AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga News: ವಸತಿ ಶಾಲೆಯಲ್ಲಿದ್ದ ವಿದ್ಯಾರ್ಥಿನಿ ನಿಗೂಢ ಸಾವು; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಬಡವರಿಗೆ ತಮ್ಮ ಮಕ್ಕಳ ವಿದ್ಯಾಭ್ಯಾಸದ್ದೆ ದೊಡ್ಡ ಚಿಂತೆ ಸದಾ ಕಾಡುತ್ತಿರುತ್ತದೆ. ಅದರಲ್ಲೂ ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸುವುದು ಬಡವರಿಗೆ ದೊಡ್ಡ ಸವಾಲು. ಅದರಂತೆ ಇಲ್ಲೊಂದು ಕುಟುಂಬ ಮಗಳ ವಿದ್ಯಾಭ್ಯಾಸಕ್ಕೆಂದು ಖಾಸಗಿ ವಸತಿ ಶಾಲೆಗೆ ದಾಖಲು ಮಾಡಿದ್ದರು. ವಸತಿ ಶಾಲೆಗ ಹೋಗಿ ಕೆಲವೇ ದಿನವಾಗಿತ್ತು. ಈ ನಡುವೆ ವಿದ್ಯಾರ್ಥಿನಿಯು ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾಳೆ.

Shivamogga News: ವಸತಿ ಶಾಲೆಯಲ್ಲಿದ್ದ ವಿದ್ಯಾರ್ಥಿನಿ ನಿಗೂಢ ಸಾವು; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ
ಮೃತ ಬಾಲಕಿ
ಕಿರಣ್ ಹನುಮಂತ್​ ಮಾದಾರ್
|

Updated on:Jun 10, 2023 | 8:40 AM

Share

ಶಿವಮೊಗ್ಗ: ಜಿಲ್ಲೆಯ ಸಾಗರ(Sagara) ತಾಲ್ಲೂಕಿನಲ್ಲಿರುವ ಖಾಸಗಿ ವಸತಿ ಶಾಲೆಯಲ್ಲಿ 13 ವರ್ಷದ ತೇಜಸ್ವಿನಿ ಎಂಬ ಬಾಲಕಿ 8ನೇ ಕ್ಲಾಸ್ ನಲ್ಲಿ ವ್ಯಾಸ್ಯಾಂಗ ಮಾಡುತ್ತಿದ್ದಳು. ವಸತಿ ಶಾಲೆಯಲ್ಲಿ ಬಾಲಕಿಯ ಆರೋಗ್ಯದಲ್ಲಿ ಏರುಪೇರು ಆಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ವಿದ್ಯಾರ್ಥಿ ಮೃತಪಟ್ಟಿದ್ದು, ವಿದ್ಯಾರ್ಥಿನಿಯು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾಳೆಂದು ಪೋಷಕರು, ಮೃತಳ ಸಂಬಂಧಿಗಳು ಆರೋಪಿಸುತ್ತಿದ್ದಾರೆ. ಹೌದು ಮದ್ಯಾಹ್ನ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಖಾಸಗಿ ವಸತಿ ಶಾಲೆಯ ಸಿಬ್ಬಂದಿಗಳು ಕೂಡಲೇ ಸಾಗರ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆಸ್ಪತ್ರೆಗೆ ದಾಖಲಿಸುವ ಮೊದಲೇ ವಿದ್ಯಾರ್ಥಿನಿಯು ಮೃತಪಟ್ಟಿರುವ ಕುರಿತು ವೈದ್ಯರು ದೃಢಪಡಿಸಿದ್ದಾರೆ. ಇದರಿಂದ ಕುಟುಂಬಸ್ಥರಿಗೆ ದೊಡ್ಡ ಅಚ್ಚರಿ ಮತ್ತು ಆಘಾತವಾಗಿದೆ.

ಆರೋಗ್ಯವಾಗಿದ್ದ ಮಗಳು, ವಸತಿ ಶಾಲೆಗೆ ಹೋದ ಕೆಲವೇ ದಿನದಲ್ಲಿ ಅನಾರೋಗ್ಯಕ್ಕೊಳಗಾಗಿದ್ದು ಹೇಗೆ?. ಈ ಕುರಿತು ವಸತಿ ಶಾಲೆಯವರು ಯಾವುದೇ ಮಾಹಿತಿಯನ್ನು ಪೋಷಕರಿಗೆ ಕೊಟ್ಟಿರಲಿಲ್ಲ. ಈ ಹಿನ್ನಲೆಯಲ್ಲಿ ಮೃತಳ ಶವವನ್ನು ಮರಣೋತ್ತರ ಪರೀಕ್ಷೆಗೆ ಮೆಗ್ಗಾನ್ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಮೃತಳ ಶವವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ಹಾಸ್ಟೇಲ್ ನಲ್ಲಿರುವ ಅವ್ಯವಸ್ಥೆಯಿಂದಲೇ ವಿದ್ಯಾರ್ಥಿನಿಯು ಮೃತಪಟ್ಟಿದ್ಧಾಳೆಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ:ದಾವಣಗೆರೆ: ಫ್ಯಾನ್​ಗೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ; ಹಾಸ್ಟೆಲ್​ ಸಿಬ್ಬಂದಿ ವಿರುದ್ಧ ಮೃತ ವರ್ಷಿತಾ ಪೋಷಕರ ಆರೋಪ

ಸಾಗರ ತಾಲೂಕಿನ ವನಶ್ರೀ ಎನ್ನುವ ವಸತಿ ಶಾಲೆಯಲ್ಲಿ ನೂರಾರು ಮಕ್ಕಳು ವ್ಯಾಸ್ಯಾಂಗ ಮಾಡುತ್ತಿದ್ದಾರೆ. ಅದರಲ್ಲೂ ಬಡ ಮಕ್ಕಳಿಗೆ ಇಲ್ಲಿ ಉಚಿತವಾಗಿ ಶಿಕ್ಷಣ ನೀಡಲಾಗುತ್ತದೆ. ಹೆಚ್ಚು ಹೊರ ರಾಜ್ಯದ ಬಡಮಕ್ಕಳು ವನಶ್ರೀಯಲ್ಲಿ ವಿದ್ಯಾಭ್ಯಾಸ ಮಾಡುತ್ತಾರೆ. ಸ್ಥಳೀಯವಾಗಿ ಬಡ ಹೆಣ್ಣು ಮಕ್ಕಳಿಗೆ ಇಲ್ಲಿ ಉಚಿತವಾಗಿ ಶಿಕ್ಷಣದ ವ್ಯವಸ್ಥೆ ಮಾಡಲಾಗಿದೆ. ಈ ನಡುವೆ ಸೊರಬ ತಾಲೂಕಿನ ಶಿವಪುರ ಗ್ರಾಮದ ತೇಜಸ್ವಿನಿಯನ್ನು ಕಳೆದ ಮೂರು ನಾಲ್ಕು ದಿನಗಳ ಹಿಂದೆ ವಸತಿ ಶಾಲೆಗೆ ಸೇರಿಸಲಾಗಿತ್ತು. ಈ ನಡುವೆ ಹಠಾತ್ ಆಗಿ ತೇಜಸ್ವಿನಿ ಮೃತಪಟ್ಟಿದ್ದು, ಪೋಷಕರಿಗೆ ದಿಕ್ಕೇ ತೋಚದಂತಾಗಿದೆ.

ಎಸ್ಸಿ ಸಮಾಜಕ್ಕೆ ಸೇರಿದ ವಿದ್ಯಾರ್ಥಿನಿಯ ಉತ್ತಮ ಭವಿಷ್ಯಕ್ಕಾಗಿ ಖಾಸಗಿ ವಸತಿ ಶಾಲೆಯಲ್ಲಿ ದಾಖಲು ಮಾಡಲಾಗಿತ್ತು. ಶಾಲೆಯ ಆರಂಭದ ಕೆಲವೇ ದಿನದಲ್ಲಿ ವಿದ್ಯಾರ್ಥಿನಿಯು ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾಳೆ. ಹಾಸ್ಟೇಲ್​ನಲ್ಲಿ ವಿದ್ಯಾರ್ಥಿನಿಗೆ ಸಮಸ್ಯೆ ಆಗಿದೆ. ಇದರಿಂದ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ಏರಪೇರು ಆಗಿದೆ. ಕೂಡಲೇ ವಿದ್ಯಾರ್ಥಿನಿಯ ಪೋಷಕರಿಗೆ ಮಾಹಿತಿ ಕೊಟ್ಟು, ಅವಳನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕಿತ್ತು. ಇಲ್ಲಿ ಆರೋಗ್ಯ ಸಮಸ್ಯೆ ಆದ್ರೂ, ಹಾಸ್ಟೇಲ್​ನಲ್ಲಿರುವ ಸಿಬ್ಬಂದಿಗಳು ಮತ್ತು ವಾರ್ಡ್ ನ್​ಗಳು ನಿರ್ಲಕ್ಷ್ಯ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯ ಸಾವು ಹಾಸ್ಟೇಲ್​ನಲ್ಲೇ ಆಗಿದೆ ಎನ್ನುವುದು ಕುಟುಂಬಸ್ಥರ ಆರೋಪವಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿಯ ಅನುಮಾನಸ್ಪದ ಸಾವು ಕುರಿತು ಕೇಸ್ ದಾಖಲಾಗಿದೆ.

ಇದನ್ನೂ ಓದಿ:ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ರೈಲ್ವೆ ಹಳಿ ಮೇಲೆ ವಿದ್ಯಾರ್ಥಿ ಮೃತದೇಹ ಪತ್ತೆ, ಆತ್ಮಹತ್ಯೆಯಲ್ಲ ಕೊಲೆ ಎಂದ ಪೋಷಕರು

ಹಾಸ್ಟೇಲ್​ಗೆ ಹೋಗಿ ಕೇವಲ ಮೂರು ನಾಲ್ಕು ದಿನಗಳಾಗಿತ್ತು. ಅಷ್ಟರಲ್ಲೇ ವಿದ್ಯಾರ್ಥಿನಿಯು ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾಳೆ. ಮಗಳ ಸಾವಿನಿಂದ ಪೋಷಕರು ಕಂಗಾಲು ಆಗಿದ್ದಾರೆ. ಸೂಕ್ತ ತನಿಖೆಯ ಬಳಿಕವಷ್ಟೇ ವಿದ್ಯಾರ್ಥಿನಿಯ ಸಾವಿನ ರಹಸ್ಯ ಬಯಲಾಗಬೇಕಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:38 am, Sat, 10 June 23

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ