ಅಡಕೆ ಆಮದು ಮೇಲಿನ ಕನಿಷ್ಠ ದರ 100 ರೂ.ಗೆ ಹೆಚ್ಚಿಸಿದ ಕೇಂದ್ರ ಸರ್ಕಾರ: ಧನ್ಯವಾದ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ
ನೆರೆಯ ರಾಷ್ಟ್ರಗಳಿಂದ ದೇಶಕ್ಕೆ ಅಡಿಕೆ ಆಮದು ವಿಚಾರವಾಗಿ ಕೇಂದ್ರ ಸರ್ಕಾರ ಕ್ರಮಕೈಗೊಂಡಿರುವ ನಿರ್ಧಾರಕ್ಕೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ್ದಾರೆ.
ಶಿವಮೊಗ್ಗ: ನೆರೆಯ ರಾಷ್ಟ್ರಗಳಿಂದ ದೇಶಕ್ಕೆ ಅಡಿಕೆ (Areca Nut) ಆಮದು ವಿಚಾರವಾಗಿ ಕೇಂದ್ರ ಸರ್ಕಾರ ಕ್ರಮಕೈಗೊಂಡಿದೆ. ಕನಿಷ್ಟ ಆಮದು ದರ 251 ರೂ. ನಿಂದ 351 ರೂಪಾಯಿ ಅಂದರೆ ಕನಿಷ್ಟ 100 ರೂ. ಅನ್ನು ಕೇಂದ್ರ ಸರ್ಕಾರ ಹೆಚ್ಚಿಸಿ ಆದೇಶ ಹೊರಡಿಸಿದೆ. ಆಮದು ದರ ಹೆಚ್ಚಿಸಿದ್ದಕ್ಕೆ ಕೇಂದ್ರ ಸರ್ಕಾರಕ್ಕೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ (B.Y. Raghavendra) ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕಾಯುವ ಕೆಲಸ ಮಾಡಿದೆ ಎಂದು ಹೇಳಿದ್ದಾರೆ. ಆಮದು ದರ ಹೆಚ್ಚಳಕ್ಕೆ ಕ್ಯಾಂಫ್ಕೋ ಸೇರಿದಂತೆ ಸಹಕಾರಿ ಸಂಸ್ಥೆಗಳು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಒತ್ತಾಯಿಸಿದ್ದರು.
ಪ್ರಧಾನಿ ನರೇಂದ್ರ ಮೋದಿಗೆ ಸಚಿವೆ ಶೋಭಾ ಕರಂದ್ಲಾಜೆ ಧನ್ಯವಾದ
ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ ಸರ್ಕಾರವು ಅಡಿಕೆ ಬೆಳೆಗಾರರ ಹಿತವನ್ನು ಕಾಯಲು ಬದ್ಧವಾಗಿದೆ.
ಹೊರ ದೇಶಗಳಿಂದ ಆಗುತ್ತಿದ್ದ ಆಮದು ದರವನ್ನು ₹100 ಹೆಚ್ಚಿಸಿದೆ. ಈವರೆಗೆ ಕನಿಷ್ಠ ಆಮದು ದರ ₹251 ಇದ್ದರೆ ಇನ್ನು ಮುಂದೆ ₹351 ಕ್ಕಿಂತ ಹೆಚ್ಚಿನ ಬೆಲೆಯನ್ನು ಕೊಡುವ ಮೂಲಕ ಆಮದು ಮಾಡಿಕೊಳ್ಳಬೇಕಿದೆ.@BSYBJP @BSBommai @BJP4Karnataka pic.twitter.com/mshkITcYTP
— B Y Raghavendra (@BYRBJP) February 15, 2023
ಸಿದ್ದರಾಮಯ್ಯ ಆಕ್ರೋಶ
ಕೇಂದ್ರ ಸರ್ಕಾರದ ದುಷ್ಟ ನೀತಿಯಿಂದಾಗಿ ಈಗ ಅಡಿಕೆ ಬೆಳೆಗಾರರ ಬದುಕೂ ನೆಲಕಚ್ಚುವಂತಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಈಗಾಗಲೇ ಕೊಳೆ ರೋಗ ಮತ್ತು ಎಲೆ ಚುಕ್ಕಿ ರೋಗ ಕರ್ನಾಟಕದಾದ್ಯಂತ ವಿಪರೀತ ಹರಡಿದ್ದು, ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ಈ ಸಮಯದಲ್ಲೇ ಕೇಂದ್ರ ಸರ್ಕಾರದ ವಿಶ್ವಾಸ ದ್ರೋಹದ ಸಾಂಕ್ರಾಮಿಕ ರೋಗ ಈಗ ಅಡಿಕೆ ಬೆಳೆ ಮತ್ತು ಬೆಳೆಗಾರರನ್ನು ಆವರಿಸಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.