AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ಏರ್​ಪೋರ್ಟ್​ನಿಂದ ಹೈದರಾಬಾದ್‌, ತಿರುಪತಿ, ಗೋವಾಕ್ಕೂ ವಿಮಾನ ಹಾರಾಟ: ಎಂದಿನಿಂದ? ಇಲ್ಲಿದೆ ವೇಳಾಪಟ್ಟಿ

ಮಲೆನಾಡಿಗರ ಬಹುದಿನಗಳ ಶಿವಮೊಗ್ಗ ವಿಮಾನ ನಿಲ್ದಾಣದ ಕನಸು ನನಸಾಗಿದೆ. ಶಿವಮೊಗ್ಗದಿಂದ ಇದುವರೆಗೆ ಕೇವಲ ಬೆಂಗಳೂರಿಗೆ ಮಾತ್ರ ವಿಮಾನ ಸೇವೆ ಇತ್ತು. ಇದೀಗ ಇನ್ನೂ ಮೂರು ನಗರಗಳಿಗೆ ವಿಮಾನ ಸೇವೆ ಆರಂಭವಾಗಲಿದೆ. ಹೌದು.. ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೇರೆ ರಾಜ್ಯಗಳಿಗೆ ವಿಮಾನ ಹಾರಾಟಕ್ಕೆ ಮುಹೂರ್ತ ಫಿಕ್ಸ್‌ ಆಗಿದ್ದು, ನವೆಂಬರ್‌ 17ರಿಂದ ಸ್ಟಾರ್‌ ಏರ್‌ ತನ್ನ ಸೇವೆ ಆರಂಭಿಸಲಿದೆ. ಹಾಗಾದ್ರೆ, ಯಾವೆಲ್ಲಾ ರಾಜ್ಯಗಳಿಗೆ ವಿಮಾನ ಹಾರಾಟ ನಡೆಸಲಿದೆ? ವಿಮಾನದ ವೇಳಾಪಟ್ಟಿ ಸೇರಿದಂತೆ ಇನ್ನಿತರ ಮಾಹಿತಿ ಈ ಕೆಳಗಿನಂತಿದೆ.

ಶಿವಮೊಗ್ಗ ಏರ್​ಪೋರ್ಟ್​ನಿಂದ ಹೈದರಾಬಾದ್‌, ತಿರುಪತಿ, ಗೋವಾಕ್ಕೂ ವಿಮಾನ ಹಾರಾಟ: ಎಂದಿನಿಂದ? ಇಲ್ಲಿದೆ ವೇಳಾಪಟ್ಟಿ
ಸ್ಟಾರ್ ವಿಮಾನ
ರಮೇಶ್ ಬಿ. ಜವಳಗೇರಾ
|

Updated on:Oct 19, 2023 | 10:12 AM

Share

ಶಿವಮೊಗ್ಗ (ಅಕ್ಟೋಬರ್ 19): ಶಿವಮೊಗ್ಗ ವಿಮಾನ ನಿಲ್ದಾಣದಿಂದ(shivamogga Airport) ಮತ್ತೊಂದು ವಿಮಾನ (Flight) ಸಂಚಾರ ಆರಂಭಕ್ಕೆ ದಿನಾಂಕ ನಿಗದಿಯಾಗಿದೆ. ಮುಂದಿನ ತಿಂಗಳು ಅಂದರೆ ನವೆಂಬರ್‌ 17ರಿಂದ ಸ್ಟಾರ್‌ ಏರ್‌ (star flight) ತನ್ನ ಸೇವೆ ಆರಂಭಿಸಲಿದ್ದು, ಶಿವಮೊಗ್ಗದಿಂದ ತಿರುಪತಿ(tirupati), ಗೋವಾ, ಹೈದರಾಬಾದ್‌ಗೆ(hyderabad) ತನ್ನ ಸೇವೆ ಆರಂಭಿಸಲಿದೆ. ಈಗಾಗಲೇ ಸ್ಟಾರ್‌ ಏರ್‌ಲೈನ್ಸ್‌ ವಿಮಾನಯಾನ ಸಂಸ್ಥೆ ಶಿವಮೊಗ್ಗದಿಂದ ತನ್ನ ಕಾರ್ಯಾಚರಣೆ ಆರಂಭಕ್ಕೆ ಸಿದ್ಧತೆ ಮಾಡಿಕೊಂಡಿದೆ. ಇನ್ನು ಟಿಕೆಟ್‌ ಬುಕಿಂಗ್‌ ಪ್ರಕ್ರಿಯೆ ಕೂಡ ಆರಂಭವಾಗಿದೆ.

ಸ್ಟಾರ್‌ ಏರ್‌ ವಿಮಾನದ ವೇಳಾಪಟ್ಟಿ

ಶಿವಮೊಗ್ಗದಿಂದ ತಿರುಪತಿ, ಗೋವಾ ಮತ್ತು ಹೈದರಾಬಾದ್‌ಗೆ ವಾರದಲ್ಲಿ ಆರು ದಿನ ವಿಮಾನಯಾನ ಸೇವೆ ಆರಂಭಿಸುತ್ತಿದೆ. ಸ್ಟಾರ್‌ ಏರ್‌ ವಿಮಾನವು (Flight) ಬೆಳಗ್ಗೆ 9.30ಕ್ಕೆ ಹೈದರಾಬಾದ್‌ನಿಂದ ಹೊರಟು ಅಂದು ಬೆಳಗ್ಗೆ 10.35ಕ್ಕೆ ಶಿವಮೊಗ್ಗ ವಿಮಾನ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದೆ. ಬಳಿಕ ಅದೇ ದಿನ ಬೆಳಗ್ಗೆ 11ಕ್ಕೆ ಶಿವಮೊಗ್ಗದಿಂದ ಹೊರಟು ಮಧ್ಯಾಹ್ನ 12ಕ್ಕೆ ತಿರುಪತಿ ತಲುಪಲಿದೆ. ತಿರುಪತಿಯಿಂದ ಮಧ್ಯಾಹ್ನ 12.35ಕ್ಕೆ ಹೊರಟು ಮಧ್ಯಾಹ್ನ 1.40ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದೆ.

ಇನ್ನು ಮಧ್ಯಾಹ್ನ 1.55ಕ್ಕೆ ಶಿವಮೊಗ್ಗದಿಂದ ಹೊರಟು ಮಧ್ಯಾಹ್ನ 2.45ಕ್ಕೆ ಗೋವಾ ತಲುಪಲಿದೆ. ಗೋವಾದಿಂದ ಮಧ್ಯಾಹ್ನ 3.15ಕ್ಕೆ ಹೊರಟು ಸಂಜೆ 4.05ಕ್ಕೆ ಶಿವಮೊಗ್ಗ ತಲುಪಲಿದೆ. ಸಂಜೆ 4.30ಕ್ಕೆ ಶಿವಮೊಗ್ಗದಿಂದ ಹೊರಟು ಸಂಜೆ 5.30ಕ್ಕೆ ಹೈದರಾಬಾದ್‌ ತಲುಪಲಿದೆ.

ಇದನ್ನೂ ಓದಿ: ಹವಾಮಾನ ವೈಪರೀತ್ಯ: ಶಿವಮೊಗ್ಗ ಏರ್‌ಪೋರ್ಟ್‌ನಲ್ಲಿ ಲ್ಯಾಂಡ್​ ಆಗದೆ ಬೆಂಗಳೂರಿಗೆ ವಾಪಸ್ ಆದ ವಿಮಾನ

ಟಿಕೆಟ್ ಬುಕಿಂಗ್‌ ಆರಂಭ

ಸ್ಟಾರ್‌ ಏರ್‌ಲೈನ್ಸ್‌ ಸಂಸ್ಥೆ ವಿಮಾನಯಾನ ಸೇವೆ ಆರಂಭಕ್ಕೆ ದಿನಾಂಕ ಪ್ರಕಟಿಸುತ್ತಿದ್ದಂತೆ ಟಿಕೆಟ್‌ ಬುಕಿಂಗ್‌ ಪ್ರಕ್ರಿಯೆ ಕೂಡ ಆರಂಭವಾಗಿದೆ. ಶುಭಂ ಹೊಟೇಲ್‌ ಸಮೀಪ ಇರುವ ಬ್ಲೂಬೆಲ್‌ ಹಾಲಿಡೇಸ್‌ನಲ್ಲಿ ಸ್ಟಾರ್‌ ಏರ್‌ ಟಿಕೆಟ್‌ ಬುಕಿಂಗ್‌ ಮಾಡಲಾಗುತ್ತಿದೆ. ಹೆಚ್ಚಿನ ಮಾಹಿತಿಗೆ 8123002917, 9449502917 ಸಂಪರ್ಕಿಸಬಹುದು.

2023, ಫೆಬ್ರವರಿ 23ರಂದು ಶಿವಮೊಗ್ಗ ವಿಮಾನನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದರು. ಆದ್ರೆ, ಕೆಲ ಕಾರಣಾಂತರಗಳಿಂದ 2023, ಆಗಸ್ಟ್ 30ರಂದು ಪ್ರಥಮ ಬಾರಿಗೆ ಶಿವಮೊಗ್ಗದಿಂದ ಬೆಂಗಳೂರಿಗೆ ಇಂಡಿಗೋ ವಿಮಾನಯಾನ ಸೇವೆ ಆರಂಭವಾಗಿತ್ತು. ಇದೀಗ ಸ್ಟಾರ್ ವಿಮಾನಯಾನ ಸಂಸ್ಥೆ ಸಹ ಶಿವಮೊಗ್ಗದಿಂದ ಸೇವೆ ಪ್ರಾರಂಭಿಸಲಿದ್ದು, ಮಲೆನಾಡಿಗರ ಬಹುದಿನಗಳ ಕನಸು ನನಸಾಗಿದೆ. ಇದರೊಂದಿಗೆ ಇನ್ಮುಂದೆ ಶಿವಮೊಗ್ಗದಿಂದ ತಿರುಪತಿ, ಗೋವಾ, ಹೈದರಾಬಾದ್‌ಗೆ ಅತ್ಯಂತ ವೇಗವಾಗಿ ತಲುಪಬಹುದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:55 am, Thu, 19 October 23

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!