಂಚಾರ ನಡೆಸಲಿದೆ.

ಇದನ್ನೂ ಓದಿ
Image
ತಿರುಪತಿಗೆ ತೆರಳುವ ಭಕ್ತರಿಗೆ ಗುಡ್​ ನ್ಯೂಸ್​: ಕರ್ನಾಟಕದಿಂದ ನೂತನ ರೈಲು
Image
ವಿಜಯಪುರ-ಮಂಗಳೂರು ರೈಲು ಸಂಚಾರ ಅವಧಿ ವಿಸ್ತರಣೆ: ಇಲ್ಲಿದೆ ವೇಳಾಪಟ್ಟಿ
Image
ಬೆಳಗಾವಿ ಮಂದಿಗೆ ಗುಡ್​ ನ್ಯೂಸ್​: ನಿಮ್ಮೂರಿಗೂ ಬರಲಿದೆ ವಂದೇ ಭಾರತ್​ ರೈಲು
Image
ಬೆಂಗಳೂರು ಜನರಿಗೆ ಸಿಹಿ ಸುದ್ದಿ: 2 ಹೊಸ ರೈಲು ನಿಲ್ದಾಣ ನಿರ್ಮಾಣ!

ಬೆಂಗಳೂರು-ತಾಳಗಪ್ಪ ರೈಲು ವೇಳಪಟ್ಟಿ

  • ರೈಲು ಸಂಖ್ಯೆ 06587 ಯಶವಂತಪುರ- ತಾಳಗುಪ್ಪ ಎಕ್ಸ್‌ಪ್ರೆಸ್ ವಿಶೇಷ ರೈಲು ಜುಲೈ 25 ರಂದು ರಾತ್ರಿ 10:30 ಗಂಟೆಗೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 04:15 ಗಂಟೆಗೆ ತಾಳಗುಪ್ಪ ತಲುಪಲಿದೆ. ಈ ರೈಲು ತುಮಕೂರು (11:18/11:20 PM), ತಿಪಟೂರು (12:13/12:15 AM), ಅರಸೀಕೆರೆ (12:33/12:38 AM) ಬೀರೂರು (01:13/01:15 AM), ತರಿಕೇರೆ (1:43/1:45 AM), ಭದ್ರಾವತಿ (02:00/02:02 AM), ಶಿವಮೊಗ್ಗ ಟೌನ್​ (02:20/02:25 AM), ಆನಂದಪುರಂ (03:10/03:12 AM) ಮತ್ತು ಜಂಬಗಾರು (03:35/03:37 AM) ನಿಲ್ದಾಣಗಳಲ್ಲಿ ಆಗಮಿಸಿ, ನಿರ್ಗಮಿಸಲಿದೆ.

ತಾಳಗುಪ್ಪ-ಬೆಂಗಳೂರು ರೈಲು ವೇಳಾಪಟ್ಟಿ

  • ರೈಲು ಸಂಖ್ಯೆ 06588 ತಾಳಗುಪ್ಪ-ಯಶವಂತಪುರ ಎಕ್ಸ್​ಪ್ರೆಸ್ ವಿಶೇಷ ರೈಲು ಜುಲೈ 26 ರಂದು ಬೆಳಿಗ್ಗೆ 8:15ಕ್ಕೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 4:50ಕ್ಕೆ ಯಶವಂತಪುರ ತಲುಪಲಿದೆ. ಮಾರ್ಗ ಮಧ್ಯೆ ಈ ರೈಲು ಸಾಗರ ಜಂಬಗಾರು (08:30/08:32 AM), ಆನಂದಪುರಂ (09:00/09:02 AM), ಶಿವಮೊಗ್ಗ ಟೌನ್​ (09:45/09:50 AM), ಭದ್ರಾವತಿ (10:15/10:17 AM), ತರೀಕೆರೆ (10:30/10:32 AM), ಬೀರೂರು (11:00/11:02 AM), ಅರಸೀಕೆರೆ (12:00/12:10 PM), ತಿಪಟೂರು (12:28/12:30 PM) ಮತ್ತು ತುಮಕೂರು (03:18/03:20 PM) ನಿಲ್ದಾಣಗಳಲ್ಲಿ ಆಗಮಿಸಿ, ನಿರ್ಗಮಿಸಲಿದೆ.

ಇದನ್ನೂ ಓದಿ: ಚಿಕ್ಕಮಗಳೂರು-ತಿರುಪತಿ ರೈಲು ಸೇವೆ: ಹಿಂದೂ-ಮುಸ್ಲಿಮರ ನಡುವೆ ಶುರುವಾದ ವಿವಾದವೇನು?

ನೈಋತ್ಯ ರೈಲ್ವೆ ಪತ್ರಿಕಾ ಪ್ರಕಟಣೆ

ಈ ರೈಲು ಒಟ್ಟು 20 ಬೋಗಿಗಳನ್ನು ಒಳಗೊಂಡಿದೆ. ಇದರಲ್ಲಿ 01 ಎಸಿ ಟು ಟೈರ್​, 02 ಎಸಿ ತ್ರಿ ಟೈರ್​, 10 ಸ್ಲೀಪರ್ ​ಕ್ಲಾಸ್, 05 ಜನರಲ್​ ಸೆಕೆಂಡ್​ ಕ್ಲಾಸ್​ ಮತ್ತು 02 ಸೆಕೆಂಡ್​ ಕ್ಲಾಸ್​ ಲಗೇಜ್​-ಕಮ್​-ಬ್ರೇಕ್​ ವ್ಯಾನ್​ ಬೋಗಿಗಳು ಇರಲಿವೆ.​

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 8:03 am, Sun, 20 July 25

ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್