ವೀರ್ ಸಾವರ್ಕರ್ v\s ಟಿಪ್ಪು ಸುಲ್ತಾನ್: ಫ್ಲೆಕ್ಸ್ ತೆರವು ಹಿನ್ನೆಲೆ ಗಲಾಟೆ -ಪೊಲೀಸರ ಲಾಠಿ ಚಾರ್ಚ್, ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿ
ಸಾವರ್ಕರ್ ಭಾವಚಿತ್ರ ತಗೆದ ಹಿನ್ನಲೆ ಸ್ಥಳದಲ್ಲಿ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು ಮತ್ತೊಂದು ಸಾವರ್ಕರ್ ಫ್ಲೆಕ್ಸ್ ಹಾಕಲು ಕಾರ್ಯಕರ್ತರು ಮುಂದಾಗಿದ್ದಾರೆ. ಆದ್ರೆ ಫ್ಲೆಕ್ಸ್ ಹಾಕುವುದನ್ನು ಪೊಲೀಸರು ತಡೆದಿದ್ದಾರೆ.
ಶಿವಮೊಗ್ಗ: 75ನೇ ಸ್ವಾತಂತ್ರ್ಯ ದಿನಾಚರಣೆ(Azadi Ka Amrit Mahotsav) ಹಿನ್ನೆಲೆ ಟಿಪ್ಪು ಸುಲ್ತಾನ್(Tipu Sultan) ಸಂಘಟನೆ ಟಿಪ್ಪು ಸುಲ್ತಾನ್ ಫೋಟೋ ಇಟ್ಟು ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ್ದಾರೆ. ಈ ವೇಳೆ ಹಿಂದೂ ಸಂಘಟನೆ ಕೂಡ ಶಿವಮೊಗ್ಗದ ಅಮೀರ್ ಅಹ್ಮದ್ ವೃತ್ತದಲ್ಲಿ ಸಾವರ್ಕರ್(Veer Savarkar) ಫ್ಲೆಕ್ಸ್ ಅಳವಡಿಸಿದ್ದಾರೆ. ಸಾವರ್ಕರ್ ಫ್ಲೆಕ್ಸ್ ಆಳವಡಿಕೆಗೆ ಟಿಪ್ಪು ಸುಲ್ತಾನ್ ಸಂಘಟನೆ ವಿರೋಧಿಸಿ ಫ್ಲೆಕ್ಸ್ ತೆರವಿಗೆ ಮುಂದಾಗಿದ್ದು ಈ ವೇಳೆ ಫ್ಲೆಕ್ಸ್ ತೆರವಿಗೆ ಮುಂದಾದ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ಆಗಿದೆ.
ಅಮೀರ್ ಅಹಮದ್ ವೃತ್ತದಲ್ಲಿ ಭಾನುವಾರ ಬೆಳಿಗ್ಗೆಯಿಂದ ಸ್ವಾತಂತ್ರ್ಯ ಸಂಭ್ರಮಾಚರಣೆ ನಡೆಸಿತ್ತು. ಈ ವೇಳೆ ಯುವಕರ ಗುಂಪೊಂದು ವೀರ ಸಾವರ್ಕರ್ ಅವರ ಕಟೌಟ್ ತಂದು ವೃತ್ತದಲ್ಲಿರುವ ಹೈಮಾಸ್ಟ್ ದೀಪಕ್ಕೆ ಕಟ್ಟಲು ಮುಂದಾಗಿದೆ. ಈ ವೇಳೆ ಇನ್ನೊಂದು ಗುಂಪು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ಅಲ್ಲಿ ಟಿಪ್ಪು ಸುಲ್ತಾನ್ ಕಟೌಟ್ ಹಾಕಲು ಮುಂದಾಗಿದೆ. ಈ ವೇಳೆ ಎರಡೂ ಗುಂಪಿನವರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳದಲ್ಲಿ ಸೇರಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಸ್ಥಳಕ್ಕೆ ಪೊಲೀಸರು ಬಂದಿದ್ದು, ಗುಂಪುಗಳನ್ನು ಸಮಾಧಾನಪಡಿಸಲು ಮುಂದಾಗಿದ್ದಾರೆ. ಈ ವೇಳೆ ಕೆಲವರು ವೀರ ಸಾವರ್ಕರ್ ಅವರ ಕಟೌಟ್ ಕಟ್ಟಿದ್ದಾರೆ. ಅದಕ್ಕೆ ಮತ್ತೊಂದು ಗುಂಪು ಆಕ್ಷೇಪ ವ್ಯಕ್ತಪಡಿಸಿದೆ. ಕೆಲವರು ಕಟೌಟ್ ಹರಿದು ಹಾಕಲು ಮುಂದಾಗಿದ್ದಾರೆ. ಈ ವೇಳೆ ಉದ್ವಿಗ್ನ ಸ್ಥಿತಿ ಉಂಟಾಗಿದ್ದು, ಆಗ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಗುಂಪುಗಳನ್ನು ಚದುರಿಸಿದ್ದಾರೆ. ಈ ವೇಳೆ ಕಟೌಟ್ ತೆಗೆಸಿ ರಾಷ್ಟ್ರ ಧ್ವಜ ಹಾರಿಸಿದ್ದಾರೆ.
ಸಾವರ್ಕರ್ ಕಟೌಟ್ ಹಾಕಲು ಅವಕಾಶ ನೀಡುವಂತೆ ಸ್ಥಳದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಹೆಚ್ಚಿನ ಪಡೆಗಳ ಕರೆಸಲಾಗಿದೆ. ಘಟನೆ ಹಿನ್ನೆಲೆಯಲ್ಲಿ ನಗರದಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದೆ.
ಸಾವರ್ಕರ್ ಭಾವಚಿತ್ರ ತಗೆದ ಹಿನ್ನಲೆ ಸ್ಥಳದಲ್ಲಿ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು ಮತ್ತೊಂದು ಸಾವರ್ಕರ್ ಫ್ಲೆಕ್ಸ್ ಹಾಕಲು ಕಾರ್ಯಕರ್ತರು ಮುಂದಾಗಿದ್ದಾರೆ. ಆದ್ರೆ ಫ್ಲೆಕ್ಸ್ ಹಾಕುವುದನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಪೊಲೀಸರ ಜೊತೆ ಹಿಂದೂ ಪರ ಕಾರ್ಯಕರ್ತರ ಮಾತಿನ ಚಕಮಕಿ ಆಗಿದೆ. ಫ್ಲೆಕ್ಸ್ ಹಾಕಲು ಬಂದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದಕ್ಕೆ ಹಿಂದೂಪರ ಸಂಘಟನೆ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ ನಗರದಲ್ಲಿ 3 ದಿನ ನಿಷೇಧಾಜ್ಞೆ
ಶಿವಮೊಗ್ಗ ನಗರದಲ್ಲಿ 3 ದಿನ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಇನ್ನು ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತರು ಧರಣಿ ನಡೆಸುತ್ತಿದ್ದಾರೆ. ಸಾವರ್ಕರ್ ಫ್ಲೆಕ್ಸ್ ತೆರವು ಖಂಡಿಸಿ ನಗರದ ಅಮೀರ್ ಅಹ್ಮದ್ ವೃತ್ತದ ಬಳಿ ಬಜರಂಗದಳ ಧರಣಿ ನಡೆಸುತ್ತದೆ.ಘಟನೆ ಸಂಬಂಧ ಟಿವಿ9ಗೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯೆ ನೀಡಿದ್ದಾರೆ. ವಿ.ಡಿ.ಸಾವರ್ಕರ್ 23 ವರ್ಷಗಳ ಕಾಲ ಜೈಲಿನಲ್ಲಿದ್ದವರು. ಕ್ರಾಂತಿಕಾರಿಗೆ ಅವಮಾನ ಮಾಡುತ್ತಿರುವುದು ಉದ್ಧಟತನ. ಟಿಪ್ಪು ಸುಲ್ತಾನ್ ಒಬ್ಬ ಮತಾಂಧ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಬಿಜೆಪಿ ಮತ್ತು ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
ಶಿವಮೊಗ್ಗದ ಶಿವಪ್ಪನಾಯಕ ವೃತ್ತದ ಬಳಿ ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಗಾಂಧಿಬಜಾರ್ಗೆ ನುಗ್ಗಲು ಕಾರ್ಯಕರ್ತರು ಯತ್ನಿಸಿದ್ದು ಮುಂಜಾಗ್ರತಾ ಕ್ರಮವಾಗಿ ಗಾಂಧಿಬಜಾರ್ ಸಂಪೂರ್ಣ ಬಂದ್ ಮಾಡಲಾಗಿದೆ.
Published On - 4:32 pm, Mon, 15 August 22