ಶಿವಮೊಗ್ಗ: ಕಾರ್ಯಕ್ರಮದ ವೇದಿಕೆ ಮೇಲೆ ನಂಗಾನಾಚ್, ಕನ್ನಡ ಪರ ಸಂಘಟನೆ ವಿರುದ್ಧ ಆಕ್ರೋಶ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಕನ್ನಡ ಪರ ಸಂಘಟನೆ ಆಯೋಜಿಸಿದ್ದ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಮಹಿಳೆ ಬಾಲಕನ ಜೊತೆ ಅಸಭ್ಯ ರೀತಿಯಲ್ಲಿ ನೃತ್ಯ ಮಾಡಿದ್ದಾರೆ. ಬಾಲಕನನ್ನು ಎಳೆದು ಅವನ ಮೇಲೆ ಕೂತು ನೃತ್ಯ ಮಾಡಿದ್ದಾರೆ. ನೃತ್ಯದ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಭಾರೀ ಆಕ್ರೋಶ ವ್ಯಕ್ತವಾಗಿದೆ.

ಶಿವಮೊಗ್ಗ: ಕಾರ್ಯಕ್ರಮದ ವೇದಿಕೆ ಮೇಲೆ ನಂಗಾನಾಚ್, ಕನ್ನಡ ಪರ ಸಂಘಟನೆ ವಿರುದ್ಧ ಆಕ್ರೋಶ
ಬಾಲಕನ ಜೊತೆ ಮಹಿಳೆಯ ಅಸಭ್ಯ ನೃತ್ಯ
Follow us
TV9 Web
| Updated By: ಆಯೇಷಾ ಬಾನು

Updated on: Nov 28, 2023 | 12:09 PM

ಶಿವಮೊಗ್ಗ, ನ.28:  ಕನ್ನಡ ಪರ ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮದ ವೇದಿಕೆಯೊಂದರಲ್ಲಿ ಅಶ್ಲೀಲ ನೃತ್ಯ (Vulgar Dance) ಮಾಡಿ ಕುಣಿದು ಕುಪ್ಪಳಿಸಿರುವ ಘಟನೆ ಶಿವಮೊಗ್ಗದ ಸಾಗರದಲ್ಲಿ ನಡೆದಿದೆ. ಕನ್ನಡ ಪರ ಸಂಘಟನೆಯೊಂದು (Pro Kannada) ಆಯೋಜಿಸಿದ್ದ ಕಾರ್ಯಕ್ರಮದ ವೇದಿಕೆಯ ಮೇಲೆ ನೃತ್ಯಗಾರ್ತಿ ಬಾಲಕನ ಜೊತೆ ಸೊಂಟ ಬಳುಕಿಸಿ ಅಸಭ್ಯ ರೀತಿಯಲ್ಲಿ ನೃತ್ಯ ಮಾಡಿದ್ದಾರೆ. ನೃತ್ಯದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಅನೇಕರು ಕಾರ್ಯಕ್ರಮ ಆಯೋಜಿಸಿದವರ ಮೇಲೆ ಆಕ್ರೋಶ ಹೊರ ಹಾಕಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಕನ್ನಡ ಪರ ಸಂಘಟನೆಯೊಂದು ತಡರಾತ್ರಿ ಆರ್ಕೆಸ್ಟ್ರಾ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಸಂಗೀತ, ನೃತ್ಯ ಎಲ್ಲವೂ ಇತ್ತು. ನೂರಾರು ಜನ ನೆರೆದಿದ್ದ ವೇದಿಕೆಯ ಮೇಲೆಯೇ ತುಂಡು ಬಟ್ಟೆ ಧರಿಸಿದ್ದ ನೃತ್ಯಗಾರ್ತಿ ಬಾಲಕನ ಮಡಿಲಲ್ಲಿ ಕುಳಿತುಕೊಳ್ಳುವುದು, ಅವನ ಕೈಗಳನ್ನು ಹಿಡಿದು ಅವಳ ಸೊಂಟದ ಮೇಲೆ ಇರಿಸಿ ನೃತ್ಯ ಮಾಡುವುದು ಹೀಗೆ ಬಾಲಕನನ್ನು ಪ್ರೋಪರ್ಟಿ ರೀತಿ ಬಳಸಿ ನೃತ್ಯ ಮಾಡಿದ್ದಾಳೆ. ಈ ನೃತ್ಯ ನೋಡಲು ಅಸಭ್ಯ ಎನಿಸಿದರೂ, ಅಲ್ಲಿ ನೆರೆದಿದ್ದ ಜನ ಎಂಜಾಯ್ ಮಾಡಿದ್ದಾರೆ. ಆದರೆ ಈ ನೃತ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ನೃತ್ಯ ನೋಡಿದವರು ಕನ್ನಡ ಪರ ಸಂಘಟನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವೇದಿಕೆ ಮೇಲೆ ಅಸಭ್ಯ ನೃತ್ಯ ಮಾಡಿಸಿದ ಬಗ್ಗೆ ಕಿಡಿಕಾರಿದ್ದಾರೆ. ಕಾರ್ಯಕ್ರಮ ಆಯೋಜಕರ ವಿರುದ್ಧ ಪೊಲೀಸ್ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ವಿಹೆಚ್​ಪಿ ವಿರೋಧದ ನಡುವೆ ದಾಂಡಿಯಾ ನೃತ್ಯ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಮಂಗಳೂರು ಪೊಲೀಸರು

ಕಳೆದ ವರ್ಷ ಮಂಡ್ಯದ ನಾಗಮಂಗಲದಲ್ಲಿ ನಡೆದ ಗ್ರಾಮೋತ್ಸವದಲ್ಲಿ ಮಾಜಿ ಶಾಸಕರೊಬ್ಬರು ಇದೇ ರೀತಿ ನೃತ್ಯ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗೆ ಗುರಿಯಾಗಿದ್ದರು. ಕಾರ್ಯಕ್ರಮದಲ್ಲಿ ತುಂಡು ಬಟ್ಟೆ ಧರಿಸಿದ ಮಹಿಳೆಯರು ಅಸಭ್ಯ ರೀತಿಯಲ್ಲಿ ಚಲನಚಿತ್ರ ಹಾಡುಗಳಿಗೆ ನೃತ್ಯ ಮಾಡಿದ್ದರು.

2019 ರಲ್ಲಿ, ಹರಿಯಾಣದಲ್ಲಿ ನಡೆದ ಬಿಜೆಪಿ ಕಾರ್ಯಕ್ರಮವೊಂದರ ‘ಅಶ್ಲೀಲ ನೃತ್ಯ’ದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಸಿಎಂ ಮನೋಹರ್ ಲಾಲ್ ಖಟ್ಟರ್ ಅವರ ಜನಾಶೀರ್ವಾದ ಯಾತ್ರೆಯ ವೇಳೆ ಹರಿಯಾಣದ ಕುರುಕ್ಷೇತ್ರದ ಹಾಥಿರಾ ಗ್ರಾಮದಲ್ಲಿ ಅಶ್ಲೀಲ ನೃತ್ಯವನ್ನು ಮಾಡಲಾಗಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್