ಶುಕ್ರವಾರದ SSLC ಪರೀಕ್ಷಾ ಸಮಯದಲ್ಲಿ ಬದಲಾವಣೆ; ಟೀಕಿಸಿದ ಚಕ್ರವರ್ತಿ ಸೂಲಿಬೆಲೆ ವಿರುದ್ಧ FIR

ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ (sslc preparatory exam) ಮುಸ್ಲಿಂ ತುಷ್ಟೀಕರಣ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಎಲ್ಲಾ ಪರೀಕ್ಷೆಗಳು ಬೆಳಗ್ಗೆ ನಡೆದರೆ ಶುಕ್ರವಾರದಂದು ಮಾತ್ರ ಮಧ್ಯಾಹ್ನದ ನಂತರ ಸಮಯ ನಿಗದಿ ಮಾಡಲಾಗಿದೆ. ಈ ಬಗ್ಗೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಸಾಮಾಜಿಕ ಜಾಲತಾಣದಲ್ಲಿ ಟೀಕಿಸಿದ್ದರು. ಈ ಸಂಬಂಧ ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಶುಕ್ರವಾರದ SSLC ಪರೀಕ್ಷಾ ಸಮಯದಲ್ಲಿ ಬದಲಾವಣೆ; ಟೀಕಿಸಿದ ಚಕ್ರವರ್ತಿ ಸೂಲಿಬೆಲೆ ವಿರುದ್ಧ FIR
ನಮಾಜ್​ಗಾಗಿ ಮಕ್ಕಳ ಪರೀಕ್ಷಾ ವೇಳಾಪಟ್ಟಿ ಬದಲಾವಣೆಯೇ ಎಂದು ಟೀಕಿಸಿದ ಚಕ್ರವರ್ತಿ ಸೂಲಿಬೆಲೆ ವಿರುದ್ಧ FIR
Follow us
Basavaraj Yaraganavi
| Updated By: Rakesh Nayak Manchi

Updated on:Feb 09, 2024 | 11:29 AM

ಶಿವಮೊಗ್ಗ, ಫೆ.9: ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ (SSLC Preparatory Exam) ಮುಸ್ಲಿಂ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ವಾಗ್ಮಿ ಚಕ್ರವರ್ತಿ ಸೂಲಿಬೆಲೆ (Chakravarty Sulibele) ವಿರುದ್ಧ ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣೆಗೆ ಜಿಲ್ಲಾ ಎನ್​ಎಸ್​ವಿ ದೂರು ನೀಡಿದ್ದು, ಸಿಆರ್​ಪಿಸಿ ಕಲಂ 157 ಅಡಿ ಎಫ್​ಐಆರ್ (FIR) ದಾಖಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ವೇಳಾಪಟ್ಟಿ ಸಂಬಂಧಿಸಿದಂತೆ ಮಕ್ಕಳು ಧಾರ್ಮಿಕವಾಗಿ ಪರಿಣಾಮ ಬೀಳುವಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಎನ್​ಎಸ್​ವಿ ಸದಸ್ಯರು ದೂರು ನೀಡಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಹೇಳಿದ್ದೇನು?

ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ನಮಾಜ್ ಮಾಡಲು ಸಮಯಾವಕಾಶ ನೀಡಲು ಬೆಳಗ್ಗಿನ ಪರೀಕ್ಷೆಗಳನ್ನು ಮಧ್ಯಾಹ್ನದ ನಂತರ ನಿಗದಿ ಮಾಡಲಾಗಿದೆ ಎಂಬ ಬಲಪಂಥೀಯರು ಟೀಕಿಸಿದ್ದರು. ಅಲ್ಲದೆ, ಸಾಮಾಜಿಕ ಜಾಲತಾಣ ಎಕ್ಸ್​​ನಲ್ಲಿ (ಟ್ವಿಟರ್) ವೇಳಾಪಟ್ಟಿ ಹಂಚಿಕೊಂಡ ಚಕ್ರವರ್ತಿ ಸೂಲಿಬೆಲೆ, ಎಸ್​ಎಸ್​ಎಲ್​ಸಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆಯಾಗಿದೆ. ಎಲ್ಲಾ ಪರೀಕ್ಷೆಗಳು ಬೆಳಗ್ಗಿನ ಅವಧಿಯಲ್ಲಿ ನಡೆಯಲಿದೆ. ಶುಕ್ರವಾರ ಮಾತ್ರ ಯಾಕೆ ಮಧ್ಯಾಹ್ನದ ನಂತರ ಎಂದು ಪ್ರಶ್ನಿಸಿದ್ದರು. ಅಲ್ಲದೆ, ನಮಾಜ್​ಗೆ ಸಮಯವೇ ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ: ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮಕ್ಕೆ ಕಪ್ಪು ಪಟ್ಟಿ ಪ್ರದರ್ಶನ: ಕೈ ಕಾರ್ಯಕರ್ತರಿದ್ದ ಕಟ್ಟಡದ ಮೇಲೆ ಕಲ್ಲು ತೂರಿದ ಬಿಜೆಪಿಗರು 

ಪರೀಕ್ಷೆಯಲ್ಲಿ ಮುಸ್ಲಿಂ ತಿಷ್ಟೀಕರಣಕ್ಕೆ ಪರೀಕ್ಷಾ ಮಂಡಳಿ ಸ್ಪಷ್ಟನೆ

ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಮಾಡಲಾಗುತ್ತಿದೆ ಎಂಬ ಆರೋಪ ಸಂಬಂಧ ಸ್ಪಷ್ಟನೆ ನೀಡಿದ ಪರೀಕ್ಷಾ ಮಂಡಳಿ, ಮಾರ್ಚ್ 1ರಂದು ದ್ವಿತೀಯ ಪಿಯು ಮುಖ್ಯ ಪರೀಕ್ಷೆ ಬೆಳಗ್ಗೆ ನಡೆಯುವ ಕಾರಣ ಎಸ್​ಎಸ್​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯನ್ನು ಮಧ್ಯಾಹ್ನ ನಿಗದಿಮಾಡಲಾಗಿದೆ. ನಮಾಜ್​ಗೆ ಅನುಕೂಲ ಮಾಡಿಕೊಡಲು ಮಧ್ಯಾಹ್ನ ಪರೀಕ್ಷೆ ನಡೆಸುತ್ತಿಲ್ಲ ಸ್ಪಷ್ಟನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:27 am, Fri, 9 February 24

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ