AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ಯಡಿಯೂರಪ್ಪ ಸಿಕ್ಕಿರುವುದು ಪೂರ್ವಜನ್ಮದ ಪುಣ್ಯ: ಶಿಕಾರಿಪುರದಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ

ರಾಜಕೀಯವಾಗಿ ಬೆಳೆಯಲು, ಸಿಎಂ ಆಗಲು ಬಿಎಸ್​ವೈ ಕಾರಣ. ಸಿಎಂ ಸ್ಥಾನ ಬಿಟ್ಟಾಗ ಬಿಎಸ್​ವೈಗೆ ಎಲ್ಲಿಯೂ ಕಹಿ ಇರಲಿಲ್ಲ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನಾನು ಬದ್ಧನಾಗಿರುವೆ ಎಂದು ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ನನಗೆ ಯಡಿಯೂರಪ್ಪ ಸಿಕ್ಕಿರುವುದು ಪೂರ್ವಜನ್ಮದ ಪುಣ್ಯ: ಶಿಕಾರಿಪುರದಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಾಂದರ್ಭಿಕ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Mar 05, 2022 | 3:17 PM

Share

ಶಿವಮೊಗ್ಗ: ನನಗೆ ಯಡಿಯೂರಪ್ಪ ಸಿಕ್ಕಿರುವುದು ಪೂರ್ವಜನ್ಮದ ಪುಣ್ಯ. ರಾಜಕೀಯದಲ್ಲಿ ಯಡಿಯೂರಪ್ಪನವರು ನನ್ನನ್ನು ಬೆಳೆಸಿದ್ದಾರೆ. ಬಿ.ಎಸ್.ಯಡಿಯೂರಪ್ಪ(B.S. Yediyurappa) ದೂರದೃಷ್ಟಿಯಿರುವಂತಹ ನಾಯಕ. ಬಡವರ ಬಗ್ಗೆ ಅಪಾರ ಕಳಕಳಿ ಇರುವಂತಹ ವ್ಯಕ್ತಿ ಬಿಎಸ್​ವೈ. ಶಿಕಾರಿಪುರದಲ್ಲಿ ಸೂರ್ಯನಿಗೆ ದೀಪ ಹಿಡಿದಂಗೆ. ರಾಜ್ಯದ ಮೂಲೆಮೂಲೆಯಲ್ಲೂ ಬಿಎಸ್​ವೈ ಸೇವೆ ಸಲ್ಲಿಸಿದ್ದಾರೆ. ರಾಜಕೀಯವಾಗಿ ಬೆಳೆಯಲು, ಸಿಎಂ(CM) ಆಗಲು ಬಿಎಸ್​ವೈ ಕಾರಣ. ಸಿಎಂ ಸ್ಥಾನ ಬಿಟ್ಟಾಗ ಬಿಎಸ್​ವೈಗೆ ಎಲ್ಲಿಯೂ ಕಹಿ ಇರಲಿಲ್ಲ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನಾನು ಬದ್ಧನಾಗಿರುವೆ ಎಂದು ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಸಿಎಂ ಬೊಮ್ಮಾಯಿ(Basavaraj Bommai) ಹೇಳಿಕೆ ನೀಡಿದ್ದಾರೆ.

ಬೆಂಗಳೂರು: ಉಕ್ರೇನ್​​ನಿಂದ ಕನ್ನಡಿಗರನ್ನು ಕರೆತರುವ ಪ್ರಯತ್ನ ಅವ್ಯಾಹತ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಈಗಾಗಲೇ ಉಕ್ರೇನ್​​ನಿಂದ ಸಾಕಷ್ಟು ವಿದ್ಯಾರ್ಥಿಗಳನ್ನು ಕರೆತರಲಾಗಿದೆ. ಉಕ್ರೇನ್ ಗಡಿ ಭಾಗಕ್ಕೆ ಆಗಮಿಸುತ್ತಿರುವವರನ್ನು ಭಾರತ ಸರ್ಕಾರ ದೇಶಕ್ಕೆ ಕರೆತರುತ್ತಿದೆ. ಆದರೆ ಕೆಲವು ಕಡೆ ಭಾರತೀಯರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಅವರಿಂದ ಅಲ್ಲಿಂದ ಹೊರಗೆ ಬರಲು ಆಗುತ್ತಿಲಲ್ಲ. ಅಲ್ಲಿರುವವರೊಂದಿಗೆ ಸಂಪರ್ಕ ಸಾಧಿಸಿ ಕರೆತರಲು ಸತತ ಪ್ರಯತ್ನ ನಡೆಯುತ್ತಿದೆ. ಭಾರತದ ವಿದೇಶಾಂಗ ಇಲಾಖೆ ಅಧಿಕಾರಿಗಳು ಮತ್ತು ಆಸುಪಾಸಿನ ದೇಶಗಳ ಗಡಿಗಳಿಗೆ ತೆರಳಿರುವ ನಮ್ಮ ದೇಶದ ಸಚಿವರ ಜೊತೆಗೆ ಮಾತನಾಡಿದ್ದೇನೆ. ಉಕ್ರೇನ್​ನಲ್ಲಿ ಮೃತಪಟ್ಟ ಹಾವೇರಿಯ ವಿದ್ಯಾರ್ಥಿ ನವೀನ್ ಅವರ ಮೃತದೇಹವನ್ನು ಊರಿಗೆ ತರುವ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದು ಹೇಳಿದರು.

ವಿವಿಧ ವಿಚಾರಗಳ ಚರ್ಚೆಗಾಗಿ ನಡೆಯಲಿರುವ ಜಲಜೀವನ್ ಮಿಷನ್ ಸಭೆಯಲ್ಲಿ ನಾನೂ ಭಾಗವಹಿಸುತ್ತೇನೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪಾದಯಾತ್ರೆ ಮಾಡಿದ್ದಕ್ಕೆ ಮೇಕೆದಾಟು ಯೋಜನೆಗೆ ₹ 1000 ಕೋಟಿ ಅನುದಾನ ಕೊಟ್ಟರು ಎಂಬ ಕಾಂಗ್ರೆಸ್ ನಾಯಕರ ಆರೋಪದ ಬಗ್ಗೆ ವಿಧಾನಸಭೆಯಲ್ಲೇ ತಕ್ಕ ಉತ್ತರ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಕಿಯಲ್ಲಿ ಅರಳಿದ ನಾಯಕ ಬಿಎಸ್​ವೈ: ಬಿ.ವೈ.ವಿಜಯೇಂದ್ರ

ಬೆಂಕಿಯಲ್ಲಿ ಅರಳಿದ ನಾಯಕ ಬಿಎಸ್​ವೈ ಆಗಿದ್ದಾರೆ. ಪರಿಶ್ರಮ, ಬೆವರು ಸುರಿಸಿ ಬಿಎಸ್​ವೈ ರೈತರ ಪರ ಹೋರಾಟ ಮಾಡಿದ್ದಾರೆ. ಬೊಮ್ಮಾಯಿ ಅತ್ಯುತ್ತಮ ಬಜೆಟ್ ನೀಡಿದ್ದಾರೆ. ನೀರಾವರಿಗೆ ಬೊಮ್ಮಾಯಿ ಹೆಚ್ಚು ಒತ್ತು ನೀಡಿದ್ದಾರೆ ಎಂದು ಶಿಕಾರಿಪುರದ ಪಟ್ಟಣದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಅಧಿಕಾರಕ್ಕೆ ಬರುವ ಹಗಲು ಕನಸು ಕಾಂಗ್ರೆಸ್ ಕಾಣುತ್ತಿದೆ: ಬಿ.ಎಸ್​.ಯಡಿಯೂರಪ್ಪ

ಜೀವನದಲ್ಲಿ ನನಗೆ ತೃಪ್ತಿ ಇಂದು ಆಗಿದೆ. ಶಿಕಾರಿಪುರದ ಜನರ ಋಣವನ್ನು ತೀರಿಸಲು ಸಾಧ್ಯವಿಲ್ಲ. ಶಿಕಾರಿಪುರ ತಾಲೂಕಿನ ಏತ ನೀರಾವರಿ ಯೋಜನೆ ಪೂರ್ಣಗೊಂಡಿದೆ. ರೈತರಿಗೆ ಇನ್ನೂ ನೀರಿನ ಬರ ನೀಗಿಸಿರುವೆ. ರಾಜ್ಯದೆಲ್ಲೆಡೆ ನಾನು ಪ್ರವಾಸ ಮಾಡುತ್ತೇನೆ. ಅಧಿಕಾರಕ್ಕೆ ಬರುವ ಹಗಲು ಕನಸು ಕಾಂಗ್ರೆಸ್ ಕಾಣುತ್ತಿದೆ. ಸಾಮೂಹಿಕ ನಾಯಕತ್ವದಲ್ಲಿ ರಾಜ್ಯದ ಪ್ರವಾಸ ಮಾಡಲಿದ್ದೇವೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ  ಅಧಿಕಾರಕ್ಕೆ ತರುತ್ತೇವೆ. ಇನ್ನೂ ಬೊಮ್ಮಾಯಿ ಅತ್ಯುತ್ತಮ ಬಜೆಟ್ ಕೊಟ್ಟಿದ್ದಾರೆ. ಶಿಕಾರಿಪುರ ಮಾದರಿ ತಾಲೂಕು ಮಾಡುವ ಗುರಿ ಇದೆ ಎಂದು ಬಿ.ಎಸ್​.ಯಡಿಯೂರಪ್ಪ ಹೇಳಿದ್ದಾರೆ.

ಬಿಎಸ್​ವೈರಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ: ಸಚಿವ ಕೆ.ಎಸ್.ಈಶ್ವರಪ್ಪ

ಶಿಕಾರಿಪುರದ ಬೆಂಕಿಯ ಚೆಂಡು ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿದ್ದಾರೆ. ಈ ಮೂಲಕ ಬಿಜೆಪಿ ಸಂಘಟನೆ ರಾಜ್ಯದಲ್ಲಿ ಆಯ್ತು. ಬಿ.ಎಸ್​. ಯಡಿಯೂರಪ್ಪ ಸಂಘಟನೆ ಶಕ್ತಿಯಿಂದ 2023ರಲ್ಲಿ 150 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಬಿಜೆಪಿ ಪೂರ್ಣ ಬಹುಮತ ಬಿಎಸ್​ವೈ ಅವರ ಕನಸು ನನಸು ನಾವು ಮಾಡುತ್ತೇವೆ ಎಂದು ಬಿಎಸ್​ವೈ ಅವರನ್ನು ಸಚಿವ ಕೆ.ಎಸ್.ಈಶ್ವರಪ್ಪ ಹಾಡಿ ಹೊಗಳಿದ್ದಾರೆ. ಬಳಿಕ ಬಜೆಟ್​ ಕುರಿತು ಮಾತನಾಡಿದ ಅವರು, ಬಸವರಾಜ್ ಬೊಮ್ಮಾಯಿ ಬಜೆಟ್ ಬೊಂಬಾಟ್​ ಅಗಿತ್ತು. ಸರ್ವ ವ್ಯಾಪ್ತಿ, ಸರ್ವ ಸ್ಪರ್ಶಿ ಬಜೆಟ್ ಸಿಎಂ ಬಸವರಾಜ್​ ಬೊಮ್ಮಾಯಿ ಅವರದ್ದು. ವಿರೋಧ ಪಕ್ಷದವರಿಗೂ ಟೀಕೆ ಅವಕಾಶ ನೀಡದ ಬಜೆಟ್ ಮಂಡನೆ ಬೊಮ್ಮಾಯಿ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಎಸ್​ವೈರಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ: ಸಚಿವ ಕೆ.ಎಸ್.ಈಶ್ವರಪ್ಪ

ಮೃತ ನವೀನ್ ಕುಟುಂಬಕ್ಕೆ ಯಡಿಯೂರಪ್ಪ ಭೇಟಿ, ಉಕ್ರೇನ್​ನಿಂದ ಪಾರ್ಥಿವ ಶರೀರ ಆದಷ್ಟು ಬೇಗ ತರಿಸುವುದಾಗಿ ಭರವಸೆ

Published On - 3:13 pm, Sat, 5 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ