AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಮ ಕಾರಂತ ಬಡಾವಣೆಗೆ ಭೂಮಿ ನೀಡಿದ್ದ ರೈತರಿಗೆ ಗುಡ್​ನ್ಯೂಸ್: ನಿವೇಶನ ದರ ಪ್ರತಿ ಚ.ಅಡಿಗೆ 20ರೂ

Shivaram Karanth Layout: ಶಿವರಾಮ ಕಾರಂತ ಬಡಾವಣೆಗೆ ಭೂಮಿ ನೀಡಿದ್ದ ರೈತರಿಗೆ ಸಿಎಂ ಡಿಕೆ ಶಿವಕುಮಾರ್ ಸಿಹಿ ಸುದ್ದಿ ನೀಡಿದ್ದಾರೆ. ಬಿಡಿಎ ಅಧಿಕಾರಿಗಳು ಮತ್ತು ರೈತರೊಂದಿಗೆ ಸಭೆ ನಡೆಸಿ, ನಿವೇಶನದ ಪ್ರತಿ ಚದರ ಅಡಿ ದರವನ್ನು 50 ರೂ.ನಿಂದ 20 ರೂ.ಗೆ ಇಳಿಸಲು ಸೂಚಿಸಿದ್ದಾರೆ.

ಶಿವರಾಮ ಕಾರಂತ ಬಡಾವಣೆಗೆ ಭೂಮಿ ನೀಡಿದ್ದ ರೈತರಿಗೆ ಗುಡ್​ನ್ಯೂಸ್: ನಿವೇಶನ ದರ ಪ್ರತಿ ಚ.ಅಡಿಗೆ 20ರೂ
ಶಿವರಾಮ ಕಾರಂತ ಬಡಾವಣೆ (ಸಂಗ್ರಹ ಚಿತ್ರ)Image Credit source: tv9 kannada
ಗಂಗಾಧರ​ ಬ. ಸಾಬೋಜಿ
|

Updated on: Aug 31, 2026 | 3:03 PM

Share

ಬೆಂಗಳೂರು, ಆಗಸ್ಟ್​​ 31: ಬೆಂಗಳೂರಿನ ಡಾ. ಕೆ. ಶಿವರಾಮ ಕಾರಂತ ಬಡಾವಣೆಯ (shivaram karanth layout) ನಿರ್ಮಾಣಕ್ಕಾಗಿ ಭೂಮಿ ನೀಡಿದ್ದ ರೈತರು ಮತ್ತು ಭೂಮಾಲೀಕರಿಗೆ ರಾಜ್ಯ ಸರ್ಕಾರ ಗುಡ್ ​ನ್ಯೂಸ್ ನೀಡಿದೆ. ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಬಿಡಿಎ ನಿಗದಿಪಡಿಸಿದ್ದ ನಿವೇಶನ ದರವನ್ನು ಗಣನೀಯವಾಗಿ ಇಳಿಕೆ ಮಾಡಲಾಗಿದೆ. ಸಿಎಂ ಡಿಕೆ ಶಿವಕುಮಾರ್ (DK Shivakumar)​ ಭೂಮಾಲೀಕರಿಗೆ ಪರಿಹಾರ ಹಾಗೂ ಕ್ರಯಪತ್ರವನ್ನು ವಿತರಣೆ ಮಾಡಿದ್ದಾರೆ.

ರೈತರ ನಿವೇಶನ ದರ 20 ರೂ.ಗೆ ನಿಗದಿ

ಬಡಾವಣೆ ನಿರ್ಮಾಣದ ವೇಳೆ ಜಮೀನು ನೀಡಿದ ರೈತರಿಗೆ ಬಿಡಿಎ ಈ ಹಿಂದೆ ಪ್ರತಿ ಚದರ ಅಡಿಗೆ 50 ರೂ. ರಂತೆ ದರ ನಿಗದಿ ಮಾಡಿತ್ತು. ಇದಕ್ಕೆ ಭೂಮಿ ಕಳೆದುಕೊಂಡ ರೈತರಿಂದ ತೀವ್ರ ಅಸಮಾಧಾನ ಮತ್ತು ವಿರೋಧ ವ್ಯಕ್ತವಾಗಿತ್ತು. ರೈತರ ಸಂಕಷ್ಟಕ್ಕೆ ಸ್ಪಂದಿಸಿದ ಸಿಎಂ ಡಿಕೆ ಶಿವಕುಮಾರ್, ಬಿಡಿಎ ಹಿರಿಯ ಅಧಿಕಾರಿಗಳು ಹಾಗೂ ರೈತ ಮುಖಂಡರೊಂದಿಗೆ ನಡೆಸಿದ ಸಂಧಾನ ಸಭೆಯ ಬಳಿಕ ಈ ದರವನ್ನು ಪ್ರತಿ ಚದರ ಅಡಿಗೆ ಕೇವಲ 20 ರೂ.ಕ್ಕೆ ನಿಗದಿ ಮಾಡಲು ಬಿಡಿಎ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಿಎಂ ಡಿಕೆ ಶಿವಕುಮಾರ್​​ ಟ್ವೀಟ್​

ಈ ದರ ಕಡಿತದ ಸೌಲಭ್ಯ ಕೇವಲ ಯೋಜನೆಗೆ ಭೂಮಿ ನೀಡಿದ್ದ ಮೂಲ ರೈತರು ಮತ್ತು ಭೂಮಾಲೀಕರಿಗೆ ಮಾತ್ರ ಅನ್ವಯವಾಗಲಿದೆ. ಸಾರ್ವಜನಿಕರು ಹಾಗೂ ಖಾಸಗಿಯವರಿಗೆ ನೀಡುವ ಸಾಮಾನ್ಯ ನಿವೇಶನಗಳ ದರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಸದ್ಯ ಸರ್ಕಾರದ ಈ ನಿರ್ಧಾರದಿಂದಾಗಿ ಶಿವರಾಮ ಕಾರಂತ ಬಡಾವಣೆಯ ಭೂಮಾಲೀಕರು ನಿಟ್ಟುಸಿರು ಬಿಡುವಂತಾಗಿದೆ.

ಕಾರಂತ ಬಡಾವಣೆಯ ಭೂಮಾಲೀಕರಿಗೆ ನಿವೇಶನ ಪತ್ರ ಹಸ್ತಾಂತರಿಸಿದ ಸಿಎಂ 

ಇನ್ನು ಸಿಎಂ ಡಿಕೆ ಶಿವಕುಮಾರ್​ ಕಾರಂತ ಬಡಾವಣೆಯ ಭೂಮಾಲೀಕರಿಗೆ ನಿವೇಶನ ಪತ್ರ ಹಸ್ತಾಂತರ ಮಾಡಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ‘ಬೆಂಗಳೂರಿನ ನೆಹರು ತಾರಾಲಯದ ಯು.ಆರ್. ರಾವ್ ಭವನದಲ್ಲಿ ಬಿಡಿಎ ಅಧ್ಯಕ್ಷ ಎನ್​ಎ ಹ್ಯಾರಿಸ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಡಾ. ಕೆ. ಶಿವರಾಮ ಕಾರಂತ ಬಡಾವಣೆಯ ಭೂಮಾಲೀಕರಿಗೆ ನಿವೇಶನ ಪತ್ರ ವಿತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ, 600ಕ್ಕೂ ಹೆಚ್ಚು ಭೂಮಾಲೀಕರು ಹಾಗೂ ರೈತರಿಗೆ ನಿವೇಶನ ಪತ್ರಗಳನ್ನು ಹಸ್ತಾಂತರಿಸಿದೆ’ ಎಂದಿದ್ದಾರೆ.

ಇದನ್ನೂ ಓದಿ: ಕಾರವಾರ ಮೆಡಿಕಲ್ ಕಾಲೇಜು, ಶಿವರಾಮ ಕಾರಂತ ಬಡಾವಣೆಯ ಪ್ರಮುಖ ರಸ್ತೆಗೆ ರಾಮಕೃಷ್ಣ ಹೆಗಡೆ ಹೆಸರು: ಸಿಎಂ ಘೋಷಣೆ

‘ಉತ್ತರ ಬೆಂಗಳೂರಿನ ಆವಲಹಳ್ಳಿ, ರಾಮಗೊಂಡನಹಳ್ಳಿ, ಜಾರಕಬಂಡೆ ಕಾವಲ್ ಸೇರಿದಂತೆ 17 ಹಳ್ಳಿಗಳ 3,069 ಎಕರೆ ಪ್ರದೇಶದಲ್ಲಿ ಬಡಾವಣೆ ನಿರ್ಮಿಸಲಾಗಿದೆ. ಡಾ. ಕೆ. ಶಿವರಾಮ ಕಾರಂತ ಬಡಾವಣೆಗೆ 3,200 ಭೂಮಾಲೀಕರು ಹಾಗೂ ರೈತರು ಜಾಗ ನೀಡಿದ್ದು, ಇಲ್ಲಿ ವಿವಿಧ ಅಳತೆಯ 34,992 ನಿವೇಶನಗಳನ್ನು ಸಿದ್ಧಪಡಿಸಲಾಗಿದೆ. ಈ ಪೈಕಿ 18 ಸಾವಿರ ನಿವೇಶನಗಳನ್ನು ಭೂಮಾಲೀಕರು ಹಾಗೂ ರೈತರಿಗೆ ಮೀಸಲಿಡಲಾಗಿದೆ’ ಎಂದು ತಿಳಿಸಿದರು.

ಇನ್ನು ಕಾರ್ಯಕ್ರಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ, ಶಾಸಕರಾದ ಎಸ್‌. ಮುನಿರಾಜು, ಎಸ್‌.ಆರ್‌ ವಿಶ್ವನಾಥ್‌ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ವರದಿ: ಈರಣ್ಣ ಬಸವ 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!