Sulebail: ಶಿವಮೊಗ್ಗದ ಸೂಳೆಬೈಲಿನಲ್ಲಿ 7 ಹಸುಗಳ ಕತ್ತು ಕೊಯ್ದು ಬರ್ಬರ ಹತ್ಯೆ

| Updated By: ಸಾಧು ಶ್ರೀನಾಥ್​

Updated on: Jan 13, 2023 | 12:53 PM

ಅಜೀಜ್, ಬಾಬು, ಅಬ್ದುಲ್ ಸತ್ತರ್ ಹಾಗೂ ಇತರ ಮೂವರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Sulebail: ಶಿವಮೊಗ್ಗದ ಸೂಳೆಬೈಲಿನಲ್ಲಿ 7 ಹಸುಗಳ ಕತ್ತು ಕೊಯ್ದು ಬರ್ಬರ ಹತ್ಯೆ
ಶಿವಮೊಗ್ಗದ ಸೂಳೆಬೈಲಿನಲ್ಲಿ 7 ಹಸುಗಳ ಕತ್ತು ಕೊಯ್ದು ಬರ್ಬರ ಹತ್ಯೆ
Follow us on

ಶಿವಮೊಗ್ಗ: ಶಿವಮೊಗ್ಗ (shivamogga) ಹೊರವಲಯದ ಸೂಳೇಬೈಲಿನಲ್ಲಿ ಅಮಾನವೀಯ ಘಟನೆ ನಡೆದಿದ್ದು, ಪೊಲೀಸರು ಮತ್ತು ಮಹಾನಗರ ಪಾಲಿಕೆ ಸಿಬ್ಬಂದಿ ದಾಳಿ ವೇಳೆ ಭೀಕರ ಕೃತ್ಯ ಬೆಳಕಿಗೆ ಬಂದಿದೆ. ಇಲ್ಲಿನ ಅಕ್ರಮ ಕಸಾಯಿ ಖಾನೆಯಲ್ಲಿ (cow slaughterhouse) 7 ಹಸುಗಳ (cow) ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಖಚಿತ ಮಾಹಿತಿ ಮೇರೆಗೆ ಇಂದು ಬೆಳಗಿನ ಜಾವ 5.30 ಕ್ಕೆ ದಾಳಿ ತುಂಗಾನಗರ ಪೊಲೀಸರು ಮಾಡಿದ್ದರು.

ತುಂಗಾನಗರ ಠಾಣೆ ಪೊಲೀಸ್ ಇನ್ಸ್​ಪೆಕ್ಟರ್​​ ಮಂಜುನಾಥ್ ನೇತೃತ್ವದಲ್ಲಿ (Tunga nagar police) ಅಧಿಕಾರಿ ಮತ್ತು ಸಿಬ್ಬಂದಿಗಳಿಂದ ಈ ದಾಳಿ ನಡೆದಿತ್ತು. ಪೊಲೀಸರ ದಾಳಿಗೂ ಮುನ್ನವೇ 7 ಹಸುಗಳ ಮಾರಣಹೋಮ ನಡೆದುಹೋಗಿದೆ. ಸೂಳೆಬೈಲಿನ ಅಜೀಜ್ ಎಂಬುವರ ಮನೆ ಹಿಂಭಾಗದ ಶೆಡ್ ನಲ್ಲಿ ಮಾಂಸಕ್ಕಾಗಿ ಈ ಗೋವುಗಳ ಹತ್ಯೆ ಮಾಡಲಾಗಿದೆ. ಆದರೆ ಕಸಾಯಿ ಖಾನೆಯಲ್ಲಿ ಉಳಿದುಕೊಂಡಿದ್ದ ಇನ್ನೂ 10 ಹಸುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.

ಗೋವುಗಳನ್ನು ರಕ್ಷಣೆ ಮಾಡಿ, ಗೋಶಾಲೆಗೆ ಶಿಫ್ಟ್ ಮಾಡಿದ್ದೇವೆ. ದಾಳಿ ಬೆನ್ನಲ್ಲೆ ಆರೋಪಿಗಳು ಪರಾರಿಯಾಗಿದ್ದು, ಅವರುಗಳ ಪತ್ತೆಗಾಗಿ ಬಲೆ ಬೀಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಜೀಜ್, ಬಾಬು, ಅಬ್ದುಲ್ ಸತ್ತರ್ ಹಾಗೂ ಇತರ ಮೂವರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಜ್ಯದ ಇನ್ನಷ್ಟು  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ