ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ

ಶಿವಮೊಗ್ಗದ ಶಾಂತಿನಗರದ ರಾಗಿಗುಡ್ಡ ಪ್ರದೇಶದಲ್ಲಿ ಈದ್​ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಸ್ಥಳಕ್ಕೆ ರ್ಯಾಪಿಡ್​  ಆ್ಯಕ್ಷನ್​ ಫೋರ್ಸ್ ಭೇಟಿ ನೀಡಿ ಗುಂಪನ್ನು ಚದುರಿಸಿ ಪರಿಸ್ಥಿತಿ ಹತೋಟಿಗೆ ತೆಗೆದುಕೊಂಡಿದ್ದಾರೆ.

ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ
ಶಿವಮೊಗ್ಗದಲ್ಲಿ ಕಲ್ಲು ತೂರಾಟ
Follow us
Basavaraj Yaraganavi
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 01, 2023 | 7:35 PM

ಶಿವಮೊಗ್ಗ, ಅ.01: ಇಂದು ಶಿವಮೊಗ್ಗ(Shivamogga)ದಲ್ಲಿ ಈದ್​ ಮಿಲಾದ್ (Eid Milad Un Nabi)ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅದರಂತೆ ನಗರದಲ್ಲಿ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದ್ದು, ಈ ವೇಳೆ ಶಿವಮೊಗ್ಗದ ಶಾಂತಿನಗರದ ರಾಗಿಗುಡ್ಡ ಪ್ರದೇಶದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಸ್ಥಳಕ್ಕೆ ರ್ಯಾಪಿಡ್​  ಆ್ಯಕ್ಷನ್​ ಫೋರ್ಸ್ ಭೇಟಿ ನೀಡಿ ಗುಂಪನ್ನು ಚದುರಿಸಿ ಪರಿಸ್ಥಿತಿ ಹತೋಟಿಗೆ ತೆಗೆದುಕೊಂಡಿದ್ದಾರೆ. ಸ್ಥಳಕ್ಕೆ ಎಸ್​ಪಿ ಜಿ.ಕೆ ಮಿಥುನ್ ಕುಮಾರ್​ ಭೇಟಿ ನೀಡಿ ಪರಿಶೀಲನೆ  ನಡೆಸಿದ್ದಾರೆ.

ಮುನ್ನೆಚ್ಚರಿಕೆಯಿಂದ ರಾಗಿಗುಡ್ಡ ಪ್ರದೇಶದಲ್ಲಿ 144 ಸೆಕ್ಷನ್‌ ಜಾರಿ

ಇನ್ನು ಈದ್ ಮಿಲಾದ್ ಹಬ್ಬ ಆಚರಣೆ ವೇಳೆ ಕಲ್ಲೆಸೆತ ಉಂಟಾದ ಹಿನ್ನಲೆ ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ ಅವರು ಶಿವಮೊಗ್ಗದ ಶಾಂತಿನಗರದ ರಾಗಿಗುಡ್ಡ ಪ್ರದೇಶದಲ್ಲಿ 144 ಸೆಕ್ಷನ್‌ ಜಾರಿಗೆ ಆದೇಶಿಸಿದ್ದಾರೆ. ಜೊತೆಗೆ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರಿಂದ ಲಘು ಲಾಠಿಪ್ರಹಾರ ನಡೆಸಿದ್ದು, ಈ ವೇಳೆ ಕಿಡಿಗೇಡಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇನ್ನು ಗಲಾಟೆಯಲ್ಲಿ ಸಿಲುಕಿದ್ದ 7 ಜನರನ್ನು ಪೊಲೀಸರು ರಕ್ಷಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ತೀವ್ರ ಸ್ವರೂಪ ಪಡೆದ ಈದ್ ಮಿಲಾದ್​ ಕಟೌಟ್ ವಿವಾದ: ಶೇರ್ ಟಿಪ್ಪು ಎಂದು ರಕ್ತದಲ್ಲೇ ಬರೆದ ಮುಸ್ಲಿಂ ಯುವಕ

ಕಟೌಟ್​ ವಿಚಾರವಾಗಿ ನಿನ್ನೆ ರಾತ್ರಿ ಉದ್ವಿಗ್ನ ಸ್ಥಿತಿ

ಹೌದು, ಈದ್‌ ಮಿಲಾದ್‌ ಮೆರವಣಿಗೆ ಹಿನ್ನಲೆ ಶಿವಮೊಗ್ಗದ ರಾಗಿಗುಡ್ಡ- ಶಾಂತಿನಗರದಲ್ಲಿ ಟಿಪ್ಪು ಸುಲ್ತಾನ್ ಕಟೌಟ್ಅ ಳವಡಿಸಲಾಗಿತ್ತು. ಈ ವೇಳೆ ಟಿಪ್ಪುವಿನ ಕಟೌಟ್​ನ ಕೆಳಭಾಗದಲ್ಲಿ ಆಕ್ಷೇಪಾರ್ಹ ಸಂಗತಿ ಇದ್ದ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆಯು ಬಿಳಿ ಬಣ್ಣವನ್ನು ಬಳಿದಿದ್ದರು. ಇದರಿಂದ ರೊಚ್ಚಿಗೆದ್ದ ರಾಗಿಗುಡ್ಡದ ಶಾಂತಿನಗರ ನಿವಾಸಿಗಳು, ಯಾಕೇ ಟಿಪ್ಪುವಿನ ಕಟೌಟ್​ನ ಕೆಳಭಾಗದಲ್ಲಿರುವ ಚಿತ್ರಕ್ಕೆ ಬಿಳಿ ಬಣ್ಣ ಹಾಕಿದ್ದೀರಿ ಎಂದು ವಿರೋಧ ವ್ಯಕ್ತಪಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:12 pm, Sun, 1 October 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ