AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಲ್ಲಿ ಸಿಎಫ್ಐ ಸೇರುವಂತೆ ಗೋಡೆ ಬರಹ ಬರೆದಿದ್ದ ಕಿಡಿಗೇಡಿಗಳು; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಕೆ.ಎಸ್​ ಈಶ್ವರಪ್ಪ ಆಗ್ರಹ

ಇಡೀ ದೇಶದಾದ್ಯಂತ ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆ ನಿಷೇಧ ಮಾಡಿ ಆದೇಶ ಹೊರಡಿಸಿದೆ. ಹೀಗಿರುವಾಗ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ಪಿಎಫ್ಐನ ಅಂಗ ಸಂಸ್ಥೆಯಾದ ಸಿಎಫ್ಐಗೆ ಸೇರುವಂತೆ ಕಿಡಿಗೇಡಿಗಳು ಗೋಡೆಯ ಮೇಲೆ ಜಾಯಿನ್ ಸಿಎಫ್ಐ ಎಂದು ಬರೆದಿದ್ದಾರೆ.

ಶಿವಮೊಗ್ಗದಲ್ಲಿ ಸಿಎಫ್ಐ ಸೇರುವಂತೆ ಗೋಡೆ ಬರಹ ಬರೆದಿದ್ದ ಕಿಡಿಗೇಡಿಗಳು; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಕೆ.ಎಸ್​ ಈಶ್ವರಪ್ಪ ಆಗ್ರಹ
ಶಿವಮೊಗ್ಗ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 04, 2022 | 3:01 PM

Share

ಶಿವಮೊಗ್ಗ: ಜಿಲ್ಲೆಯ ಶಿರಾಳಕೊಪ್ಪ ಪಟ್ಟಣದ ಎಂಟು ಕಡೆಗಳಲ್ಲಿ ಕೆಂಪು ಹಾಗೂ ನೀಲಿ ಬಣ್ಣದ ಸ್ಪ್ರೇ ಪೇಂಟ್​ಗಳನ್ನು ಬಳಕೆ ಮಾಡಿ ಜಾಯಿನ್ ಸಿಎಫ್ಐ(Join CFI) ಎಂದು ಬರೆಯಲಾಗಿದೆ. ಸರ್ಕಾರ ಈಗಾಗಲೇ ಪಿಎಫ್ಐ ಹಾಗೂ ಅದರ ಅಂಗಸಂಸ್ಥೆಗಳನ್ನು ಐದು ವರ್ಷಗಳ ಕಾಲ ನಿಷೇಧ ಮಾಡಿದ್ದರೂ ಸಹ ಆ ಸಂಘಟನೆ ಬಗ್ಗೆ ಗೋಡೆ ಮೇಲೆ ಬರೆದವರ ವಿರುದ್ಧ ಶಿರಾಳಕೊಪ್ಪ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡು ಗೋಡೆ ಬರಹ ಬರೆದವರ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

ನವೆಂಬರ್ 27ರಂದು ತಡರಾತ್ರಿ ಶಿರಾಳಕೊಪ್ಪದ ಹಳ್ಳೂರು ಕೇರಿ, ಭೋವಿ ಕಾಲನಿ, ಸಣ್ಣ ಬ್ಯಾಣದ ಕೇರಿ, ದೊಡ್ಡ ಬ್ಯಾಣದ ಕೇರಿ, ಹಿರೆಕೆರೂರ ರಸ್ತೆ, ಶಿಕಾರಿಪುರ ರಸ್ತೆಯ ಅಲ್ಲಲ್ಲಿ ಜಾಯಿನ್ ಸಿಎಫ್ಐ ಎಂದು ಬರೆದಿರುವುದನ್ನು ನವೆಂಬರ್ 28ರ ಬೆಳಗಿನ ಜಾವ ಬೀಟ್ ಪೊಲೀಸರು ಗಮನಿಸಿ ಕೂಡಲೇ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಸುಮೋಟೋ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಳಿಕ ಗೋಡೆ ಬರಹಗಳಿಗೆ ಬಣ್ಣ ಬಳಿದು ಅಳಿಸಿಹಾಕಿದ್ದಾರೆ. ಜೊತೆಗೆ ನಿಷೇಧಿತ ಸಂಘಟನೆ ಸೇರುವಂತೆ ಗೋಡೆ ಬರಹ ಬರೆದ ಕಿಡಿಗೇಡಿಗಳ ಬಂಧನಕ್ಕೆ ಬಲೆಯನ್ನು ಬೀಸಿದ್ದು, ಈ ಬಗ್ಗೆ ಕುಲಂಕಷ ತನಿಖೆ ಆರಂಭಿಸಿದ್ದಾರೆ.

ಇನ್ನು ಈ ಕುರಿತು ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಗೋಡೆ ಬರಹ ಬರೆಯುವವರು ಹೇಡಿಗಳು, ಪಿಎಫ್​ಐ ಎಂದು ಕೂಡ ಎದುರುಗಡೆ ಬಂದು ಹೋರಾಟ ಮಾಡುವುದಿಲ್ಲ, ಕತ್ತಲೆಯಲ್ಲಿ ಬಂದು ಕೊಲೆ ಮಾಡುವಂತಹ ಕೆಲಸಗಳನ್ನು ಮಾಡುತ್ತಾರೆ. ಅವರಿಗೆ ದೇಶ ಅಭಿವೃದ್ಧಿಯಾಗಬೇಕು ಎನ್ನುವ ಮನಸ್ಸಿಲ್ಲ ದೇಶದಲ್ಲಿ ಗಲಭೆ ಎಬ್ಬಿಸಬೇಕು, ದೇಶದಲ್ಲಿ ಹಿಂದೂತ್ವವನ್ನು ಅಳಿಸಬೇಕು ಎನ್ನುವ ಉದ್ದೇಶದಿಂದ ಪಿಎಫ್ಐ ಸಂಘಟನೆ ಮಾಡುತ್ತಿರುವ ದೇಶದ್ರೋಹಿ ಕೆಲಸ, ಇದು ಬಹಳ ದಿನ ನಮ್ಮ ದೇಶದಲ್ಲಿ ನಡೆಯಲ್ಲ ಎಂದಿದ್ದಾರೆ.

ಇದನ್ನೂ ಓದಿ:PFI Ban: ನಾಸೀರ್ ಪಾಷಾ ಸಲ್ಲಿಸಿದ್ದ ರಿಟ್ ಅರ್ಜಿ ವಜಾ, ಪಿಎಫ್ಐ ನಿಷೇಧವನ್ನು ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್

ಶಿವಮೊಗ್ಗ ಜಿಲ್ಲೆಯಲ್ಲಿ ಶಾಂತಿ ಕದಡುವ ಕೆಲಸವನ್ನು ಕೆಲ ಸಂಘಟನೆಗಳು ಹಾಗೂ ಕೆಲವರು ಮಾಡುತ್ತಿದ್ದು, ಇವರನ್ನು ಕೂಡಲೇ ಪತ್ತೆ ಹಚ್ಚಿ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸುವ ಮೂಲಕ ಸಮಾಜದಲ್ಲಿ ಶಾಂತಿ ಕಾಪಾಡಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

ವರದಿ: ಬಸವರಾಜ್ ಯರಗಣವಿ ಟಿವಿ9 ಶಿವಮೊಗ್ಗ

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ