ಶಿವಾನಂದ ತಗಡೂರು ಹೇಳಿದ ಕೋವಿಡ್ ಕಥೆಗಳು ಕೃತಿಗೆ ಅಮ್ಮ ಪ್ರಶಸ್ತಿ ಪುರಸ್ಕಾರ

ಹಿರಿಯ ಪತ್ರಕರ್ತ ಶಿವಾನಂದ ತಗಡೂರ ಅವರ ಕೋವಿಡ್ ಕಥೆಗಳು ಕೃತಿಗೆ ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಪ್ರತಿಷ್ಠಿತ ಅಮ್ಮ ಪ್ರಶಸ್ತಿಯ ವಿಶೇಷ ಪುರಸ್ಕಾರ ಲಭಿಸಿದೆ. ಕೋವಿಡ್ ಸಮಯದಲ್ಲಿನ ನೋವು, ಸಾವು ಮತ್ತು ಪತ್ರಕರ್ತರ ಸಂಕಷ್ಟಗಳನ್ನು ಚಿತ್ರಿಸುವ ಈ ಕೃತಿಯ ಜನಪರತೆಗೆ ಈ ಪ್ರಶಸ್ತಿ ಸಂದಿದೆ.

ಶಿವಾನಂದ ತಗಡೂರು ಹೇಳಿದ ಕೋವಿಡ್ ಕಥೆಗಳು ಕೃತಿಗೆ ಅಮ್ಮ ಪ್ರಶಸ್ತಿ ಪುರಸ್ಕಾರ
ಶಿವಾನಂದ ತಗಡೂರು ಹೇಳಿದ ಕೋವಿಡ್ ಕಥೆಗಳು ಕೃತಿಗೆ ಅಮ್ಮ ಪ್ರಶಸ್ತಿ ಪುರಸ್ಕಾರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Nov 17, 2024 | 7:12 PM

ಕಲಬುರಗಿ, ನವೆಂಬರ್​ 17: ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ಯ ವಿಶೇಷ ಪುರಸ್ಕಾರ ಹಿರಿಯ ಪತ್ರಕರ್ತ ಶಿವಾನಂದ ತಗಡೂರು (Sivananda Tagadoor) ಅವರ ‘ಕೋವಿಡ್ ಕಥೆಗಳು ಕೃತಿಗೆ ಲಭಿಸಿದೆ. ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ಸಂಸ್ಥಾಪಕ ಸಂಚಾಲಕ ಮಹಿಪಾಲರೆಡ್ಡಿ ಮುನ್ನೂರ್​ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋವಿಡ್‌ನಲ್ಲಿ ಜೀವ ಕಳೆದುಕೊಂಡ ಪತ್ರಕರ್ತರ ಬದುಕಿನ ವಾಸ್ತವ ಸಂಗತಿ ಬಿಚ್ಚಿಡುವ ಪುಸ್ತಕ

ಮಾಧ್ಯಮ ರಂಗದಲ್ಲಿ ತುಂಬಾ ಪರಿಣಾಮ ಬೀರಿರುವ ಪುಸ್ತಕ ಶಿವಾನಂದ ತಗಡೂರು ಹೇಳಿದ ಕೋವಿಡ್ ಕಥೆಗಳು ಕೃತಿ ತೀರಾ ಭಿನ್ನವಾಗಿ ಮೂಡಿದೆ. ಕೋವಿಡ್ ಕಾಲಘಟ್ಟದಲ್ಲಿ ಆಗಿರುವ ಸಾವು- ನೋವು, ವಿಶೇಷವಾಗಿ ಕೋವಿಡ್‌ನಲ್ಲಿ ಜೀವ ಕಳೆದುಕೊಂಡ ಪತ್ರಕರ್ತರ ಬದುಕಿನ ವಾಸ್ತವ ಸಂಗತಿಗಳ ಕಥೆಗಳನ್ನೊಳಗೊಂಡ ಈ ಕೃತಿ, ಪತ್ರಿಕಾ ವಲಯದಲ್ಲಿ ಗಂಭೀರ ಪರಿಣಾಮವನ್ನು ಉಂಟುಮಾಡಿದೆ.

ನೊಂದ ಕುಟುಂಬಗಳ ಬದುಕು ಬೀದಿಗೆ ಬೀಳುವ ಹೊತ್ತಿನಲ್ಲಿ ಅವರಿಗೆ ಆರ್ಥಿಕವಾಗಿ ಆಸರೆಯಾಗಿ ನಿಂತ ನೈಜ ಘಟನೆಗಳು ಪುಸ್ತಕದಲ್ಲಿವೆ. ಕೊರೋನಾ ಸಂದರ್ಭದಲ್ಲಿ ಟಿವಿ ಸಂದರ್ಶನವೊಂದರಲ್ಲಿ ಶಿವಾನಂದ ತಗಡೂರು ಅವರ ಮಾತು ಮತ್ತು ಚಿಕಿತ್ಸೆಯ ಸಲಹೆಗಳನ್ನು ಕೇಳಿದ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ತಂದೆಯವರನ್ನು ಉಳಿಸಿಕೊಳ್ಳುವುದಕ್ಕೆ ಸಾಧ್ಯವಾಗಿದೆ ಎಂದು ಹೇಳಿಕೊಂಡಿದ್ದರು.

ಇಂತಹ ಜನಪರವಾದ ಕೃತಿಗೆ ಅಮ್ಮ ವಿಶೇಷ ಪುರಸ್ಕಾರವನ್ನು ನೀಡಲಾಗುತ್ತಿದ್ದು, ಪ್ರಸ್ತುತ ವರ್ಷದಿಂದ ಪ್ರತಿ ವರ್ಷವೂ ಮಾಧ್ಯಮದವರು ಬರೆದ ಒಂದು ಪುಸ್ತಕಕ್ಕೆ ವಿಶೇಷ ಪುರಸ್ಕಾರವನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: KUWJ ಹೋರಾಟದ ಫಲ: ನನಸಾದ ಪತ್ರಕರ್ತರ ಬಸ್ ಪಾಸ್ ಯೋಜನೆ, ಸಿಎಂಗೆ ಧನ್ಯವಾದ ತಿಳಿಸಿದ ಶಿವಾನಂದ ತಗಡೂರು

ನವೆಂಬರ್ 26 ರಂದು ಸಂಜೆ 5.30ಕ್ಕೆ ಸೇಡಂನ ಶ್ರೀ ಪಂಚಲಿಂಗೇಶ್ವರ ದೇವಾಲಯದ ಶಾಂಭವಿ ರಂಗಮಂಟಪದಲ್ಲಿ ಜರುಗುವ ಸಮಾರಂಭದಲ್ಲಿ ‘ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿಯೇ ಈ ವಿಶೇಷ ಪುರಸ್ಕಾರವನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

BBK 11: ಕಾಂಟ್ರವರ್ಸಿ ಮೂಲಕವೇ ವೈಲ್ಡ್ ಕಾರ್ಡ್​ ಸ್ಪರ್ಧಿ ಎಂಟ್ರಿ
BBK 11: ಕಾಂಟ್ರವರ್ಸಿ ಮೂಲಕವೇ ವೈಲ್ಡ್ ಕಾರ್ಡ್​ ಸ್ಪರ್ಧಿ ಎಂಟ್ರಿ
ಸ್ವಿಮ್ಮಿಂಗ್ ಫುಲ್​ನಲ್ಲಿ ದುರಂತ ಅಂತ್ಯಕಂಡ ಯುವತಿಯರ ಕೊನೆ ಕ್ಷಣದ ವಿಡಿಯೋ!
ಸ್ವಿಮ್ಮಿಂಗ್ ಫುಲ್​ನಲ್ಲಿ ದುರಂತ ಅಂತ್ಯಕಂಡ ಯುವತಿಯರ ಕೊನೆ ಕ್ಷಣದ ವಿಡಿಯೋ!
ಸ್ಕೂಟಿ​ ಡಿಕ್ಕಿಯೊಳಗೆ ಹಾವು ಪ್ರತ್ಯಕ್ಷ, ಬೆಚ್ಚಿಬಿದ್ದ ಚಾಲಕ, ಮುಂದೇನಾಯ್ತು
ಸ್ಕೂಟಿ​ ಡಿಕ್ಕಿಯೊಳಗೆ ಹಾವು ಪ್ರತ್ಯಕ್ಷ, ಬೆಚ್ಚಿಬಿದ್ದ ಚಾಲಕ, ಮುಂದೇನಾಯ್ತು
ಬಿಪಿಎಲ್ ಕಾರ್ಡ್ ರದ್ದು: ಸರ್ಕಾರ ನಡೆ ಸ್ವಾಗತಿಸಿದ ಬಿಜೆಪಿ ಎಂಪಿ ರಾಘವೇಂದ್ರ
ಬಿಪಿಎಲ್ ಕಾರ್ಡ್ ರದ್ದು: ಸರ್ಕಾರ ನಡೆ ಸ್ವಾಗತಿಸಿದ ಬಿಜೆಪಿ ಎಂಪಿ ರಾಘವೇಂದ್ರ
ಬಾಲನಟ ರೋಹಿತ್​ಗೆ ಅಪಘಾತ ಆಗಿದ್ದು ಹೇಗೆ? ಈಗ ಆರೋಗ್ಯ ಹೇಗಿದೆ?
ಬಾಲನಟ ರೋಹಿತ್​ಗೆ ಅಪಘಾತ ಆಗಿದ್ದು ಹೇಗೆ? ಈಗ ಆರೋಗ್ಯ ಹೇಗಿದೆ?
PDO ಪರೀಕ್ಷೆಯಲ್ಲೂ ಎಡವಟ್ಟು, ಅರ್ಧಂಬರ್ಧ ಪ್ರಶ್ನೆ ಪತ್ರಿಕೆ ಕಳುಹಿಸಿದ KPSC
PDO ಪರೀಕ್ಷೆಯಲ್ಲೂ ಎಡವಟ್ಟು, ಅರ್ಧಂಬರ್ಧ ಪ್ರಶ್ನೆ ಪತ್ರಿಕೆ ಕಳುಹಿಸಿದ KPSC
ಎಸ್​ಎಸ್​ಎಲ್​ಸಿಯಲ್ಲಿ ಫೇಲ್ ಆಗಿದ್ದಕ್ಕೆ ವಿಗ್ರಹ ವಿರೂಪಗೊಳಿಸಿದ ಬಾಲಕ
ಎಸ್​ಎಸ್​ಎಲ್​ಸಿಯಲ್ಲಿ ಫೇಲ್ ಆಗಿದ್ದಕ್ಕೆ ವಿಗ್ರಹ ವಿರೂಪಗೊಳಿಸಿದ ಬಾಲಕ
ಪ್ರಧಾನಿ ಮೋದಿಯನ್ನು ಆತ್ಮೀಯತೆಯಿಂದ ಬರಮಾಡಿಕೊಂಡ ನೈಜೀರಿಯಾದ ಜನ
ಪ್ರಧಾನಿ ಮೋದಿಯನ್ನು ಆತ್ಮೀಯತೆಯಿಂದ ಬರಮಾಡಿಕೊಂಡ ನೈಜೀರಿಯಾದ ಜನ
ಮಣಿಪುರ ಹಿಂಸಾಚಾರ, ಮುಖ್ಯಮಂತ್ರಿ, ಶಾಸಕರ ಮನೆಗೆ ನುಗ್ಗಲು ಯತ್ನ
ಮಣಿಪುರ ಹಿಂಸಾಚಾರ, ಮುಖ್ಯಮಂತ್ರಿ, ಶಾಸಕರ ಮನೆಗೆ ನುಗ್ಗಲು ಯತ್ನ
ಪತಿ-ಪತ್ನಿ ಒಂದೇ ರಾಶಿಯವರಾಗಿದ್ದರೆ ಏನರ್ಥ? ವಿಡಿಯೋ ನೋಡಿ
ಪತಿ-ಪತ್ನಿ ಒಂದೇ ರಾಶಿಯವರಾಗಿದ್ದರೆ ಏನರ್ಥ? ವಿಡಿಯೋ ನೋಡಿ