ಶಿವಮೊಗ್ಗ:ಬಿಜೆಪಿ ಅವಧಿಯಲ್ಲಿ ನಡೆದ ಕಾಮಗಾರಿ ತನಿಖೆಗೆ ಸೂಚಿಸಿದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್

ಶಿವಮೊಗ್ಗ ನಗರದ ಸ್ಮಾರ್ಟ್ ಸಿಟಿ ಕಾಮಗಾರಿ ಮುಗಿದು ಹೋಗಿದೆ. ಈ ನಡುವೆ ಬಿಜೆಪಿ ಅವಧಿಯಲ್ಲಿ ನಡೆದ ಸ್ಮಾರ್ಟ್ ಸಿಟಿ ಕಾಮಗಾರಿ ಕಳಪೆ ಮತ್ತು ಗೋಲ್ ಮಾಲ್​ನಿಂದ ಕೂಡಿದೆ ಎನ್ನುವ ನೂರೆಂಟು ದೂರುಗಳು ಸಾರ್ವಜನಿಕರಿಂದ ಮತ್ತು ಕಾಂಗ್ರೆಸ್ ಪಕ್ಷದಿಂದ ಬಂದಿವೆ. ಇದರ ಬೆನ್ನಲ್ಲೇ ಶಿವಮೊಗ್ಗಕ್ಕೆ ಭೇಟಿ ನೀಡಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇಬ್ಬರು ಸಚಿವರು ಸ್ಮಾರ್ಟ್ ಸಿಟಿ ಕಾಮಗಾರಿಯ ತನಿಖೆಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. 

ಶಿವಮೊಗ್ಗ:ಬಿಜೆಪಿ ಅವಧಿಯಲ್ಲಿ ನಡೆದ ಕಾಮಗಾರಿ ತನಿಖೆಗೆ ಸೂಚಿಸಿದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್
ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್​
Follow us
Basavaraj Yaraganavi
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 27, 2023 | 10:05 PM

ಶಿವಮೊಗ್ಗ, ಅ.27: ನಗರದಲ್ಲಿ ಬಿಜೆಪಿ ಅವಧಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಯೋಜನೆಯು ಪೂರ್ಣಗೊಂಡಿದೆ. ಸುಮಾರು 2 ಸಾವಿರ ಕೋಟಿ ವೆಚ್ಚದಲ್ಲಿ ಶಿವಮೊಗ್ಗ(Shivamogga) ಸ್ಮಾರ್ಟ್ ಸಿಟಿ ಯೋಜನೆ ಇದಾಗಿದ್ದು, ಈ ಯೋಜನೆಯ ಬಹುತೇಕ ಕಾಮಗಾರಿಗಳು ಮುಗಿದಿವೆ. ಆರಂಭದಿಂದಲೂ ನಗರದಲ್ಲಿ ನಡೆದ ವಿವಿಧ ಸ್ಮಾರ್ಟ್ ಸಿಟಿ ಕಾಮಗಾರಿಗಳು ಕಳಪೆ ಮತ್ತು ಅವ್ಯವಹಾರದಿಂದ ಕೂಡಿದೆ ಎಂದು ವಿವಿಧ ಸಂಘ, ಸಂಸ್ಥೆಗಳು ಹಾಗೂ ಸಾರ್ವಜನಿಕರು ದೂರುತ್ತಿದ್ದರು.

ಸ್ಮಾರ್ಟ್ ಸಿಟಿ ಕಾಮಗಾರಿ ತನಿಖೆಗೆ ಸೂಚಿಸಿದ ಸಚಿವ ಭೈರತಿ ಸುರೇಶ್

ಬಿಜೆಪಿ ಸರಕಾರ ಹೋಗಿ, ಈಗ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಿದೆ. ಇಂದು(ಅ.27) ಡಿಸಿ ಕಚೇರಿಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅಧಿಕಾರಿಗಳ ಸಭೆ ನಡೆಸಿದ್ದರು. ಸಭೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಚಿವರು ಮಾಹಿತಿ ಕಲೆಹಾಕಿದರು. ಇನ್ನು ಸ್ಮಾರ್ಟ್ ಸಿಟಿ ಕಾಮಗಾರಿಗಳು ಸರಿಯಾಗಿ ಆಗಿಲ್ಲ. ಅನೇಕ ಕಳಪೆ ಮತ್ತು ಗೋಲ್​ಮಾಲ್​ನಿಂದ ಕೂಡಿವೆ ಎನ್ನುವ ದೂರುಗಳು ಸಚಿವರಿಗೆ ಬಂದಿತ್ತು. ಈ ಹಿನ್ನಲೆಯಲ್ಲಿ ನಗರಾಭಿವೃದ್ಧಿ ಸಚಿವರು ಶಿವಮೊಗ್ಗದ ಸ್ಮಾರ್ಟ್ ಸಿಟಿ ಕಾಮಗಾರಿಯ ಕುರಿತು ತನಿಖೆ ನಡೆಸವುದಕ್ಕೆ ಮುಂದಾಗಿದ್ದಾರೆ. ಇದರಿಂದ ಬಿಜೆಪಿ ಜನಪ್ರತಿನಿಧಿಗಳು ಮತ್ತು ಪಾಲಿಕೆ ಅಧಿಕಾರಿಗಳು, ಗುತ್ತಿಗೆದಾರರಿಗೆ ಇದೀಗ ನಡುಕ ಶುರುವಾಗಿದೆ.

ಇದನ್ನೂ ಓದಿ:ಶಿವಮೊಗ್ಗ: ಬಡ ಕಾರ್ಮಿಕರಿಗೆ ಎಪಿಎಂಸಿ ಅಧಿಕಾರಿಗಳಿಂದ ಶಾಕ್, ಮನೆ ಮುಂದಿನ ಜಾಗಕ್ಕೆ ಹಣ ನೀಡಲು ನೋಟಿಸ್

ಇನ್ನು ಮಧು ಬಂಗಾರಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವ ಆದ ಬಳಿಕ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಈಗಾಗಲೇ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಈ ನಡುವೆ ಸ್ಮಾರ್ಟ್ ಸಿಟಿ ಕಾಮಗಾರಿ ಕಳಪೆಯಿಂದ ಕೂಡಿದೆ ಎನ್ನುವ ದೂರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಬಂದಿತ್ತು. ಖುದ್ದು ಸಚಿವರೂ ಕೂಡ ಶಿವಮೊಗ್ಗ ನಗರದಲ್ಲಿ ಎಲ್ಲೂ ಸ್ಮಾರ್ಟ್ ಕಾಣುತ್ತಿಲ್ಲವೆಂದು ಬಹಿರಂಗವಾಗಿ ಹೇಳಿಕೆಯನ್ನು ನೀಡಿದ್ದರು. ಈ ನಡುವೆ ಇಂದು ನಗರಾಭಿವೃದ್ಧಿ ಸಚಿವರು ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸ್ಮಾರ್ಟ್ ಸಿಟಿ ಕಾಮಗಾರಿ ತನಿಖೆಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರು ನಿರಂತರ ಪ್ರಯತ್ನದ ಬಳಿಕ ಈಗ ಸರಕಾರವು ಸ್ಮಾರ್ಟ್ ಸಿಟಿ ಕಾಮಗಾರಿಯ ತನಿಖೆಗೆ ಮುಂದಾಗಿದೆ. ನಗರ ಸ್ಮಾರ್ಟ್ ಆಗುವುದಕ್ಕಿಂತ ಬಂದ ನೂರಾರು ಕೋಟಿಯ ಅನುದಾನ ದುರುಪಯೋಗವಾಗಿದೆ. ಸದ್ಯ ಕಾಂಗ್ರೆಸ್ ಸರಕಾರವು ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದ ಕಾಮಗಾರಿಯ ತನಿಖೆಗೆ ಮುಂದಾಗುವ ಮೂಲಕ ಬಿಸಿ ಮುಟ್ಟಿಸುವ ಕೆಲಸಕ್ಕೆ ಮುಂದಾಗಿದೆ. ನಗರದಲ್ಲಿ ನೂರಾರು ಕೋಟಿ ವೆಚ್ಚದಲ್ಲಿ ನಡೆದ ಸ್ಮಾರ್ಟ್ ಸಿಟಿ ಕಾಮಗಾರಿಗಳ ತನಿಖೆಗೆ ಸರಕಾರವು ಮುಂದಾಗಿದೆ. ಇನ್ನೂ ನಗರದಲ್ಲಿ ಸ್ಮಾರ್ಟ್ ಸಿಟಿ ಹೆಸರಿನಲ್ಲಿ ನಡೆದ ಅವ್ಯವಹಾರವು ಬಯಲಿಗೆ ಬರುತ್ತದೆ ಎನ್ನುವ ನಿರೀಕ್ಷೆಗಳು ಹುಟ್ಟಿಕೊಂಡಿವೆ.. ತನಿಖೆ ಎನ್ನುವುದು ಕೇವಲ ಹೆಸರಿ ಮಾತ್ರವೇ ಅಥವಾ ಸೂಕ್ತ ತನಿಖೆಯ ಮೂಲಕ ಕಾಂಗ್ರೆಸ್ ಸರಕಾರವಾದ್ರೂ ನಗರ ಜನತೆಗೆ ನ್ಯಾಯ ಕೊಡಿಸುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ..

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ