ಕರ್ನಾಟಕದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ, ಸಿದ್ದರಾಮಯ್ಯ ಸಿಎಂ ಆದಮೇಲೆ ಹಿಟ್ಲರ್ ಆಗಿದ್ದಾರೆ: ಶೋಭಾ ಕರಂದ್ಲಾಜೆ ವಾಗ್ದಾಳಿ

ಮಂಡ್ಯದ ನಾಗಮಂಗಲ ಗಲಭೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಕ್ಕೆ ತಮ್ಮ ವಿರುದ್ಧ ಎಫ್​ಐಆರ್ ದಾಖಲಿಸಿದ್ದಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕರ್ನಾಟಕ ಕಾಂಗ್ರೆಸ್ ಸರ್ಕಅರದ ವಿರುದ್ಧ ವಾಗ್ದಾಳಿ ನಡೆಸಿದರು. ಸಿಎಂ ಸಿದ್ದರಾಮಯ್ಯರನ್ನು ಸರ್ವಾಧಿಕಾರಿ ಹಿಟ್ಲರ್​​ಗೆ ಹೋಲಿಸಿದ ಅವರು, ಗೊಡ್ಡು ಬೆದರಿಕೆಗಳಿಗೆ ಹೆದರಿ ಓಡಿಹೋಗಲ್ಲ. ಎದುರಿಸುತ್ತೇವೆ ಎಂದಿದ್ದಾರೆ.

ಕರ್ನಾಟಕದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ, ಸಿದ್ದರಾಮಯ್ಯ ಸಿಎಂ ಆದಮೇಲೆ ಹಿಟ್ಲರ್ ಆಗಿದ್ದಾರೆ: ಶೋಭಾ ಕರಂದ್ಲಾಜೆ ವಾಗ್ದಾಳಿ
ಶೋಭಾ ಕರಂದ್ಲಾಜೆ
Follow us
| Updated By: ಗಣಪತಿ ಶರ್ಮ

Updated on: Sep 19, 2024 | 1:00 PM

ಬೆಂಗಳೂರು, ಸೆಪ್ಟೆಂಬರ್ 19: ಕರ್ನಾಟಕದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ. ಸಿದ್ದರಾಮಯ್ಯ ಸಿಎಂ ಆದಮೇಲೆ ಹಿಟ್ಲರ್ ಆಗಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಶಾಸಕರಾದ ಹರೀಶ್ ಪೂಂಜ, ತೇಜಸ್ವಿ ಸೂರ್ಯ ಸೇರಿದಂತೆ ಅನೇಕ ಶಾಸಕ, ಸಂಸದರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಹಾಗೆಂದು ಕಾಂಗ್ರೆಸ್​ ನಾಯಕ ಐವನ್ ಡಿಸೋಜಾ ನೀಡಿದ ಹೇಳಿಕೆ ಮೇಲೆ ಕ್ರಮ ಆಗಲಿಲ್ಲ ಎಂದರು.

ಪೊಲೀಸ್ ಅಧಿಕಾರಿ ಪರಶುರಾಮ ಆತ್ಮಹತ್ಯೆ ಮಾಡಿಕೊಂಡಿದ್ದರೂ ಕಾಂಗ್ರೆಸ್ ಶಾಸಕರ ಮೇಲೆ ಕ್ರಮ ಆಗಲಿಲ್ಲ. ಮಾಜಿ ಸಚಿವ ನಾಗೇಂದ್ರ ಹಗರಣದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಆದರೆ ಎಸ್ಐಟಿ ಚಾರ್ಜ್​​ಶೀಟ್​​ನಲ್ಲಿ ಅವರ ಹೆಸರೇ ಇಲ್ಲ. ರಾಜ್ಯವನ್ನು ಏನು ಮಾಡಲು ಹೊರಟಿದ್ದೀರಿ ಸಿದ್ದರಾಮಯ್ಯನವರೇ ಎಂದು ಶೋಭಾ ಪ್ರಶ್ನಿಸಿದರು.

ಗಣೇಶ ಮೂರ್ತಿಯನ್ನೇ ಪೊಲೀಸ್ ವ್ಯಾನ್​ನಲ್ಲಿ ಕರೆದುಕೊಂಡು ಹೋದರು. ಇದು ದೇಶದಲ್ಲೇ ಮೊದಲು. ಗಣಪತಿಗೇ ವಿಘ್ನ ಮಾಡಿದರು. ಚಪ್ಪಲಿ ಬಿಸಾಡಿದರು, ಕಲ್ಲು ಎಸೆದರು, 25 ಅಂಗಡಿ ಸುಟ್ಟು ಹಾಕಿದರು. ಅವರಿಗೆ ಎಲ್ಲಿಂದ ಶಕ್ತಿ ಬಂತು? ಕೇರಳದವರು ಬಂದಿದ್ದಾರೆ ಎಂದಬುದು ಗೊತ್ತಾಗಿದೆ ಎಂದು ಶೋಭಾ ಆಕ್ರೋಶ ವ್ಯಕ್ತಪಡಿಸಿದರು.

ಕೋಲಾರದಲ್ಲಿ ಪ್ಯಾಲೆಸ್ಟೈನ್ ಧ್ವಜ ಪ್ರದರ್ಶನ ಆಗಿದೆ. ಬೆಂಗಳೂರಿನ ನಂದಿನಿ ಲೇಔಟ್​​ನಲ್ಲಿ ರಾಷ್ಟ್ರಧ್ವಜದ ಮೇಲೆ ಉರ್ದುವಿನಲ್ಲಿ ಬರೆದಿದ್ದಾರೆ. ಇದು ಕರ್ನಾಟಕದ ಸ್ಥಿತಿ. ಈ ಧೈರ್ಯ ಸಮಾಜ ದ್ರೋಹಿಗಳಿಗೆ ಹೇಗೆ ಬಂತು ಎಂದು ಶೋಭಾ ಪ್ರಶ್ನಿಸಿದರು.

ಬೆದರಿಕೆಗೆ ಹೆದರಿಕೊಂಡು ಓಡಿ ಹೋಗಲ್ಲ: ಶೋಭಾ

ಸರ್ಕಾರ ಎಫ್ಐಆರ್ ಹಾಕಿದೆ, ಅದನ್ನು ನಾವು ಎದುರಿಸುತ್ತೇವೆ. ಪೊಲೀಸರು ನಮ್ಮನ್ನು ಬಂಧಿಸಬಹುದು, ನಾವು ಬಂಧನಕ್ಕೆ ಒಳಗಾಗುತ್ತೇವೆ. ನಾವು ಹೋರಾಟ ಮಾಡಿಕೊಂಡು ಬಂದವರು, ಹೋರಾಟ ಮುಂದುವರೆಸುತ್ತೇವೆ. ನಾವು ಗೊಡ್ಡು ಬೆದರಿಕೆಗೆ ಹೆದರಿಕೊಂಡು ಓಡಿ ಹೋಗಲ್ಲ. ಇದನ್ನೆಲ್ಲಾ ಕಾನೂನು ಮೂಲಕವೇ ಎದುರಿಸುತ್ತೇವೆ ಎಂದು ಶೋಭಾ ಹೇಳಿದರು.

ಮುನಿರತ್ನ ಪ್ರಕರಣ: ಶೋಭಾ ಹೇಳಿದ್ದೇನು?

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ವಿಚಾರವಾಗಿ ಪ್ರತಿಕ್ರಿಯಿಸಿ, ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ. ಉಪ್ಪು ತಿಂದವರು ನೀರು ಕುಡಿಯುತ್ತಾರೆ. ಅವರು ತಪ್ಪು ಮಾಡಿದ್ದರೆ ಕ್ರಮ ಆಗಲಿ. ನಾವು ತಪ್ಪು ಮಾಡಿದ ಯಾರನ್ನೂ ರಕ್ಷಣೆ ಮಾಡಲ್ಲ. ಆದರೆ ಸರಕಾರ ದ್ವೇಷದ ರಾಜಕೀಯ ಮಾಡುವುದು ಬೇಡ ಎಂದರು.

ಇದನ್ನೂ ಓದಿ: ನಾಗಮಂಗಲ‌ ಕೋಮುಗಲಭೆ ಪ್ರಕರಣ: ಆರ್ ಅಶೋಕ್, ಶೋಭಾ ಕರಂದ್ಲಾಜೆ ವಿರುದ್ಧ FIR

‘ನಾಗಮಂಗಲ ಗಲಭೆ ವೇಳೆ ಕಲ್ಲು ತೂರಾಟ ಮಾಡಿ ಬೆಂಕಿ ಹಚ್ಚಿದವರನ್ನು ರಕ್ಷಿಸಿ, ಗಣೇಶನನ್ನೇ ಬಂಧಿಸಲಾಗಿದೆ’ ಎಂದು ಶೋಭಾ ಕರಂದ್ಲಾಜೆ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿದ್ದರು. ಬೆಂಗಳೂರಿನಲ್ಲಿ ನಡೆದ ಘಟನೆಯನ್ನ ನಾಗಮಂಗಲದಲ್ಲಿ ನಡೆದ ಘಟನೆ ಎಂದು ಆರೋಪಿಸಿದ್ದರು ಹೀಗಾಗಿ ಅವರ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ. ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬಗ್ಗೆ ನೀಡಿದ ಹೇಳಿಕೆಗಾಗಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ವಿರುದ್ಧವೂ ಎಫ್​ಐಆರ್ ದಾಖಲಿಸಲಾಗಿದೆ. ಇದರ ಬೆನ್ನಲ್ಲೇ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...