ಅನಂತಕುಮಾರ್ ಹೆಗಡೆ ಹೇಳಿಕೆಯಲ್ಲಿ ತಪ್ಪೇನು ಇಲ್ಲ -ಪ್ರಚೋದನಕಾರಿ ಹೇಳಿಕೆ ಸಮರ್ಥಿಸಿಕೊಂಡ ಕೆಎಸ್ ಈಶ್ವರಪ್ಪ
ಬಾಬ್ರಿ ಮಸೀದಿ ನಿರ್ನಾಮದಂತೆ ಭಟ್ಕಳದಲ್ಲಿಯೂ ಮಾಡ್ತೇವೆ, ಅದರ ಸಾಲಿಗೆ ಭಟ್ಕಳದ ಚಿನ್ನದ ಪಳ್ಳಿ ಸೇರಲಿದೆ. ಎಲ್ಲೆಲ್ಲಿ ದೇವಸ್ಥಾನ ಒಡೆದು ಮಸೀದಿಗಳನ್ನು ಕಟ್ಟಿದ್ದಾರೋ ಅಲ್ಲೆಲ್ಲ ಮತ್ತೆ ದೇವಸ್ಥಾನ ನಿರ್ಮಾಣವಾಗಲಿದೆ ಎಂದು ಸಂಸದ ಅನಂತಕುಮಾರ್ ಹೆಗಡೆ ಪ್ರಚೋದನಾಕರಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು K.S.ಈಶ್ವರಪ್ಪ ಸಮರ್ಥಿಸಿಕೊಂಡಿದ್ದಾರೆ.
ಶಿವಮೊಗ್ಗ, ಜ.14: ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ಉದ್ಘಾಟನೆ ಹೊಸ್ತಿಲಲ್ಲಿ (Ayodhya Ram Mandir) ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ (Ananth Kumar Hegde) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇನ್ನು ಸಂಸದರ ಪ್ರಚೋದನಕಾರಿ ಹೇಳಿಕೆಗೆ ಈಶ್ವರಪ್ಪ ಸಮರ್ಥನೆ ನೀಡಿದ್ದಾರೆ. ದೇವಸ್ಥಾನಗಳನ್ನ ಒಡೆದು ಮಸೀದಿಗಳನ್ನ ನಿರ್ಮಿಸಿದ್ದಾರೆ. ಹಾಗಾಗಿ ಸಂಸದ ಅನಂತಕುಮಾರ್ ಹೆಗಡೆ ಹೇಳಿದ್ದಾರೆ. ಇದೇನು ತಪ್ಪಲ್ಲ ಎಂದು ಮಾಜಿ ಸಚಿವ K.S.ಈಶ್ವರಪ್ಪ (KS Eshwarappa) ಸಮರ್ಥಿಸಿಕೊಂಡಿದ್ದಾರೆ.
ಬಾಬ್ರಿ ಮಸೀದಿ ನಿರ್ನಾಮದಂತೆ ಭಟ್ಕಳದಲ್ಲಿಯೂ ಮಾಡ್ತೇವೆ, ಅದರ ಸಾಲಿಗೆ ಭಟ್ಕಳದ ಚಿನ್ನದ ಪಳ್ಳಿ ಸೇರಲಿದೆ. ಎಲ್ಲೆಲ್ಲಿ ದೇವಸ್ಥಾನ ಒಡೆದು ಮಸೀದಿಗಳನ್ನು ಕಟ್ಟಿದ್ದಾರೋ ಅಲ್ಲೆಲ್ಲ ಮತ್ತೆ ದೇವಸ್ಥಾನ ನಿರ್ಮಾಣವಾಗಲಿದೆ ಎಂದು ಸಂಸದ ಅನಂತಕುಮಾರ್ ಹೆಗಡೆ ಪ್ರಚೋದನಾಕರಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು K.S.ಈಶ್ವರಪ್ಪ ಸಮರ್ಥಿಸಿಕೊಂಡಿದ್ದಾರೆ. ಅನಂತ್ ಕುಮಾರ್ ಹೆಗಡೆ ಹೇಳಿರೋದು ಶ್ರೀರಂಗಪಟ್ಟಣ, ಕಾರವಾರ ಜಿಲ್ಲೆಯಲ್ಲಿ ದೇವಸ್ಥಾನ ಹೊಡೆದು ಮಸೀದಿ ಕಟ್ಟಿದ್ದಾರೆ ಅಂತ. ಅದರಲ್ಲಿ ತಪ್ಪೇನು ಇಲ್ಲ. ಇದನ್ನು ಎಲ್ಲಾ ಭಾರತೀಯರು ಸ್ವಾಗತ ಮಾಡಬೇಕು. ನಮ್ಮ ಸಂಸ್ಕೃತಿ ಉಳಿಯಬೇಕು ಅಂತಾ ಹೋರಾಟ ಮಾಡಿಕೊಂಡು ಬಂದ್ರು. ಹಿಂದುಗಳ ದೇವಾಲಯ ಹೊಡೆದು ಮಸೀದಿ ಕಟ್ಟಿದ್ದಾರೆ. ಸಿದ್ದರಾಮಯ್ಯ ಅವರು ತಿದ್ದಿಕೊಳ್ಳಬೇಕು. ದೇವಸ್ಥಾನಗಳನ್ನ ಒಡೆದು ಮಸೀದಿಗಳನ್ನ ನಿರ್ಮಿಸಿದ್ದಾರೆ. ಹಾಗಾಗಿ ಸಂಸದ ಅನಂತಕುಮಾರ್ ಹೆಗಡೆ ಹೇಳಿದ್ದಾರೆ. ಇದೇನು ತಪ್ಪಲ್ಲ. ಇದನ್ನು ಎಲ್ಲಾ ಭಾರತೀಯರು ಸ್ವಾಗತ ಮಾಡಬೇಕು ಎಂದರು.
ಇದನ್ನೂ ಓದಿ: ವಿವಾದಾತ್ಮಕ ಮಾತುಗಳ ಮೂಲಕ ಪುನಃ ಮುನ್ನೆಲೆಗೆ ಬಂದ ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ
ಇನ್ನು ಶಿವಮೊಗ್ಗದಲ್ಲಿ ಮಾತನಾಡಿದ ಕೆಎಸ್ ಈಶ್ವರಪ್ಪ ಅವರು ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ವಿಚಾರ ಸಂಬಂಧ ಅನಂತಕುಮಾರ್ ಹೆಗಡೆ ಪರ ಈಶ್ವರಪ್ಪ ಬ್ಯಾಟಿಂಗ್ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಕೂಡ ತಿದ್ದಿಕೊಳ್ಳಬೇಕು. ಅವರು ಮೋದಿ ಬಗ್ಗೆ ಏಕವಚನದಲ್ಲಿ ಮಾತಾಡಿದ್ದಾರೆ. ಹಿಜಾಬ್ ಬಗ್ಗೆ ಹೇಳಿಕೆ ಕೊಡ್ತಾರೆ ಇದ್ಯಾವ ನ್ಯಾಯ? ಎಂದು ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಕೆ.ಎಸ್.ಈಶ್ವರಪ್ಪ ವಾಗ್ದಾಳಿ
ಸಿದ್ದರಾಮಯ್ಯ ರಾಮಮಂದಿರಕ್ಕೆ ಹೋಗಲ್ಲ ಅಂದಿದ್ರು. ಜ.22ರ ನಂತರ ಅಯೋಧ್ಯೆಗೆ ಹೋಗ್ತೇನೆ ಅಂದಿದ್ದರು. ಮತ್ತೆ ನಾನು ರಾಮ ಮಂದಿರಕ್ಕೆ ಹೋಗಲ್ಲ ಅಂದಿದ್ದಾರೆ. ಸಿದ್ದರಾಮಯ್ಯರು ನಿಮಿಷಕ್ಕೊಂದು ಮಾತನಾಡ್ತಾರೆ. ನಿಮ್ಮ ಹೆಸರಿನಲ್ಲಿ ಸಿದ್ದ ರಾಮ ಎರಡೂ ಇದೆ. ರಾಮಮಂದಿರಕ್ಕೆ ಹೋಗಿ ನಿಮ್ಮ ಪಾಪ ಕಳೆದುಕೊಂಡು ಬನ್ನಿ. ನೀವ್ಯಾಕೆ ಬಿಜೆಪಿ ರಾಮಮಂದಿರ ಅಂದುಕೊಳ್ಳುತ್ತೀರಾ? ನಾವು ಈ ವಿಷಯದಲ್ಲಿ ರಾಜಕಾರಣ ಮಾಡುತ್ತಿಲ್ಲ. ಇಡೀ ಪ್ರಪಂಚದ ಹಿಂದುಗಳನ್ನು ಒಂದು ಮಾಡಲು ಶ್ರೀರಾಮ ಇರೋದು. ಯಾವ ರೀತಿ ರಾಜಕಾರಣ ಮಾಡ್ತಿದ್ದೇವೆ ಅಂತಾ ನೀವು ಹೇಳಿದ್ರೆ ನಾವು ತಿದ್ದಿಕೊಳ್ಳುವ ಪ್ರಯತ್ನ ಮಾಡ್ತೇವೆ ಎಂದು ತಿಳಿಸಿದರು.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 11:52 am, Sun, 14 January 24