
ಬೆಂಗಳೂರು, ಜುಲೈ 20: ಮುಂಗಾರು ಮಳೆ (Monsoon) ಆರಂಭವಾಗಿದ್ದು, ಮಲೆನಾಡು ಭಾಗದಲ್ಲಿನ ಜಲಪಾತಗಳು ಮೈದುಂಬಿ ಧುಮ್ಮುಕ್ಕುತ್ತಿವೆ. ಈ ಹಿನ್ನೆಲೆಯಲ್ಲಿ ಮಲೆನಾಡಿನ ಜಿಲ್ಲೆಗಳಿಗೆ ಪ್ರಯಾಣಿಸುವ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದೆ. ಪ್ರವಾಸಿಗರ ಬೇಡಿಕೆ ಮತ್ತು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು (South Western Railway) ಬೆಂಗಳೂರಿನ (Bengaluru) ಯಶವಂತಪುರದಿಂದ ಶಿವಮೊಗ್ಗ ಮಾರ್ಗವಾಗಿ ತಾಳಗುಪ್ಪಗೆ (Talguppa) ಒಂದು ಟ್ರಿಪ್ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ.
ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಯಶವಂತಪುರ ಮತ್ತು ತಾಳಗುಪ್ಪ ನಡುವೆ (ರೈಲು ಸಂಖ್ಯೆ 06587/0658) ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಲಾಗಿದೆ. ಈ ರೈಲು ಜುಲೈ 25 ಮತ್ತು 26 ರಂದು ಸಂಚಾರ ನಡೆಸಲಿದೆ.
ಇದನ್ನೂ ಓದಿ: ಚಿಕ್ಕಮಗಳೂರು-ತಿರುಪತಿ ರೈಲು ಸೇವೆ: ಹಿಂದೂ-ಮುಸ್ಲಿಮರ ನಡುವೆ ಶುರುವಾದ ವಿವಾದವೇನು?
Kindly note:
One-Trip Special Express Train Between Yesvantpur-Talaguppa.
ಯಶವಂತಪುರ-ತಾಳಗುಪ್ಪ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ#SWRupdates pic.twitter.com/jHYMF5LqSz— South Western Railway (@SWRRLY) July 18, 2025
ಈ ರೈಲು ಒಟ್ಟು 20 ಬೋಗಿಗಳನ್ನು ಒಳಗೊಂಡಿದೆ. ಇದರಲ್ಲಿ 01 ಎಸಿ ಟು ಟೈರ್, 02 ಎಸಿ ತ್ರಿ ಟೈರ್, 10 ಸ್ಲೀಪರ್ ಕ್ಲಾಸ್, 05 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 02 ಸೆಕೆಂಡ್ ಕ್ಲಾಸ್ ಲಗೇಜ್-ಕಮ್-ಬ್ರೇಕ್ ವ್ಯಾನ್ ಬೋಗಿಗಳು ಇರಲಿವೆ.
Published On - 8:03 am, Sun, 20 July 25