Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಪಠ್ಯದಿಂದ ಹೆಡಗೇವಾರ್, ಸಾವರ್ಕರ್ ಪಠ್ಯ ಕೈಬಿಟ್ಟಿದ್ದಕ್ಕೆ ಶಿವಮೊಗ್ಗದಲ್ಲಿ ಬಿಜೆಪಿ ಪ್ರತಿಭಟನೆ

ಇಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶಿವಮೊಗ್ಗ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಮಳೆ ಹಾನಿ ಕುರಿತು ಸಭೆ ನಡೆಸಲು ಆಗಮಿಸಿದ್ದರು. ಈ ವೇಳೆ ಸಚಿವರು ಆಗಮಿಸುತ್ತಿದ್ದಂತೆ ಬಿಜೆಪಿ ಯುವ ಮೋರ್ಚಾದಿಂದ ಶಾಲಾ ಪಠ್ಯದಿಂದ ಹೆಡ್ಗೆವಾರ್, ಸಾವರ್ಕರ್ ಪಾಠ ಕೈಬಿಟ್ಟಿದ್ದಕ್ಕೆ ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಶಾಲಾ ಪಠ್ಯದಿಂದ ಹೆಡಗೇವಾರ್, ಸಾವರ್ಕರ್ ಪಠ್ಯ ಕೈಬಿಟ್ಟಿದ್ದಕ್ಕೆ ಶಿವಮೊಗ್ಗದಲ್ಲಿ ಬಿಜೆಪಿ ಪ್ರತಿಭಟನೆ
ಶಿವಮೊಗ್ಗದಲ್ಲಿ ಬಿಜೆಪಿ ಪ್ರತಿಭಟನೆ
Follow us
Basavaraj Yaraganavi
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 26, 2023 | 11:36 AM

ಶಿವಮೊಗ್ಗ, ಜು.26: ರಾಜ್ಯಾದ್ಯಂತ ಭರ್ಜರಿ ಮಳೆಯಾಗುತ್ತಿದ್ದು, ಅನೇಕ ಕಡೆಗಳಲ್ಲಿ ಮಳೆಯ ಆರ್ಭಟಕ್ಕೆ ಸಾವು ಕೂಡ ಸಂಭವಿಸಿದೆ. ಅದರಂತೆ ಇಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ(Madhu Bangarappa) ಅವರು ಶಿವಮೊಗ್ಗ(Shivamogga) ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಮಳೆ ಹಾನಿ ಕುರಿತು ಸಭೆ ನಡೆಸಲು ಆಗಮಿಸಿದ್ದರು. ಈ ವೇಳೆ ಸಚಿವರು ಆಗಮಿಸುತ್ತಿದ್ದಂತೆ ಬಿಜೆಪಿ ಯುವ ಮೋರ್ಚಾದಿಂದ ಶಾಲಾ ಪಠ್ಯದಿಂದ ಹೆಡ್ಗೆವಾರ್, ಸಾವರ್ಕರ್ ಪಾಠ ಕೈಬಿಟ್ಟಿದ್ದಕ್ಕೆ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಹೌದು ಜಿಲ್ಲಾ ಪಂಚಾಯತಿ ಸಭಾಂಗಣಕ್ಕೆ ನುಗ್ಗಿದ ಪ್ರತಿಭಟನಾಕಾರರು, ಮಧು ಬಂಗಾರಪ್ಪ ವಿರುದ್ಧ ಕಪ್ಪು ಬಟ್ಟೆ ಪ್ರದರ್ಶಿಸಿ ಆಕ್ರೋಶ ಹೊರಹಾಕಿದರು.

ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಕರೆದೊಯ್ದ ಪೊಲೀಸರು

ಹೌದು ಪಠ್ಯಪುಸ್ತಕ ಪರಿಷ್ಕರಣೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ದಿಢೀರ್ ಪ್ರತಿಭಟನೆ ನಡೆಸಿದ್ದು, ಈ ವೇಳೆ ಪ್ರತಿಭಟನಾಕಾರರು ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ದ ಧಿಕ್ಕಾರ ಕೂಗಿದ್ದಾರೆ. ಈ ಸಂದರ್ಭದಲ್ಲಿ ಸಚಿವರ ಅಂಗರಕ್ಷಕರು ಹಾಗೂ ಎಸ್ಪಿ ಅವರು ಪ್ರತಿಭಟನಾಕಾರರನ್ನು ತಡೆದು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.

ಹೆಡಗೇವಾರ್ ಹಾಗೂ ವೀರ ಸಾವರ್ಕರ್ ಪಠ್ಯಕ್ಕೆ ಕೊಕ್​ ನೀಡಿದ್ದ ಕಾಂಗ್ರೆಸ್​

ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಠ್ಯ ಪರಿಷ್ಕರಣೆ ಮಾಡಿ, ಅದಕ್ಕೆ ಆರ್​ಎಸ್​ಎಸ್​ ಸ್ಥಾಪಕ ಹೆಡಗೇವಾರ್ ಹಾಗೂ ವೀರ ಸಾವರ್ಕರ್ ಪಠ್ಯವನ್ನ ಸೇರಿಸಲಾಗಿತ್ತು. ಬಳಿಕ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಈ ಪಠ್ಯಕ್ಕೆ ಕೊಕ್​ ನೀಡಿತ್ತು. ಈ ಹಿನ್ನಲೆ ಇಂದು ಶಿವಮೊಗ್ಗದಲ್ಲಿ ಬಿಜಿಪಿ ಯುವಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ:ರಾಜಕೀಯ ತಿರುವು ಪಡೆದುಕೊಂಡ ಬಿಜೆಪಿ ಯುವ ಮೋರ್ಚಾ ಮುಖಂಡ ಹತ್ಯೆ ಕೇಸ್; ಇದು ರಾಜಕೀಯ ಕೊಲೆ ಎಂದ ಪ್ರಲ್ಹಾದ್ ಜೋಶಿ

ಇನ್ನು ಜಿಲ್ಲೆಯಲ್ಲಿ ಮಳೆ ಹಾನಿ ಹಾಗೂ ಅಡಕೆ ಎಲೆ ಚುಕ್ಕೆ ರೋಗ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಶಾಸಕರಾದ ಆರಗ ಜ್ಞಾನೇಂದ್ರ, ಶಾರದ ಪೂರ್ಯನಾಯ್ಕ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪಂಚಾಯತಿ ಸಿಇಒ ಸ್ನೇಹಲ್ ಲೋಖಂಡೆ, ಎಸ್ ಪಿ‌ ಮಿಥುನ್ ಕುಮಾರ್ ‌ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:30 am, Wed, 26 July 23