ಕಾಲು ಜಾರಿ ಬಾವಿಗೆ ಬಿದ್ದಿದ್ದ ಮಹಿಳೆ ಪ್ರಾಣಾಪಾಯದಿಂದ ಪಾರು!

|

Updated on: Feb 07, 2020 | 2:30 PM

ಶಿವಮೊಗ್ಗ: ಹೊಸನಗರ ಪಟ್ಟಣದ ಆರ್.ಕೆ.ರಸ್ತೆಯ ಬಳಿ ಆಕಸ್ಮಾತ್​ ಆಗಿ ಕಾಲು ಜಾರಿ ಮಹಿಳೆಯೊಬ್ಬರು ಬಾವಿಗೆ ಬಿದ್ದಿರುವ ಘಟನೆ ನಡೆದಿದೆ. ಜ್ಯೋತಿ ಎಂಬ ಮಹಿಳೆ ಬಾವಿಗೆ ಬೀಳುತ್ತಿದ್ದಂತೆ ಅಕ್ಕಪಕ್ಕದ ನಿವಾಸಿಗಳು ಸ್ಥಳಕ್ಕೆ ದೌಡಾಯಿಸಿ, ಬಾವಿಗೆ ಹಗ್ಗ ಇಳಿಬಿಟ್ಟು ಮಹಿಳೆ ನೀರಿನಲ್ಲಿ ಮುಳುಗದಂತೆ ರಕ್ಷಣೆ ಮಾಡಿದ್ದಾರೆ. ತಕ್ಷಣ ಗ್ರಾಮಸ್ಥರು ಪೊಲೀಸರಿಗೆ ಮತ್ತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಮಹಿಳೆಯನ್ನು ಬಾವಿಯಿಂದ ಮೇಲಕ್ಕೆತ್ತಿ‌ ರಕ್ಷಿಸಿದ್ದಾರೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ […]

ಕಾಲು ಜಾರಿ ಬಾವಿಗೆ ಬಿದ್ದಿದ್ದ ಮಹಿಳೆ ಪ್ರಾಣಾಪಾಯದಿಂದ ಪಾರು!
Follow us on

ಶಿವಮೊಗ್ಗ: ಹೊಸನಗರ ಪಟ್ಟಣದ ಆರ್.ಕೆ.ರಸ್ತೆಯ ಬಳಿ ಆಕಸ್ಮಾತ್​ ಆಗಿ ಕಾಲು ಜಾರಿ ಮಹಿಳೆಯೊಬ್ಬರು ಬಾವಿಗೆ ಬಿದ್ದಿರುವ ಘಟನೆ ನಡೆದಿದೆ. ಜ್ಯೋತಿ ಎಂಬ ಮಹಿಳೆ ಬಾವಿಗೆ ಬೀಳುತ್ತಿದ್ದಂತೆ ಅಕ್ಕಪಕ್ಕದ ನಿವಾಸಿಗಳು ಸ್ಥಳಕ್ಕೆ ದೌಡಾಯಿಸಿ, ಬಾವಿಗೆ ಹಗ್ಗ ಇಳಿಬಿಟ್ಟು ಮಹಿಳೆ ನೀರಿನಲ್ಲಿ ಮುಳುಗದಂತೆ ರಕ್ಷಣೆ ಮಾಡಿದ್ದಾರೆ.

ತಕ್ಷಣ ಗ್ರಾಮಸ್ಥರು ಪೊಲೀಸರಿಗೆ ಮತ್ತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಮಹಿಳೆಯನ್ನು ಬಾವಿಯಿಂದ ಮೇಲಕ್ಕೆತ್ತಿ‌ ರಕ್ಷಿಸಿದ್ದಾರೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.