ಶಿವಮೊಗ್ಗ: ಬೈಕ್- ಕೆಎಸ್​ಆರ್​ಟಿಸಿ ನಡುವೆ ಅಪಘಾತ; ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗದಲ್ಲಿ ಕೆಎಸ್​ಆರ್​ಟಿಸಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿದ್ದು, ಇಬ್ಬರು ಸವಾರರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಿವಮೊಗ್ಗ: ಬೈಕ್- ಕೆಎಸ್​ಆರ್​ಟಿಸಿ ನಡುವೆ ಅಪಘಾತ; ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ
ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರ
Follow us
TV9 Web
| Updated By: shivaprasad.hs

Updated on: Nov 05, 2021 | 12:10 PM

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮಾಚೇನಹಳ್ಳಿ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಕೆಎಸ್​​ಆರ್​ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ಧಾರೆ. ಮೃತರನ್ನು ಮಂಜುನಾಥ್ (28) ಮತ್ತು ಅಂತೋನಿ (35) ಎಂದು ಗುರುತಿಸಲಾಗಿದೆ. ಈರ್ವರೂ ಭದ್ರಾವತಿ ತಾಲೂಕಿನ ಜಯಂತಿ ನಗರ ಗ್ರಾಮಸ್ಥರಾಗಿದ್ದಾರೆ. ಬಸ್​ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಭದ್ರಾವತಿಯ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಾಗಲಕೋಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕ ಸಾವು ಆತ್ಮಹತ್ಯೆಗೆ ಯತ್ನಿಸಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕ ಕಂ ನಿರ್ವಾಹಕ ಭೀಮಪ್ಪ ಗೊಂದಿ ಸಾವಿಗೀಡಾಗಿದ್ದಾರೆ. ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಅವರು ನಿಧನ ಹೊಂದಿದ್ದಾರೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕೆರೂರು ಪಟ್ಟಣದ ಅವರು, ಸಾಲಬಾಧೆಯ ಕಾರಣ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಇತ್ತೀಚೆಗೆ ಸಂಬಳ ಸಹ ಸರಿಯಾಗಿ ಆಗಿಲ್ಲ. ಹೀಗಾಗಿ ಸಾಲವನ್ನು ತೀರಿಸಲಾಗದೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದರು. ನಂತರ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ನಿಧನ ಹೊಂದಿದ್ಧಾರೆ.

ಕುಡಿದ ಮತ್ತಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಗದಗ: ಕಿತ್ತೂರು ರಾಣಿ ಚೆನ್ನಮ್ಮ ಉದ್ಯಾನವನದಲ್ಲಿ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿರುವ ಉದ್ಯಾನವನದಲ್ಲಿ ಕುಡಿದ ಮತ್ತಿನಲ್ಲಿ ಮಾಂತೇಶ್ ಕೊಟ್ಟಗಿ(36) ಎಂಬುವವರು ನೇಣಿಗೆ ಶರಣಾಗಿದ್ದಾರೆ. ಗಜೇಂದ್ರಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಂಡ್ಯ: ಭಾರಿ ಮಳೆ ಹಿನ್ನೆಲೆ ಕಲ್ಲಿನಾಥಪುರದ ಸೇತುವೆಗೆ ಹಾನಿ ಮಂಡ್ಯ: ಭಾರಿ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ನಾಗಮಂಗಲ ತಾಲೂಕಿನ ಕಲ್ಲಿನಾಥಪುರ ಕಲ್ಲಿನಾಥಪುರದ ಸೇತುವೆಗೆ ಹಾನಿಯಾಗಿದ್ದು, ಅಪಾಯದ ಅಂಚಿನಲ್ಲಿದೆ. ಸೇತುವೆ ಮೇಲೆ ಓಡಾಡಲು ಜನರು ಹೆದರುತ್ತಿದ್ದಾರೆ. ಈ ಸೇತುವೆ ಮಂಡ್ಯ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುತ್ತದೆ.

ಮಂಡ್ಯ: ಭಾರೀ ಮಳೆಗೆ ಕೆಸರು ಗದ್ದೆಯಂತಾದ ರಸ್ತೆ; ರಸ್ತೆಯಲ್ಲೇ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ ಮಂಡ್ಯ ತಾಲೂಕಿನ ಮಲ್ಲಘಟ್ಟ ಗ್ರಾಮದಲ್ಲಿ ಜೋರು ಮಳೆಯಿಂದಾಗಿ ಶಿವಳ್ಳಿ-ಬಸರಾಳು ಮಾರ್ಗದ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಮಳೆನೀರಿನಿಂದಾಗಿ ರಸ್ತೆ ಕೆಸರು ಗದ್ದೆಯಂತಾಗಿದ್ದು, ಶಾಲೆಗೆ ತೆರಳುವ ವಿದ್ಯಾರ್ಥಿಗಳು, ಕೃಷಿ ಕೆಲಸಕ್ಕೆ ತೆರಳುವ ರೈತರಿಗೆ ತೊಂದರೆಯಾಗುತ್ತಿದೆ. ಪ್ರತಿ ಬಾರಿ ಮಳೆ ಸುರಿದಾಗಲು ಇದೇ ಪರಿಸ್ಥಿತಿ ಉಂಟಾಗುತ್ತಿದ್ದು, ಸಂಬಂಧಪಟ್ಟವರು ರಸ್ತೆ ದುರಸ್ತಿ ಮಾಡಿ ಎಂದು ಗ್ರಾಮಸ್ಥರ ಆಗ್ರಹಿಸಿದ್ದಾರೆ. ಇದಕ್ಕಾಗಿ ಅವರು ಹದಗೆಟ್ಟ ರಸ್ತೆಯಲ್ಲೇ ನಾಟಿ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ:

ದೀಪಾವಳಿಯ ಮರುದಿನ ದೆಹಲಿಯಲ್ಲಿ ತೀವ್ರವಾಗಿ ಹದಗೆಟ್ಟ ಗಾಳಿಯ ಗುಣಮಟ್ಟ , ಮುಂಬೈಯಲ್ಲಿ ಸಾಧಾರಣ

Shocking Video: ತನ್ನ ತೊಡೆಯ ಮೇಲೆ ಹರಿದು ಬಂದ ಹಾವು ನೋಡಿ ವ್ಯಕ್ತಿ ಕಂಗಾಲು! ಮುಂದೇನಾಯ್ತು? ವಿಡಿಯೊ ನೋಡಿ