ತುಮಕೂರು: ಕೊರೋನಾ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಗೆ ಸಂಸದೆ ಶೋಭಾ ಕರಂದ್ಲಾಜೆ ಭೇಟಿ ನೀಡಿದ್ದಾರೆ. ಆದರೆ ಜಾಗೃತಿ ಕಾರ್ಯಕ್ರಮದಲ್ಲಿಯೇ ಸಾಮಾಜಿಕ ಅಂತರವಿಲ್ಲದಿರುವುದು ಸಂಸದೆಯಿಂದ ಆದ ನಿರ್ಲಕ್ಷ್ಯವನ್ನು ಎತ್ತಿ ಹಿಡಿದಿದೆ.
ಹೊನ್ನುಡಿಕೆ ಗ್ರಾಮದಲ್ಲಿ ಮಾಜಿ ಶಾಸಕ ಸುರೇಶ್ ಗೌಡ ನೇತೃತ್ವದಲ್ಲಿ ಕೊರೊನಾ ಬಗ್ಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಸುಮಾರು 100ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಕಾರ್ಯಕ್ರಮ ಮುಗಿದ ಬಳಿಕ ರೈತರಿಗೆ ದಿನಸಿ ಪದಾರ್ಥ ವಿತರಣೆ ಮಾಡಲಾಗಿದೆ. ಹಾಗೂ ಗ್ರಾಮಾಂತರ ಕ್ಷೇತ್ರದಲ್ಲಿ ಒಂದು ಲಕ್ಷ ಮಾಸ್ಕ್ ವಿತರಣೆ ಮಾಡಿದ್ದಾರೆ. ಕಾರ್ಯಕ್ರಮ ಚೆನ್ನಾಗಿ ನಡೆದಿದೆ. ಆದರೆ ಸರ್ಕಾರದ ನಿಯಮಗಳು, ಸಾಮಾಜಿಕ ಅಂತರ ಕಪಾಡಿಕೊಳ್ಳದೆ ಬೇಜವಾಬ್ದಾರಿತನದಿಂದ ವರ್ತಿಸಿದ್ದಾರೆ.