AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರೇ ಗಮನಿಸಿ: ತೀರ್ಥಹಳ್ಳಿ, ಕುಂದಾಪುರ ರಾಜ್ಯ ಹೆದ್ದಾರಿ ಬಂದ್​​; ಬದಲಿ ಮಾರ್ಗಗಳ ಮಾಹಿತಿ ಇಲ್ಲಿದೆ

ಹುಲಿಕಲ್ ಘಾಟ್‌ನಲ್ಲಿ ಮತ್ತೆ ಭೂಕುಸಿತ ಉಂಟಾದ ಕಾರಣ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಸ್ತೆಯ ಸುರಕ್ಷತಾ ಕಾಮಗಾರಿ ಮುಗಿಯುವವರೆಗೆ ಈ ನಿರ್ಬಂಧ ಅನ್ವಯವಾಗಲಿದೆ. ಎಲ್ಲಾ ವಾಹನಗಳಿಗೂ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಇತ್ತೀಚೆಗೆ ಇದೇ ಮಾರ್ಗದಲ್ಲಿ ನಡೆದ ಭೂಕುಸಿತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.

ಪ್ರಯಾಣಿಕರೇ ಗಮನಿಸಿ: ತೀರ್ಥಹಳ್ಳಿ, ಕುಂದಾಪುರ ರಾಜ್ಯ ಹೆದ್ದಾರಿ ಬಂದ್​​; ಬದಲಿ ಮಾರ್ಗಗಳ ಮಾಹಿತಿ ಇಲ್ಲಿದೆ
ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ ಬಂದ್​​
Basavaraj Yaraganavi
| Edited By: |

Updated on: Apr 12, 2026 | 11:14 AM

Share

ಶಿವಮೊಗ್ಗ, ಏಪ್ರಿಲ್​​ 12: ಹುಲಿಕಲ್ ಘಾಟಿಯಲ್ಲಿ ಸುಮಾರು 5 ಅಡಿ ಅಗಲದವರೆಗೆ ಮತ್ತೊಮ್ಮೆ ಭೂಕುಸಿತ ಉಂಟಾದ ಹಿನ್ನೆಲೆ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ. ಕಾಂಕ್ರೀಟ್ ರಸ್ತೆಯಲ್ಲಿ ಅಲ್ಲಲ್ಲಿ ಬಿರುಕುಗಳು ಕಂಡು ಬಂದ ಹಿನ್ನೆಲೆ ಸುರಕ್ಷತಾ ದೃಷ್ಟಿಯಿಂದ ರಸ್ತೆಯು ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಘಾಟ್​​ನ ಹೇರ್‌ಪಿನ್ ತಿರುವಿನಲ್ಲಿ ರಕ್ಷಣಾತ್ಮಕ ಕಾಮಗಾರಿಯೂ ಪೂರ್ಣಗೊಳ್ಳುವವರೆಗೆ ಈ ಮಾರ್ಗದಲ್ಲಿ ಸಂಚಾರಕ್ಕೆ ಅವಕಾಶ ಇರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೂ ಇದು ಅನ್ವಯವಾಗಲಿದೆ. ಪರ್ಯಾಯ ಮಾರ್ಗಗಳಲ್ಲಿ ತಾತ್ಕಾಲಿಕವಾಗಿ ಸಂಚರಿಸಲು ಸೂಚಿಸಲಾಗಿದೆ.

ಪರ್ಯಾಯ ಮಾರ್ಗಗಳು

  • ತೀರ್ಥಹಳ್ಳಿ ಕಡೆಯಿಂದ ಕುಂದಾಪುರ ಕಡೆಗೆ ತೆರಳುವ ವಾಹನಗಳು, ತೀರ್ಥಹಳ್ಳಿ-ರಾವೆ-ಕಾನುಗೋಡು-ನಗರ-ಕೊಲ್ಲೂರು ಮೂಲಕ ಕುಂದಾಪುರಕ್ಕೆ ತೆರಳಬೇಕು.
  • ತೀರ್ಥಹಳ್ಳಿಯಿಂದ ಯಡೂರು, ಹುಲಿಕಲ್​​ ಮಾರ್ಗವಾಗಿ ತೆರಳುವವರು ತೀರ್ಥಹಳ್ಳಿ-ಯಡೂರು, ಮಾಸ್ತಿಕಟ್ಟೆ- ಕಾನುಗೋಡು-ನಗರ-ಕೊಲ್ಲೂರು ಮೂಲಕ ಕುಂದಾಪುರಕ್ಕೆ ಸಂಚರಿಸಬೇಕು.
  • ಶಿವಮೊಗ್ಗ/ಸಾಗರ ಕಡೆಯಿಂದ ಹೊಸನಗರ ಮೂಲಕ ತೆರಳುವವರು ಶಿವಮೊಗ್ಗ-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ತೆರಳಿ ಭಟ್ಕಳ-ಬೈಂದೂರು ಮಾರ್ಗವಾಗಿ ಕುಂದಾಪುರಕ್ಕೆ ತೆರಳಬೇಕು.

ಇದನ್ನೂ ಓದಿ: ಗಂಡನ ಮನೆಯವರ ಕಿರುಕುಳಕ್ಕೆ ಜೀವಬಿಟ್ಟ 4 ತಿಂಗಳ ಗರ್ಭಿಣಿ: ಪತಿ ಮನೆಯವರಿಂದಲೇ ಕೊಲೆಯೆಂದು ಪೋಷಕರ ಆರೋಪ

ರಸ್ತೆ ಕಾಮಗಾರಿ ವೇಳೆ ಗುಡ್ಡ ಕುಸಿದು ಮೃತಪಟ್ಟಿದ್ದ ಮೂವರು

ಹುಲಿಕಲ್ ಘಾಟ್​ನಲ್ಲಿ ರಸ್ತೆ ಕಾಮಗಾರಿ ವೇಳೆ ಗುಡ್ಡ ಕುಸಿದು ಓರ್ವ ಹೊರ ರಾಜ್ಯದ ಕಾರ್ಮಿಕ ಸೇರಿ ಮೂವರು ಮೃತಪಟ್ಟಿರುವ ಘಟನೆ ಮೊನ್ನೆ ಮೊನ್ನೆಯಷ್ಟೇ ನಡೆದಿತ್ತು. ಅವಘಡದಲ್ಲಿ ರಾಘವೇಂದ್ರ(37), ರಾಜು(30) ಮತ್ತು ಶಬ್ಬೀರ್(40) ಮೃತಪಟ್ಟಿದ್ದರು. ಸುಮಂತ ಮತ್ತು ಪರಮೇಶ್​ ಸೇರಿ ನಾಲ್ವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಘಟನೆ ಮಾಸುವ ಮುನ್ನವೇ ರಸ್ತೆಯ ಕೆಲವೆಡೆ ಅಪಾಯದ ಮುನ್ಸೂಚನೆ ಸಿಕ್ಕ ಹಿನ್ನೆಲೆ ಜಿಲ್ಲಅಧಿಕಾರಿಗಳು ಮಹತ್ವದ ಆದೇಶ ಹೊರಡಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್