ಶಿವಮೊಗ್ಗ: ಹದಗೆಟ್ಟಿರುವ ರಸ್ತೆಯಿಂದಲೇ ವಿಡಿಯೋ ಮಾಡಿ, ಗೃಹ ಸಚಿವ ಆರಗ ಜ್ಞಾನೇಂದ್ರರಿಗೆ ವಿದ್ಯಾರ್ಥಿ ಮನವಿ

| Updated By: ಸಾಧು ಶ್ರೀನಾಥ್​

Updated on: Aug 23, 2021 | 10:31 AM

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ವಳಗೇರಿ ಗ್ರಾಮದ ಸಂಪರ್ಕ ರಸ್ತೆ ಸಂಪೂರ್ಣ ಕೆಸರು ಮಯವಾಗಿರುವ ಬಗ್ಗೆ ವಿಡಿಯೋ ಮೂಲಕವೇ ತಿಳಿಸುವ ಪ್ರಯತ್ನವನ್ನು ವಿದ್ಯಾರ್ಥಿ ಮಾಡಿದ್ದಾರೆ.

ಶಿವಮೊಗ್ಗ: ಹದಗೆಟ್ಟಿರುವ ರಸ್ತೆಯಿಂದಲೇ ವಿಡಿಯೋ ಮಾಡಿ, ಗೃಹ ಸಚಿವ ಆರಗ ಜ್ಞಾನೇಂದ್ರರಿಗೆ ವಿದ್ಯಾರ್ಥಿ ಮನವಿ
ವಿದ್ಯಾರ್ಥಿ ವಿಡಿಯೋ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರರಿಗೆ ಮನವಿ
Follow us on

ಶಿವಮೊಗ್ಗ: ಹದಿಗೆಟ್ಟಿರುವ ರಸ್ತೆಯಿಂದಲೇ ವಿದ್ಯಾರ್ಥಿ ವಿಡಿಯೋ ಮಾಡಿ, ಗೃಹ ಸಚಿವ ಆರಗ ಜ್ಞಾನೇಂದ್ರರಿಗೆ ಮನವಿ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ವಳಗೇರಿ ಗ್ರಾಮದ ಸಂಪರ್ಕ ರಸ್ತೆ ಸಂಪೂರ್ಣ ಕೆಸರು ಮಯವಾಗಿರುವ ಬಗ್ಗೆ ವಿಡಿಯೋ ಮೂಲಕವೇ ತಿಳಿಸುವ ಪ್ರಯತ್ನವನ್ನು ವಿದ್ಯಾರ್ಥಿ ಮಾಡಿದ್ದಾರೆ.

ಗ್ರಾಮಸ್ಥರು ಅನೇಕ ವರ್ಷಗಳಿಂದ ಉತ್ತಮ ರಸ್ತೆಗಾಗಿ ಆಗ್ರಹಿಸುತ್ತಿದ್ದಾರೆ. ಆದರೆ ಅಧಿಕಾರಿ ವರ್ಗ ಇವರೆಗೂ ಈ ವಿಚಾರದ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಪ್ರತಿದಿನ ಶಾಲೆಗೆ ಹೋಗುವ ವಿದ್ಯಾರ್ಥಿಗಳು ಇದರಿಂದಾಗಿ ಪರದಾಡುವಂತಾಗಿದೆ. ಹೀಗಾಗಿ ನಮ್ಮೂರಿನ ಸಮಸ್ಯೆ ಸರಿಪಡಿಸುವಂತೆ ವಿದ್ಯಾರ್ಥಿ ಗೃಹ ಸಚಿವರಿಗೆ ಆಗ್ರಹಿಸಿದ್ದಾರೆ.

ಬೀದರ್: 8 ವರ್ಷದಿಂದ ಅರ್ಧಕ್ಕೆ ನಿಂತಿದೆ ರಿಂಗ್​ ರಸ್ತೆ ಕಾಮಗಾರಿ
ವಾಹನ ದಟ್ಟನೆ ಕಡಿಮೆ ಮಾಡುವ ಉದ್ದೇಶದಿಂದ ಬೀದರ್​ ಜಿಲ್ಲೆಯಲ್ಲಿ ರಿಂಗ್ ರಸ್ತೆ ನಿರ್ಮಿಸಲಾಯಿತು. ಆದರೆ ಕಳೆದ ಎಂಟು ವರ್ಷದಿಂದ ರಸ್ತೆಯನ್ನು ಪೂರ್ಣಗೊಳಿಸದೆ ಅರ್ಧಕ್ಕೆ ಬಿಡಲಾಗಿದೆ. ಇದರಿಂದಾಗಿ ವಾಹನ ಸವಾರರು ನರಕಯಾತನೆ ಅನುಭವಿಸುವಂತಾಗಿದೆ. ಅಲ್ಲದೆ ಈ ರಸ್ತೆಯ ಪಕ್ಕದಲ್ಲಿ ಜಮೀನು ಹೊಂದಿರುವ ರೈತರು ಕೂಡಾ ಸಮಸ್ಯೆಗೆ ಸಿಲುಕಿದ್ದಾರೆ. ಬೆಳೆದ ಬೆಳೆ ಮೇಲೆ ದೂಳು ಕೂರುತ್ತಿದ್ದು, ಬೆಳೆ ಹಾನಿಯಾಗುತ್ತಿದೆ. ಇದು ಸಹಜವಾಗಿಯೇ ಈ ಭಾಗದ ಜನರ ಮತ್ತು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಬೀದರ್ ನಗರದಲ್ಲಿ ವಾಹನಗಳ ಓಡಾಟಕ್ಕೆ ಬ್ರೇಕ್ ಹಾಕಬೇಕೆನ್ನುವ ಉದ್ದೇಶದಿಂದ 2013-14 ನೇ ಸಾಲಿನಲ್ಲಿ ಸುಮಾರು 47.76 ಕೋಟಿ ರೂಪಾಯಿ ವೆಚ್ಚದಲ್ಲಿ 16.77 ಕಿಲೋ ಮೀಟರ್ ಉದ್ದದ ರಿಂಗ್ ರಸ್ತೆಯ ಕಾಮಗಾರಿಯನ್ನು ಆರಂಭಸಲಾಯಿತು. ಆದರೆ ಪೂರ್ಣ ಪ್ರಮಾಣದ ರಿಂಗ್ ರಸ್ತೆಯನ್ನು ಮಾಡದೆ ಸುಮಾರು 5 ಕಿಲೋ ಮೀಟರ್ ನಷ್ಟೂ ರಸ್ತೆಯನ್ನು ಹಾಗೆ ಬಿಡಲಾಗಿದೆ. ಇದರಿಂದಾಗಿ ಈ ರಸ್ತೆಯಲ್ಲಿ ಓಡಾಡುವ ಭಾರಿ ವಾಹನಗಳು (ಲೋಡ್ ತುಂಬಿದ ವಾಹನ) ನಡು ರಸ್ತೆಯಲ್ಲಿಯೇ ಸಿಲುಕಿ ಹಾಕಿಕೊಳ್ಳುತ್ತಿದ್ದು, ಕೊನೆಗೆ ಬೇರೆ ವಾಹನಕ್ಕೆ ವಸ್ತುಗಳನ್ನು ವರ್ಗಾಯಿಸಬೇಕಾದ ಅನಿವಾರ್ಯತೆ ಕಾಡುತ್ತಿದೆ.

ಪ್ರತಿ ದಿನ ಈ ರಸ್ತೆಯಲ್ಲಿ ಏನಿಲ್ಲವೆಂದರು ಎರಡು ಸಾವಿರಕ್ಕೂ ಹೆಚ್ಚು ವಾಹನಗಳು ಸಂಚಾರ ಮಾಡುತ್ತವೆ. ಅದರಲ್ಲೂ ಮಳೆಗಾಲದಲ್ಲಿ ವಾಹನಗಳು ಹೀಗೆ ರಸ್ತೆ ಮಧ್ಯದಲ್ಲಿ ಸಿಲುಕಿಕೊಂಡರೆ ಇತರ ವಾಹನಗಳ ಓಡಾಟಕ್ಕೂ ತೊಂದರೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ಸಾಕಷ್ಟು ಬಾರಿ ತಂದಿದ್ದೇವೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರಾದ ಬಸವರಾಜ್ ಬೇಸರ ವ್ಯಕ್ತಪಡಿಸಿದ್ದಾರೆ.

ಈ ರಿಂಗ್ ರಸ್ತೆಯ ಮೂಲಕ ಪ್ರತಿನಿತ್ಯ ಸಾವಿರಾರು ವಾಹನಗಳು, ಲೋಡ್ ತುಂಬಿದ ಲಾರಿಗಳು ಹೈದರಾಬಾದ್, ಲಾತೂರ್, ಮಹಾರಾಷ್ಟ್ರ ಸೇರಿದಂತೆ ಹತ್ತಾರು ಗ್ರಾಮಗಳಿಗೆ, ಪಟ್ಟಣಕ್ಕೆ ಹೋಗಬೇಕಾಗುತ್ತದೆ . ಆದರೆ ಈ ರಸ್ತೆ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಸಾಕಷ್ಟೂ ಸಮಸ್ಯೆಯಾಗುತ್ತಿದೆ. ಕಳೆದ ಎಂಟು ವರ್ಷದಿಂದ ಅರ್ಧಕ್ಕೆ ಬಿಟ್ಟಿರುವ ರಸ್ತೆಯನ್ನು ಪೂರ್ಣ ಮಾಡಬೇಕು ಎನ್ನುವ ಯೋಚನೆಯನ್ನು ಕೂಡಾ ಇಲ್ಲಿನ ಅಧಿಕಾರಿಗಳಾಗಲಿ, ಶಾಸಕರಾಗಲಿ, ಮಂತ್ರಿಯಾಗಲಿ ಮಾಡಿಲ್ಲ. ಹೀಗಾಗಿ ಇದರಿಂದ ವಾಹನ ಸವಾರರು ನಿತ್ಯ ತಗ್ಗು, ದಿನ್ನೆಯಿಂದ ಕೂಡಿದ ರಸ್ತೆಯಲ್ಲಿ ವಾಹನ ನಡೆಸಬೇಕಾಗಿದೆ.

ಇದನ್ನೂ ಓದಿ:
8 ವರ್ಷದಿಂದ ಅರ್ಧಕ್ಕೆ ನಿಂತಿದೆ ರಿಂಗ್​ ರಸ್ತೆ ಕಾಮಗಾರಿ; ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಬೀದರ್​ ಜನರ ಆಕ್ರೋಶ

ದುಸ್ಥಿತಿಯಲ್ಲಿರುವ ವರದಾ ನದಿ ಸೇತುವೆ; ಅನಾಹುತ ಸಂಭವಿಸುವ ಮೊದಲೇ ಎಚ್ಚೆತ್ತುಕೊಳ್ಳಲು ಹಾವೇರಿ ಜನರಿಂದ ಮನವಿ

Published On - 10:20 am, Mon, 23 August 21