AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಕುರುಬರ ಪಾಳ್ಯದ ತುಂಗಾ ನದಿಯಲ್ಲಿ ನೀರುಪಾಲಾದ ಇಬ್ಬರು ಮೀನುಗಾರರು

ತುಂಗಾ ನದಿಯಲ್ಲಿ ಮುಳುಗಿ ಇಬ್ಬರು ಮೀನುಗಾರರು ನೀರುಪಾಲಾದ ಘಟನೆ ಶಿವಮೊಗ್ಗ ನಗರದ ಕುರುಬರ ಪಾಳ್ಯ ಬಳಿ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ, ದೊಡ್ಡಪೇಟೆ ಪೊಲೀಸರು ಸ್ಥಳಕ್ಕಾಗಮಿಸಿ ಶೋಧ ಕಾರ್ಯ ನಡೆಸುತ್ತಿದ್ದು, ನದಿ ದಂಡೆ ಮೇಲೆ ಮೊಬೈಲ್ ಹಾಗೂ ಬಟ್ಟೆಗಳು ಪತ್ತೆಯಾಗಿವೆ.

ಶಿವಮೊಗ್ಗ: ಕುರುಬರ ಪಾಳ್ಯದ ತುಂಗಾ ನದಿಯಲ್ಲಿ ನೀರುಪಾಲಾದ ಇಬ್ಬರು ಮೀನುಗಾರರು
ನೀರುಪಾಲಾದ ಮೀನುಗಾರರಿಗಾಗಿ ಶೋಧಕಾರ್ಯ ನಡೆಸುತ್ತಿರುವ ಅಗ್ನಿಶಾಮಕ ದಳದ ಸಿಬ್ಬಂದಿ
ಬಸವರಾಜ್​ ಯರಗಣವಿ
| Edited By: Rakesh Nayak Manchi|

Updated on:Sep 18, 2023 | 5:33 PM

Share

ಶಿವಮೊಗ್ಗ, ಸೆ.18: ತುಂಗಾ ನದಿಯಲ್ಲಿ ಮುಳುಗಿ ಇಬ್ಬರು ಮೀನುಗಾರರು ನೀರುಪಾಲಾದ ಘಟನೆ ಶಿವಮೊಗ್ಗ (Shivamogga) ನಗರದ ಕುರುಬರ ಪಾಳ್ಯ ಬಳಿ ನಡೆದಿದೆ. ಫಯಾಜ್ ಅಹ್ಮದ್ (18), ಅಂಜುಂ ಖಾನ್ (19) ನೀರುಪಾಲಾದ ಮೀನುಗಾರರು. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ದೊಡ್ಡಪೇಟೆ ಠಾಣಾ ಪೊಲೀಸರು ನೀರುಪಾಲಾದವರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ವೇಳೆ ತುಂಗ ನದಿ ದಂಡೆ ಮೇಲೆ ಮೊಬೈಲ್ ಹಾಗೂ ಬಟ್ಟೆಗಳು ಪತ್ತೆಯಾಗಿವೆ.

ಮೀನು ಹಿಡಿಯಲು ಹೋದ ವೇಳೆ ಯುವಕರು ನೀರು ಪಾಲಾಗಿದ್ದಾರೆ. ಸದ್ಯ ಬೋಟ್ ಮೂಲಕ ಅಗ್ನಿಶಾಮಕ ದಳದ ಸಿಬ್ಬಂದಿ ಪತ್ತೆಕಾರ್ಯ ನಡೆಸುತ್ತಿದ್ದಾರೆ.

ಚಿನ್ನ, ಹಣ, ಪೀಠೋಪಕರಣ ಸುಟ್ಟು ಭಸ್ಮ

ಬೆಂಗಳೂರು: ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಸಂಭವಿಸಿದ ಅಗ್ನಿ ಅವಘಡದಲ್ಲಿ ಚಿನ್ನಾಭರಣ, ಹಣ ಸಹಿತ ಪೀಠೋಪಕರಣಗಳು ಬೆಂಕಿಗೆ ಆಹುತಿಯಾದ ಘಟನೆ ಬೆಂಗಳೂರು ನಗರದ ಚಾಮರಾಜಪೇಟೆಯ ಆನಂದಪುರದಲ್ಲಿ ನಡೆದಿದೆ.

ಇದನ್ನೂ ಓದಿ: ಪ್ರತ್ಯೇಕ ಪ್ರಕರಣ: ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು, ಆಡು ಮೇಯಿಸಲು ಹೋಗಿದ್ದ ಯುವಕ ನದಿಯಲ್ಲಿ ‌ಮುಳುಗಿ ಸಾವು ಶಂಕೆ

ಭಾಗ್ಯಮ್ಮ, ಮುರುಗನ್ ಎಂಬುವರಿಗೆ ಸೇರಿದ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಈ ದುರ್ಘಟನೆ ಸಂಭವಿಸಿದೆ. ಸ್ಫೋಟದ ವೇಳೆ ಸಮೀಪದಲ್ಲೇ ಇದ್ದ ಹಸ್ಸೀಬುಲ್ಲಾ ಎಂಬವರಿಗೆ ಗಾಯಗಳಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಒಟ್ಟು ಐದು ಸಿಲಿಂಡರ್​ಗಳ ಪೈಕಿ ಮೂರು ಸ್ಫೋಟಗೊಂಡಿವೆ. ಉಳಿದ ಎರಡು ಸಿಲಿಂಡರ್​ಗಳು ಖಾಲಿಯಾಗಿದ್ದವು.

ಸೂಟ್ ಕೆಸ್​ನಲ್ಲಿ ಮೃತ ದೇಹ ಪತ್ತೆ

ಕೊಡಗು: ವಿರಾಜಪೇಟೆ ತಾಲ್ಲೂಕಿನ ಮಾಕುಟ್ಟ ಅರಣ್ಯ ಪೃದೇಶದಲ್ಲಿ ಸೂಟ್​ಕೇಸ್​ನಲ್ಲಿ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಸ್ಥಳಕ್ಕೆ ಆಗಮಿಸಿದ ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:48 pm, Mon, 18 September 23

Follow Us
ಬಸವರಾಜ್​ ಯರಗಣವಿ
ಬಸವರಾಜ್​ ಯರಗಣವಿ

ಬಸವರಾಜ್ ಯರಗಣವಿಯವರು ಮೂಲತಃ ಧಾರವಾಡ ಜಿಲ್ಲೆಯವರು. ಇವರು ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ವರದಿಗಾರರಾಗಿ 2008ರ ಏಪ್ರಿಲ್ ನಿಂದ ವೃತ್ತಿ ಆರಂಭಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 3 ವರ್ಷ, ನಂತರ ಹಾವೇರಿ ಜಿಲ್ಲೆಯಲ್ಲಿ 3 ವರ್ಷ ವರದಿಗಾರಿಕೆಯ ಕೆಲಸ ನಿರ್ವಹಿಸಿದ್ದಾರೆ. ಸಧ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಟಿವಿ9 ಕನ್ನಡ ಸುದ್ದಿ ವಾಹಿನಿಯ ಹಿರಿಯ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯ ರಾಜಕೀಯ, ಅಪರಾಧ, ಮಹತ್ವದ ಬೆಳವಣಿಗೆ ಹಾಗೂ ಮಾನವೀಯ ಸುದ್ದಿಗಳನ್ನು ವರದಿ ಮಾಡಿರುವ ಅನುಭವವಿದೆ.

Read More
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ