Shivamogga News: ಪ್ರವಾಸಕ್ಕೆ ಬಂದಿದ್ದ ಇಬ್ಬರು ಉಪನ್ಯಾಸಕರು ನದಿಯಲ್ಲಿ ಮುಳುಗಿ ಸಾವು

ಪ್ರವಾಸಕ್ಕೆ ಬಂದಿದ್ದ ಇಬ್ಬರು ಉಪನ್ಯಾಸಕರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತೀರ್ಥಮುತ್ತೂರು ಮಠದ ಬಳಿಯ ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

Shivamogga News: ಪ್ರವಾಸಕ್ಕೆ ಬಂದಿದ್ದ ಇಬ್ಬರು ಉಪನ್ಯಾಸಕರು ನದಿಯಲ್ಲಿ ಮುಳುಗಿ ಸಾವು
ಇಬ್ಬರು ಉಪನ್ಯಾಸಕರು ನದಿಯಲ್ಲಿ ಮುಳುಗಿ ಸಾವು
Follow us
TV9 Web
| Updated By: ಆಯೇಷಾ ಬಾನು

Updated on: Jun 18, 2023 | 2:58 PM

ಶಿವಮೊಗ್ಗ: ಪ್ರವಾಸಕ್ಕೆ ಬಂದಿದ್ದ ಇಬ್ಬರು ಉಪನ್ಯಾಸಕರು ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತೀರ್ಥಮುತ್ತೂರು ಮಠದ ಬಳಿ ನಡೆದಿದೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ಪುನೀತ್(38), ಬಾಲಾಜಿ(36) ಮೃತ ದುರ್ದೈವಿಗಳು. ಶನಿವಾರ ಪ್ರವಾಸಕ್ಕೆ ಬಂದಿದ್ದ ಇಬ್ಬರು ಹೋಮ್​ ಸ್ಟೇನಲ್ಲಿ ತಂಗಿದ್ದರು. ತುಂಗಾ ನದಿಗೆ ಈಜಲು ಹೋಗಿದ್ದಾಗ ಮುಳುಗಿ ಮೃತಪಟ್ಟಿದ್ದಾರೆ.

ಗೋಕರ್ಣದ ಓಂ ಬೀಚ್‌ನಲ್ಲಿ ಪ್ರವಾಸಿಗರ ಹುಚ್ಚಾಟ

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಓಂ ಬೀಚ್‌ನ ಕಡಲತೀರದಲ್ಲಿ ಪ್ರವಾಸಿಗರು ಹುಚ್ಚಾಟ ಮೆರೆದಿದ್ದಾರೆ. ಅಲೆಗಳು ಜೋರಾಗಿ ಅಪ್ಪಳಿಸುತ್ತಿರುವ ಬಂಡೆಗಳ ಮೇಲೆ ನಿಂತು ಪ್ರವಾಸಿಗರು ಕುಂಟು ಧೈರ್ಯ ತೋರಿಸುತ್ತಿದ್ದಾರೆ. ಇನ್ನು ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಕಡಲತೀರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ‌‌ ಮಣಿಗಳು ಆಗಮಿಸುತ್ತಿದ್ದಾರೆ. ಕಡಲತೀರದಲ್ಲಿ ಅಲರ್ಟ್ ಇದ್ದರೂ ಮಾತು ಕೇಳದೆ ಉದ್ಧಟತನ ಮೆರೆದಿದ್ದಾರೆ. ಲೈಫ್‌ಗಾರ್ಡ್ ಮಾತಿಗೆ ಕ್ಯಾರೆ ಎನ್ನದೇ ಅಪಾಯಕಾರಿ ಬಂಡೆಗಲ್ಲುಗಳ ಮೇಲೆ‌ ಮಹಿಳೆಯರು ನಿಲ್ಲುತ್ತಿದ್ದಾರೆ. ಪ್ರಾಣ ಕಳೆದುಕೊಳ್ಳುವ ಆತಂಕವಿದ್ರೂ ಡೋಂಟ್ ಕೇರ್ ಎನ್ನುತ್ತಿದ್ದಾರೆ. ಪ್ರವಾಸಿಗರ ಹುಚ್ಚಾಟದಿಂದ ಲೈಫ್‌ಗಾರ್ಡ್‌ಗಳಿಗೆ ಟೆನ್ಶನ್ ಶುರುವಾಗಿದೆ.

ಇದನ್ನೂ ಓದಿ: ವೀಕೆಂಡ್- ಅಮವಾಸ್ಯೆ: ಬಸ್ ಫುಲ್ ರಶ್, ಧಾರ್ಮಿಕ ಸ್ಥಳಗಳಿಗೆ ಮಹಿಳಾ ಭಕ್ತರ ದಂಡು: ಹಲವೆಡೆ ಗಲಾಟೆ ಗದ್ದಲ

ಈಜಲು ತೆರಳಿದ್ದ ಯುವಕ ನೀರು ಪಾಲು

ಈಜಲು ತೆರಳಿದ್ದ ಯುವಕ ನೀರು ಪಾಲಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿಕಾರಿಪುರ ತಾಲೂಕಿನ ಗಾಂಧಿನಗರ ಗ್ರಾಮದ ಮನ್ಸೂರ್ ಸಾಬ್ ನೀರು ಪಾಲಾದ ಯುವಕ. ಮೃತದೇಹ ಪತ್ತೆಗೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದು ಘಟನಾ ಸ್ಥಳಕ್ಕೆ ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ