ಟಿವಿ9 ಇಂಪ್ಯಾಕ್ಟ್: ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣ; ಶಿಕ್ಷಕ ಅಮಾನತ್ತು

ಭದ್ರಾವತಿ ತಾಲೂಕಿನ ಕೋಮಾರನಹಳ್ಳಿ ಗ್ರಾ.ಪಂಚಾಯಿತಿಯ ಗುಡ್ಡದ ನೇರಲೆಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಶಂಕರಪ್ಪ ಹಾಗೂ ಇತರೆ ಶಿಕ್ಷಕರು ವಿದ್ಯಾರ್ಥಿಗಳ ಕೈಯಿಂದ ಶೌಚಾಲಯ ಸ್ವಚ್ಛಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕನನ್ನು ಅಮಾನತ್ತುಗೊಳಿಸಲಾಗಿದೆ.

ಟಿವಿ9 ಇಂಪ್ಯಾಕ್ಟ್: ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣ; ಶಿಕ್ಷಕ ಅಮಾನತ್ತು
ಭದ್ರಾವತಿ ತಾಲೂಕಿನ ಸರ್ಕಾರಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್
Follow us
Basavaraj Yaraganavi
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 28, 2023 | 4:06 PM

ಶಿವಮೊಗ್ಗ, ಡಿ.28: ಜಿಲ್ಲೆಯ ಭದ್ರಾವತಿ(Bhadravathi) ತಾಲೂಕಿನ ಗುಡ್ಡದ ನೇರಳೆಕೆರೆ ಗ್ರಾಮದ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣದ ವರದಿಯನ್ನು ಟಿವಿ9 ಡಿಜಿಟಲ್​ ಬಿತ್ತರಿಸಿತ್ತು. ಇದರ ಬೆನ್ನಲ್ಲೇ ಇದೀಗ ಗುಡ್ಡದ ನೆರಲೆಗೇರಿ ಗ್ರಾಮದ ಪ್ರಭಾರಿ ಮುಖ್ಯ ಶಿಕ್ಷಕ ಶಂಕರಪ್ಪ ಎಂಬುವವರನ್ನು ಅಮಾನತ್ತು ಮಾಡಿ ಡಿಡಿಪಿಐ(DDPI) ಪರಮೇಶ್ವರಪ್ಪ ಆದೇಶಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು ‘ನಿನ್ನೆ(ಡಿ.27) ಮಧ್ಯಾಹ್ನ ನನ್ನ ಗಮನಕ್ಕೆ ಬಂದಿತ್ತು. ನಾನು ಬಿಇಓ ಅವರಿಗೆ ಸೂಚನೆ ನೀಡಿದ್ದೆ, ಅವರು ಭೇಟಿ ನೀಡಿ ಪರಿಶೀಲನೆ ಮಾಡಿ ವರದಿ ನೀಡಿದ್ದಾರೆ. ವಿಡಿಯೋದಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಗಮನಕ್ಕೆ ಬಂದಿದೆ. ಈ ಹಿನ್ನಲೆಯಲ್ಲಿ ಮುಖ್ಯೋಪಾಧ್ಯಾಯ ಅಮಾನತ್ತು  ಮಾಡಿ, ಜಿಲ್ಲೆಯ ಎಲ್ಲ ಬಿಇಓ ಗಳಿಗೆ ಯಾವುದೇ ಕಾರಣಕ್ಕೂ ಮಕ್ಕಳಿಂದ ಶಾಲಾ ಮತ್ತು ಶೌಚಾಲಯ ಸ್ವಚ್ಛಗೊಳಿಸದಂತೆ ಸೂಚಿಸಿದ್ದೇನೆ ಎಂದರು.

ಇದನ್ನೂ ಓದಿ:ಬೆಂಗಳೂರು ಆಯ್ತು ಈಗ ಶಿವಮೊಗ್ಗ: ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್

ಘಟನೆ ವಿವರ

ಬೆಂಗಳೂರಿನ ಪೀಣ್ಯ ಬಳಿಯಿರುವ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್​ ಮಾಡಿಸಿದ ಅಮಾನವೀಯ ಘಟನೆ ನಡೆದಿತ್ತು.ಈ ಪ್ರಕರಣ ಮಾಸುವ ಮುನ್ನವೇ ಇದೀಗ ಇದೇ ರೀತಿಯ ಮತ್ತೊಂದು ಘಟನೆ ಶಿಕ್ಷಣ ಸಚಿವರ  ತವರು ಜಿಲ್ಲೆಯಲ್ಲೇ ಮರುಕಳಿಸಿತ್ತು. ಭದ್ರಾವತಿ ತಾಲೂಕಿನ ಕೋಮಾರನಹಳ್ಳಿ ಗ್ರಾ.ಪಂಚಾಯಿತಿಯ ಗುಡ್ಡದ ನೇರಲೆಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಶಂಕರಪ್ಪ ಹಾಗೂ ಇತರೆ ಶಿಕ್ಷಕರು ವಿದ್ಯಾರ್ಥಿಗಳ ಕೈಯಿಂದ ಶೌಚಾಲಯ ಸ್ವಚ್ಛಗೊಳಿಸಿದ್ದರು.  ಈ ಬಗ್ಗೆ ದಲಿತ ಸಂಘರ್ಷ ಸಮಿತಿ ಶಿವಮೊಗ್ಗ ಎಸಿ ಸತ್ಯನಾರಾಯಣ ಅವರಿಗೆ ದೂರು ಸಲ್ಲಿಸಿತ್ತು. ಮಕ್ಕಳನ್ನು ದುರ್ಬಳಕೆ ಮಾಡಿದ ಶಿಕ್ಷಕರ ವಿರುದ್ಧ ಕ್ರಮಕ್ಕೆ ಸಂಘಟನೆ ಮತ್ತು ಪೋಷಕರು ಒತ್ತಾಯಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್