Shivamogga News: ಬಾಲಕಿ ಸಾವು, ಲೈಂಗಿಕ ದೌರ್ಜನ್ಯ; ಖಾಸಗಿ ವಸತಿ ಶಾಲೆಯ ಮಾಲೀಕನ ವಿರುದ್ಧ 2 ಎಫ್‌ಐಆರ್ ದಾಖಲು

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಖಾಸಗಿ ವಸತಿ ಶಾಲೆಯೊಂದರ ಮಾಲೀಕನ ವಿರುದ್ಧ ಭಾನುವಾರ ಎರಡು ಎಫ್‌ಐಆರ್ ದಾಖಲಾಗಿವೆ.

Shivamogga News: ಬಾಲಕಿ ಸಾವು, ಲೈಂಗಿಕ ದೌರ್ಜನ್ಯ; ಖಾಸಗಿ ವಸತಿ ಶಾಲೆಯ ಮಾಲೀಕನ ವಿರುದ್ಧ 2 ಎಫ್‌ಐಆರ್ ದಾಖಲು
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Jun 12, 2023 | 8:02 AM

ಶಿವಮೊಗ್ಗ: ಜಿಲ್ಲೆಯ ಸಾಗರ (Sagara) ತಾಲೂಕಿನ ಖಾಸಗಿ ವಸತಿ (Private School Hostel) ಶಾಲೆಯೊಂದರ ಮಾಲೀಕನ ವಿರುದ್ಧ ಭಾನುವಾರ ಎರಡು ಎಫ್‌ಐಆರ್ (FIR) ದಾಖಲಾಗಿವೆ. ಜೂನ್​ 8 ರಂದು ನಿಧನಳಾಗಿದ್ದ ವಿದ್ಯಾರ್ಥಿನಿ ತೇಜಸ್ವಿನಿ (13) ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ಪ್ರಕರಣ ದಾಖಲಾದರೇ, ಮತ್ತೊಂದು ಪ್ರಕರಣದಲ್ಲಿ ಲೈಂಗಿಕ ದೌರ್ಜನ್ಯದ (Sexual Assault) ದೂರು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಗರ ತಾಲೂಕಿನ ವನಶ್ರೀ ಖಾಸಗಿ ವಸತಿ ಶಾಲೆಗೆ ದಾಖಲಾದ ನಾಲ್ಕು ದಿನಗಳ ನಂತರ 8 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ತೇಜಸ್ವಿನಿ ಸಾವನ್ನಪ್ಪಿದ್ದಾಳೆ. ಗುರುವಾರ ಮಧ್ಯಾಹ್ನ ಆಕೆಯ ಆರೋಗ್ಯ ಹದಗೆಟ್ಟ ಹಿನ್ನೆಲೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು. ಹದಿಹರೆಯದವರ ಸಾವಿಗೆ ಕಾರಣವೇನು ಎಂದು ವೈದ್ಯರು ಶಂಕಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ವಿದ್ಯಾರ್ಥಿನಿಯ ಸಾವಿಗೆ ನಿಖರವಾದ ಕಾರಣ ತಿಳಿಯಲಿದೆ ಎಂದು ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಜಿ ಕೆ ಮಿಥುನ್ ಕುಮಾರ್ ಹೇಳಿದ್ದಾರೆ.

ಶಾಲೆಯ ಮಾಲೀಕ ಬಿ.ಕೆ.ಮಂಜಪ್ಪ ಅವರನ್ನು ಬಂಧಿಸಿ ಪ್ರಥಮ ದರ್ಜೆ (ಜೆಎಂಎಫ್‌ಸಿ) ನ್ಯಾಯಾಲಯದ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ. ತಮ್ಮ ಮಗಳ ಆರೋಗ್ಯ ಹದಗೆಟ್ಟಿರುವ ಬಗ್ಗೆ ಶಾಲೆಯವರು ತಿಳಿಸಲಿಲ್ಲ ಎಂದು ವಿದ್ಯಾರ್ಥಿನಿಯ ಪೋಷಕರು ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲಾ ಆಡಳಿತ ಮಂಡಳಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಾಲಕಿಯ ಪೋಷಕರು ಹಾಗೂ ಸಂಬಂಧಿಕರು ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ವಸತಿ ಶಾಲೆಯಲ್ಲಿದ್ದ ವಿದ್ಯಾರ್ಥಿನಿ ನಿಗೂಢ ಸಾವು

ಮತ್ತೊಂದು ಪ್ರಕರಣದಲ್ಲಿ 14 ವರ್ಷದ ಬಾಲಕಿಯ ಚಿಕ್ಕಮ್ಮ ನೀಡಿದ ದೂರಿನ ಪ್ರಕಾರ ಬಾಲಕಿ ಹೊಟ್ಟೆನೋವಿನಿಂದ ಬಳಲುತ್ತಿದ್ದರೂ, ಮಾಲೀಕ ಅವಳನ್ನು ಆಸ್ಪತ್ರೆಗೆ ಕರೆದೊಯ್ಯಲಿಲ್ಲ, ಬದಲಿಗೆ ಅವರು ಅವಳನ್ನು ತನ್ನ ಕೋಣೆಗೆ ಕರೆದೊಯ್ದು ಕೆಲವು ಮಾತ್ರೆಗಳನ್ನು ನೀಡಿದರು ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಯು ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಹೆಸರಿನಲ್ಲಿ ಮಾಲೀಕರು ಅಪ್ರಾಪ್ತ ವಯಸ್ಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ.

ಇನ್ನು ಬಾಲಕಿಯ ತಂದೆಯಿಂದ ದೂರನ್ನು ಸ್ವೀಕರಿಸಿದ ನಂತರ ನಾವು ಸೆಕ್ಷನ್ 504,506 354 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (ದೌರ್ಜನ್ಯ ತಡೆ) ಕಾಯಿದೆಯ ಇತರ ವಿಭಾಗಗಳು ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಎಸ್‌ಪಿ ತಿಳಿಸಿದರು.

ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:01 am, Mon, 12 June 23

ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು