ಶಿವಮೊಗ್ಗದಲ್ಲಿ ಪ್ರೇಮ್​ಸಿಂಗ್​ಗೆ ಚೂರಿ ಇರಿದ ಪ್ರಮುಖ ಆರೋಪಿಗೆ ಭಯೋತ್ಪಾದಕರ ಜೊತೆ ಲಿಂಕ್ ಇದೆ -ಸಚಿವ ಆರಗ ಜ್ಞಾನೇಂದ್ರ

ಪ್ರಮುಖ ಆರೋಪಿ ಜಬೀ ಲಿಂಕ್ ಭಯಾನಕವಾಗಿದೆ. ಆರೋಪಿಗೆ ಭಯೋತ್ಪಾದಕರ ಜೊತೆ ಲಿಂಕ್ ಇದೆ ಎಂದು ಶಿವಮೊಗ್ಗದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ರು.

ಶಿವಮೊಗ್ಗದಲ್ಲಿ ಪ್ರೇಮ್​ಸಿಂಗ್​ಗೆ ಚೂರಿ ಇರಿದ ಪ್ರಮುಖ ಆರೋಪಿಗೆ ಭಯೋತ್ಪಾದಕರ ಜೊತೆ ಲಿಂಕ್ ಇದೆ -ಸಚಿವ ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ, ಗೃಹ ಸಚಿವರು
Follow us
TV9 Web
| Updated By: ಆಯೇಷಾ ಬಾನು

Updated on: Sep 03, 2022 | 2:41 PM

ಶಿವಮೊಗ್ಗ: ಜಿಲ್ಲೆಯಲ್ಲಿ ಪ್ರೇಮ್​ಸಿಂಗ್​ಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಜಬೀ ಲಿಂಕ್ ಭಯಾನಕವಾಗಿದೆ. ಆರೋಪಿಗೆ ಭಯೋತ್ಪಾದಕರ ಜೊತೆ ಲಿಂಕ್ ಇದೆ ಎಂದು ಶಿವಮೊಗ್ಗದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಭಯಾನಕ ಮಾಹಿತಿ ನೀಡಿದ್ರು.

ಉಗ್ರರ ಜೊತೆ ನಂಟು ಇರುವುದು ಬಹಿರಂಗವಾಗುತ್ತಿದೆ. ಸದ್ಯದಲ್ಲೇ ಈ ಪ್ರಕರಣ ಎನ್​ಐಎಗೆ ಹಸ್ತಾಂತರ ಮಾಡ್ತೇವೆ ಎಂದರು. ಇನ್ನು ಶಿವಮೊಗ್ಗ ನಗರದಲ್ಲಿ ಶಾಂತಿಗಾಗಿ ನಡಿಗೆ ಜಾಥಾ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಚಿವ ಆರಗ ಜ್ಞಾನೇಂದ್ರ, ಶಿವಮೊಗ್ಗ ಜಿಲ್ಲೆ ಸಂಪೂರ್ಣ ಶಾಂತಿಯುತವಾಗಿದೆ. ಆಗಾಗ ಆಕಸ್ಮಿಕ ಘಟನೆಗಳು ನಡೆಯುತ್ತವೆ ಅಷ್ಟೇ. ಉಗ್ರರ ಜೊತೆ ಲಿಂಕ್ ಇದ್ದವರೊಂದಿಗೆ ಶಾಂತಿ ನಡಿಗೆ ನಡೆಸಲಿ. ರಾಜಕೀಯ ಪಕ್ಷ ಹೊರತುಪಡಿಸಿ ಕಾರ್ಯಕ್ರಮ ನಡೀತಿದೆ ಎಂದರು.

ಪ್ರೇಮ್ ಸಿಂಗ್ ಚಾಕು ಇರಿತ ಪ್ರಕರಣ: ಆರೋಪಿ ಜಬಿ ಪಿಎಫ್ ಐ ಮತ್ತು ಎಸ್​ಡಿಪಿಐ ಕಾರ್ಯಕ್ರಮದಲ್ಲಿ ಭಾಗಿ ಆಗಿರುವ ಫೋಟೋ ವೈರಲ್

ಶಿವಮೊಗ್ಗ: ಇತ್ತೀಚೆಗೆ ಶಿವಮೊಗ್ಗದಲ್ಲಿ ವೀರ್ ಸಾವರ್ಕರ್ (Veer Savarkar) ಫೋಟೋ ಹಾಕುವ ವಿಚಾರದಲ್ಲಿ SDPI ಬೆಂಬಲದಲ್ಲಿ ಮುಸ್ಲಿಮರು ಹಿಂಸಾಚಾರ (Muslim Area) ನಡೆಸಿದ್ದರು. ಪ್ರೇಮ್ ಸಿಂಗ್ ಎಂಬ ಯುವಕನಿಗೆ ಚಾಕು ಇರಿದಿದ್ದ ಪ್ರಕರಣವೂ ನಡೆದಿತ್ತು. ಇದೀಗ, ಪ್ರಕರಣದ ಎ1 ಆರೋಪಿ ಪಿಎಫ್ ಐ ಮತ್ತು ಎಸ್ ಡಿಪಿಐ ಸಂಘಟನೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಫೋಟೊ ಹಾಕಿರುವ ಬಗ್ಗೆ ಗಲಾಟೆ ಕುರಿತು ಕೆಲ ಮಾಹಿತಿ ಹಾಕಿ, ಎ1 ಆರೋಪಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪ್ರೇಮ್ ಸಿಂಗ್ ಪ್ರಕರಣದ ಪ್ರಮುಖ ಆರೋಪಿಯಾದ ಜಬೀವುಲ್ಲಾ PFI ಮತ್ತು SDPI ಕಾರ್ಯಕರ್ತ. ಈತ PFI/SDPI ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿರುವ ಪೋಟೋ ಇದಾಗಿದೆ. ಗಮನಾರ್ಹವೆಂದರೆ ಎ1 ಆರೋಪಿ ಜಬಿ ಪತ್ನಿ ಮಾತ್ರ ಜಬಿ ಯಾವುದೇ ಸಂಘಟನೆಯೊಂದಿಗೆ ನಂಟು ಹೊಂದಿಲ್ಲ. ಆ ಆರೋಪ ಸುಳ್ಳು ಎಂದು ಬೊಬ್ಬೆಯಿಟ್ಟಿದ್ದರು. ಶಿವಮೊಗ್ಗ ಪೊಲೀಸರ ತನಿಖೆಯ ದಿಕ್ಕು ತಪ್ಪಿಸುವ ಹುನ್ನಾರ ಇದಾಗಿದ್ದು, ಸುಳ್ಳು ಮಾಹಿತಿ ಕೊಡುವ ಮೂಲಕ ಶಿವಮೊಗ್ಗ ನಗರದಲ್ಲಿ ಅಶಾಂತಿ ಉಂಟುಮಾಡುವ ಹುನ್ನಾರ ನಡೆದಿದೆ ಎಂಬ ಮಾತು ಕೇಳಿಬಂದಿದೆ.

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ