ಶಿವಮೊಗ್ಗದ ಪ್ರತಿಷ್ಠಿತ ಖಾಸಗಿ ಕಾಲೇಜ್ನ ವಿದ್ಯಾರ್ಥಿಗಳು ಮಾದಕ ವಸ್ತು ಸೇವನೆ: ವಿಡಿಯೋ ವೈರಲ್
ಮೂವರು ಕಾಲೇಜು ವಿದ್ಯಾರ್ಥಿಗಳು ಮಾದಕವಸ್ತು ಸೇವಿಸಿ ನಶೆಯಲ್ಲಿ ಒದ್ದಾಡುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಶಿವಮೊಗ್ಗ: ಜಿಲ್ಲೆಯ ಪ್ರತಿಷ್ಠಿತ ಖಾಸಗಿ ಕಾಲೇಜ್ನಲ್ಲಿ ವಿದ್ಯಾರ್ಥಿಗಳು (Students) ಹಾಡಹಗಲೇ ಮಾದಕ ವಸ್ತು ಸೇವನೆ ಮಾಡಿರುವಂತಹ ಘಟನೆ ನಡೆದಿದೆ. ಗುಂಗಿನ ನಶೆಯಲ್ಲಿ ಒದ್ದಾಡುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೂವರು ಕಾಲೇಜು ವಿದ್ಯಾರ್ಥಿಗಳು ಮಾದಕವಸ್ತು ಸೇವಿಸಿ ಗಾಳಿಯಲ್ಲಿ ತೂರಾಡುತ್ತಿದ್ದು, ಕಾಲನ್ನು ಮುಂದೆಯೂ ಹಾಕಲಾರದೆ, ಹಿಂದೆಯೂ ಹಾಕಲಾರದೆ ನಶೆಯಲ್ಲಿ ವಿದ್ಯಾರ್ಥಿಗಳು ಒದ್ದಾಡುತ್ತಿದ್ದಾರೆ. ಮತ್ತಿನಲ್ಲಿ ಕ್ಯಾಂಪಸ್ನಲ್ಲಿ ಎಲ್ಲಂದರಲ್ಲಿ ವಾಲಾಡುತ್ತಾ ಬಿದ್ದಿದ್ದಾರೆ. ಇದನ್ನು ಸಹಪಾಠಿ ವಿದ್ಯಾರ್ಥಿಗಳಿಂದ ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಒಂದು ಕಾಲೇಜು ಸಂಸ್ಥೆಯ ಹೆಸರಿನ ಟ್ಯಾಗ್ ಲೈನ್ನಲ್ಲಿ ವೈರಲ್ ಮಾಡಲಾಗಿದೆ.
ಇದನ್ನೂ ಓದಿ: Students Kissing Video – ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳ ಕಿಸ್ಸಿಂಗ್ ವಿಡಿಯೋ ವೈರಲ್
ವಿದ್ಯಾರ್ಥಿಗಳ ಕಿಸ್ಸಿಂಗ್ ವಿಡಿಯೋ ವೈರಲ್
ಈ ಹಿಂದೆ ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳು ಕಿಸ್ಸಿಂಗ್ ಮಾಡಿರುವ ವಿಡಿಯೋ ಕೂಡ ವೈರಲ್ ಆಗಿತ್ತು. ಕಿಸ್ಸಿಂಗ್ ವಿದ್ಯಾರ್ಥಿ ವಿದ್ಯಾರ್ಥಿನಿಯರು ಕಿಸ್ಸಿಂಗ್ ಸ್ಪರ್ಧೆ ಮಾಡಿದ್ದು, ವಿಡಿಯೋ ಮಾಡಿದ ವಿದ್ಯಾರ್ಥಿಯ ಬಂಧನ ಮಾಡಲಾಗಿದೆ. ಕಿಸ್ಸಿಂಗ್‌ನಲ್ಲಿ ತೊಡಗಿದ್ದ ವಿದ್ಯಾರ್ಥಿಗಳು ಪಿಯುಸಿ ಶಿಕ್ಷಣ ಪಡೆಯುತ್ತಿದ್ದರು ಎನ್ನಲಾಗಿದೆ. ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಸಹಪಾಠಿಗಳ ಎದುರೇ ಕಿಸ್ ಮಾಡಿರುವುದು ಭಾರೀ ಸಂಚಲನ ಮೂಡಿಸಿದೆ.
ಪಂದ್ಯದ ನಿಯಮದಂತೇ ವಿದ್ಯಾರ್ಥಿ, ವಿದ್ಯಾರ್ಥಿನಿ ಎಲ್ಲರ ಎದುರೇ ಚುಂಬನ ಮಾಡಿದ್ದು, ಇದನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಪ್ರತಿಷ್ಠಿತ ಖಾಸಗಿ ಕಾಲೇಜಿನ ಕಿಸ್ಸಿಂಗ್ ಸ್ಪರ್ಧೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಲವರ ಆಕ್ರೋಶಕ್ಕೂ ಕಾರಣವಾಗಿತ್ತು.