AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದ ತುಂಗಾ ನದಿಯಲ್ಲಿ ಈಜಲು ಬಂದಿದ್ದ ಬೆಂಗಳೂರಿನ ಇಬ್ಬರು ಯುವಕರು ನೀರು ಪಾಲು

ಬೆಂಗಳೂರಿನ ಗೌತಮ್ ಹಾಗೂ ಸುಜಯ್ ತೀರ್ಥಹಳ್ಳಿ ಭಾಗಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ನಿನ್ನೆ ಸಂಜೆ ತುಂಗಾ ನದಿಯಲ್ಲಿ ಈಜಲು ಎಂದು ಹೋಗಿ ನದಿಯಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ. ಓರ್ವನ ಮೃತದೇಹ ಪತ್ತೆಯಾಗಿದ್ದು ಮತ್ತೋರ್ವ ಯುವಕನ ಮೃದೇಹಕ್ಕೆ ಶೋಧ ಮುಂದುವರೆದಿದೆ.

ಶಿವಮೊಗ್ಗದ ತುಂಗಾ ನದಿಯಲ್ಲಿ ಈಜಲು ಬಂದಿದ್ದ ಬೆಂಗಳೂರಿನ ಇಬ್ಬರು ಯುವಕರು ನೀರು ಪಾಲು
ತುಂಗಾ ನದಿ
Basavaraj Yaraganavi
| Updated By: ಆಯೇಷಾ ಬಾನು|

Updated on: Sep 11, 2023 | 10:47 AM

Share

ಶಿವಮೊಗ್ಗ, ಸೆ.11: ನದಿಗೆ ಈಜಲು ಹೋಗಿದ್ದ ಇಬ್ಬರು ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಭೀಮನಕಟ್ಟೆ ಗ್ರಾಮದ ಬಳಿಯ ತುಂಗಾ ನದಿಯಲ್ಲಿ(Tunga River) ನಡೆದಿದೆ. ಬೆಂಗಳೂರು ಮೂಲದ ಗೌತಮ್(26), ಸುಜಯ್(28) ಮೃತ ದುರ್ದೈವಿಗಳು. ನಿನ್ನೆ ಸಂಜೆ ತುಂಗಾ ನದಿಯಲ್ಲಿ ಈಜಲು ತೆರಳಿದ್ದಾಗ ದುರ್ಘಟನೆ ಸಂಭವಿಸಿದೆ.

ಮೃತ ಗೌತಮ್ ಹಾಗೂ ಸುಜಯ್ ತೀರ್ಥಹಳ್ಳಿ ಭಾಗಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ನಿನ್ನೆ ಸಂಜೆ ತುಂಗಾ ನದಿಯಲ್ಲಿ ಈಜಲು ಎಂದು ಹೋಗಿ ನದಿಯಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಈಜುಗಾರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕರ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆದಿದ್ದು ಗೌತಮ್ ಮೃತದೇಹ ಪತ್ತೆಯಾಗಿದೆ. ಮತ್ತೊಬ್ಬ ಯುವಕ ಸುಜಯ್ ಮೃತ ದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ತೀರ್ಥಹಳ್ಳಿ ತಾಲೂಕಿನ ಆಗುಂಬೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಮಂಗಳೂರಿನ ಮೋತಿ ಮಹಲ್ ಹೋಟೆಲ್​ ಸ್ವಿಮ್ಮಿಂಗ್ ಪೂಲ್​ನಲ್ಲಿ ಕೇರಳ ಬ್ಯಾಂಕ್‌ ಅಧಿಕಾರಿ ಮೃತದೇಹ ಪತ್ತೆ

ಸಿಬ್ಬಂದಿಗೆ ಚಾಕುವಿನಿಂದ ಇರಿದು ಹಣ ದೋಚಿ ಎಸ್ಕೇಪ್

ಬೆಂಗಳೂರಿನ ಹುಳಿಮಾವು ಪೋಲೀಸ್ ಠಾಣಾ ವ್ಯಾಪ್ತಿಯ ಗೊಟ್ಟಿಗೆರೆಯಲ್ಲಿ ಅಪೋಲೋ ಫಾರ್ಮಸಿ ಮೆಡಿಕಲ್ ಶಾಪ್ ನಲ್ಲಿ ಖತರ್ನಾಕ್ ಕದೀಮ ಕೈಚಳಕ ತೋರಿದ್ದಾನೆ. ಹೌದು ಎಂದಿನಂತೆ ನಿನ್ನೆ ಬೆಳಿಗ್ಗೆಯೂ ಸಹ ಅಪೋಲೋ ಫಾರ್ಮಸಿ ಶಾಪ್ ಡೋರ್ ಅನ್ನು ಸಿಬ್ಬಂದಿ ವಿಘ್ನೇಶ್ ಎಂಬಾತ ಓಪನ್ ಮಾಡಿದ್ದ. ಬೆಳಗಿನ ಜಾವ 7,40ರ ಸುಮಾರಿಗೆ ರಸ್ತೆಯಲ್ಲಿ ಜನರ ಓಡಾಟವೂ ಸಹ ಇತ್ತು. ಆದ್ರೆ ಅಷ್ಟೊತ್ತಿಗೆ ಆಕ್ಸಿಸ್ ಬೈಕ್ ನಲ್ಲಿ ತಲೆಗೆ ಹೆಲ್ಮೆಟ್ ಮುಖಕ್ಕೆ ಮಾಸ್ಕ್ ಧರಿಸಿಕೊಂಡು ಗ್ರಾಹಕನ ಸೊಗಿನಲ್ಲಿ ಅಪೋಲೋ ಫಾರ್ಮಸಿಗೆ ಖತರ್ನಾಕ್ ಕದೀಮ ಎಂಟ್ರಿ ಕೊಟ್ಟಿದ್ದ. ಫಾರ್ಮಸಿಯಲ್ಲಿ ಸಿಬ್ಬಂದಿ ಓರ್ವನೇ ಇರುವುದನ್ನ ಗಮನಿಸಿ ಏಕಾಏಕಿ ಬ್ಯಾಗ್ ನಲ್ಲಿ ತಂದಿದ್ದ ಮಾರಕಾಸ್ತ್ರವನ್ನ ತೆಗೆದು ಕ್ಯಾಶ್ ಕೌಂಟರ್ ನಲ್ಲಿರುವ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದ. ಆದರೆ ಫಾರ್ಮಸಿ ಸಿಬ್ಬಂದಿ ವಿಘ್ನೇಶ್ ಹಣ ನೀಡದಿದ್ದಾಗ ಎರಡು ಕಾಲಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ್ದ. ಜೀವ ಭಯದಿಂದ ಕ್ಯಾಶ್ ಕೌಂಟರ್ ಓಪನ್ ಮಾಡುತ್ತಿದ್ದಂತೆ ಅದರಲ್ಲಿದ್ದ ಸುಮಾರು ಐವತ್ತು ಸಾವಿರಕ್ಕೂ ಅಧಿಕ ಹಣವನ್ನ ರಾಬರಿ ಮಾಡಿ ಅಲ್ಲಿಂದ ಸುಲಿಗೆಕೋರ ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾನೆ. ಖತರ್ನಾಕ್ ಕಳ್ಳನ ಕೈಚಳಕದ ದೃಶ್ಯ ಫಾರ್ಮಸಿಯ ಸಿಸಿಟಿವಿ ಕ್ಯಾಮಾರಾದಲ್ಲಿ ಸೆರೆಯಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್