Bull Race: ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹೋರಿ ತಿವಿದು ಶಿವಮೊಗ್ಗದಲ್ಲಿ ಇಬ್ಬರ ಸಾವು

| Updated By: ಆಯೇಷಾ ಬಾನು

Updated on: Jan 16, 2023 | 1:32 PM

ವರ್ಷದ ಮೊದಲ ಹಬ್ಬ ಸಂಕ್ರಾಂತಿ ಹಬ್ಬ ಹಿನ್ನೆಲೆ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆ ವೇಳೆ ಎರಡು ಪ್ರತ್ಯೇಕ ಪ್ರಕರಣದಲ್ಲಿ ಹೋರಿ ತಿವಿದು ಇಬ್ಬರು ಮೃತಪಟ್ಟಿದ್ದಾರೆ.

Bull Race: ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹೋರಿ ತಿವಿದು ಶಿವಮೊಗ್ಗದಲ್ಲಿ ಇಬ್ಬರ ಸಾವು
ಹೋರಿ ತಿವಿದು ಮೃತಪಟ್ಟ ಲೋಕೇಶ್, ರಂಗನಾಥ್
Follow us on

ಶಿವಮೊಗ್ಗ: ಹೋರಿ ತಿವಿದು ಇಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ನಿನ್ನೆ ವರ್ಷದ ಮೊದಲ ಹಬ್ಬ ಸಂಕ್ರಾಂತಿ ಹಬ್ಬ ಹಿನ್ನೆಲೆ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆ ವೇಳೆ ಎರಡು ಪ್ರತ್ಯೇಕ ಪ್ರಕರಣದಲ್ಲಿ ಹೋರಿ ತಿವಿದು ಇಬ್ಬರು ಮೃತಪಟ್ಟಿದ್ದಾರೆ.

ಜ.14 ರಂದು ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದ ಬಳಿಯ ಮಾಳೂರು ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ವೇಳೆ ರಂಗನಾಥ್ ಎಂಬ 24 ವರ್ಷದ ಯುವಕನಿಗೆ ಗಂಭೀರ ಗಾಯಗಳಾಗಿದ್ದು ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿ ಆಗದೆ ಇಂದು ಬೆಳಗ್ಗೆ ಯುವಕ ಮೃತಪಟ್ಟಿದ್ದಾನೆ. ಇನ್ನು ಮತ್ತೊಂದೆಡೆ ಶಿವಮೊಗ್ಗ ತಾಲೂಕಿನ ಕೊನಗನವಳ್ಳಿಯಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಎದೆಗೆ ಹೋರಿ ತಿವಿದ ಪರಿಣಾಮ ಲೋಕೇಶ್ ಎಂಬ 32 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ.

ನಿನ್ನೆ ಕೊನಗನವಳ್ಳಿಯ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋಗಿದ್ದ ಶಿವಮೊಗ್ಗ ನಗರ ಆಲ್ಕೊಳದ ನಿವಾಸಿಗೆ ಹೋರಿ ಎದೆಗೆ ತಿವಿದಿತ್ತು. ಆತ ಕೂಡಾ ಚಿಕಿತ್ಸೆ ಫಲಕಾರಿ ಆಗದೇ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ 6 ಜನರಿಗೆ ಗಾಯಗಳಾಗಿವೆ. ಮೃತ ಲೋಕೇಶ್ ರೈತಾಪಿ ವರ್ಗದವರಾಗಿದ್ದು, ಅವರಿಗೆ ಮೂರು ಮಕ್ಕಳಿದ್ದಾರೆ. ಪತ್ನಿಗೆ ಸರ್ಕಾರಿ ಕೆಲಸ ಕೊಡಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕೊನಗವಳ್ಳಿಯ ಹೋರಿ ಹಬ್ಬದ ಆಯೋಜಕರ ವಿರುದ್ಧ ದೂರು ದಾಖಲಾಗಿದೆ. ಕುಂಸಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Shocking News: ದೇವರ ವಿಗ್ರಹವನ್ನು ಧ್ವಂಸಗೊಳಿಸಿದ್ದಕ್ಕೆ ಯುವಕನನ್ನು ಮರಕ್ಕೆ ಉಲ್ಟಾ ನೇತುಹಾಕಿ ಥಳಿಸಿದ ಜನ

ಕುಡಿದ ಮತ್ತಿನಲ್ಲಿ ಅಪಘಾತ ಇಬ್ಬರ ಸಾವು

ಬೆಂಗಳೂರು ಗ್ರಾಮಾಂತರ: ನೆಲಮಂಗಲ ತಾಲೂಕಿನ ಕೆಂಗಲ್ ಕೆಂಪೊಹಳ್ಳಿ ಬಳಿ ರಾ.ಹೆ 48ರಲ್ಲಿ ಕುಡಿದ ಮತ್ತಿನಲ್ಲಿ ಹಿಂಬದಿಯಿಂದ ಕ್ಯಾಂಟರ್‌ಗೆ ಬೈಕ್​ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ.; ಯಶವಂತಪುರ ನಿವಾಸಿ ಪ್ರಕಾಶ್(38), ತಿಪಟೂರಿನ ಬಿಳಿಗೆರೆ ನಿವಾಸಿ ಗೌರಮ್ಮ(33) ಮೃತ ದುರ್ದೈವಿಗಳು. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಡಿದ ಮತ್ತಿನಲ್ಲಿ ರಾಯಲ್ ಎನ್‌ಫಿಲ್ಡ್ ಬೈಕ್ ಮೇಲೆ ತೆರಳುತ್ತಿದ್ದವರು ಕ್ಯಾಂಟರ್​ಗೆ ಗುದ್ದಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ ತಿಪಟೂರಿನ ಬಿಳಿಗೆರೆಗೆ ಹೊರಟಿದ್ದ ವೇಳೆ ಘಟನೆ ನಡೆದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:13 pm, Mon, 16 January 23