ನಿಯಂತ್ರಣ ತಪ್ಪಿ ಕಾರು ಪಲ್ಟಿ, ಇಬ್ಬರು ಶಿಕ್ಷಕರು ಸ್ಥಳದಲ್ಲೇ ಸಾವು

ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನಿಬ್ಬರು ಶಿಕ್ಷಕರಿಗೆ ಗಂಭೀರ ಗಾಯಗಳಾಗಿವೆ. ತುಮಕೂರಿನಿಂದ ಮದುವೆ ಆರತಕ್ಷತೆ ಕಾರ್ಯಕ್ರಮ ಮುಗಿಸಿ ಪಾವಗಡಕ್ಕೆ ವಾಪಸ್ಸು ಹೋಗುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ.

ನಿಯಂತ್ರಣ ತಪ್ಪಿ ಕಾರು ಪಲ್ಟಿ, ಇಬ್ಬರು ಶಿಕ್ಷಕರು ಸ್ಥಳದಲ್ಲೇ ಸಾವು
Follow us
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: ರಮೇಶ್ ಬಿ. ಜವಳಗೇರಾ

Updated on: May 12, 2024 | 12:23 PM

ತುಮಕೂರು, (ಮೇ 12): ಜಿಲ್ಲೆಯ (Tumkur) ಪಾವಗಡ ತಾಲೂಕಿನಲ್ಲಿ ಕಾರೊಂದು (Pavagada Accident) ಪಲ್ಟಿಯಾಗಿದ್ದು, ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಶಿಕ್ಷಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಕಣಿವೆನಹಳ್ಳಿ ಗೇಟ್‌ ಬಳಿ ಕಾರು ಪಲ್ಟಿಯಾಗಿದೆ. ನಾಲ್ವರೂ ತುಮಕೂರಿನಲ್ಲಿ ಮದುವೆ ಆರತಕ್ಷತೆ ಮುಗಿಸಿಕೊಂಡು ಪಾವಗಡಕ್ಕೆ ತೆರಳುತ್ತಿದ್ದರು. ಇದೇ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಮಗುಚಿದೆ. ಕಾರು ಪಲ್ಟಿಯಾದ ತೀವ್ರತೆಗೆ ಒ. ಧನಂಜಯ ಹಾಗೂ ಶ್ರೀಕೃಷ್ಣ ಅವರು ಮೃತಪಟ್ಟಿದ್ದಾರೆ. ಗಾಯಗೊಂಡಿರುವ ನರಸಿಂಹ ಹಾಗೂ ವೆಂಕಟಾಚಲಪತಿ ಎಂಬುವರ ಸ್ಥಿತಿ ಗಂಭೀರವಾಗಿರುವ ಕಾರಣ ಅವರನ್ನು ಬೆಂಗಳೂರಿನ (Bengaluru) ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಒ. ಧನಂಜಯ ಅವರು ಪಾವಗಡ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿಭಾಗದ ಪ್ರಾಂಶುಪಾಲರಾಗಿದ್ದರು. ಇನ್ನು ಶ್ರೀಕೃಷ್ಣ ಅವರು ಪಾವಗಡ ತಾಲೂಕಿನ ಗೌಡೇಟಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾಗಿದ್ದರು. ಪಲ್ಟಿಯಾದ ತೀವ್ರತೆಗೆ ಕಾರು ಕೂಡ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಪಾವಗಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ