AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಭಾ ಕರಂದ್ಲಾಜೆ ಕಾರು ಅಪಘಾತ: ಚಾಲಕರಿಬ್ಬರ ವಿರುದ್ಧ ಎಫ್ಐಆರ್​ ದಾಖಲು

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪ್ರಚಾರ ರ‍್ಯಾಲಿ ವೇಳೆ ಓರ್ವ ವ್ಯಕ್ತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಮತ್ತು ಬಸ್​ ಚಾಲಕನ ವಿರುದ್ಧ ಪೊಲೀಸರು ಎಫ್​ಐಆರ್ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ. ಸದ್ಯ ಘಟನೆ ಸ್ಥಳದಲ್ಲಿದ್ದ ಸಿಸಿ ಕ್ಯಾಮೆರಾಗಳನ್ನ ಪರಿಶೀಲಿಸಲಾಗುತ್ತಿದೆ.

ಶೋಭಾ ಕರಂದ್ಲಾಜೆ ಕಾರು ಅಪಘಾತ: ಚಾಲಕರಿಬ್ಬರ ವಿರುದ್ಧ ಎಫ್ಐಆರ್​ ದಾಖಲು
ಪ್ರಚಾರದ ವೇಳೆ ಅಪಘಾತ
Vinay Kashappanavar
| Edited By: |

Updated on: Apr 09, 2024 | 3:40 PM

Share

ಬೆಂಗಳೂರು, ಏಪ್ರಿಲ್ 09: ಕೆ.ಆರ್.ಪುರಂನಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ (BJP Candidate Shobha Karandlaje) ಪ್ರಚಾರ ರ‍್ಯಾಲಿ ವೇಳೆ ಓರ್ವ ವ್ಯಕ್ತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಮತ್ತು ಬಸ್​ ಚಾಲಕನ ವಿರುದ್ಧ ಪೊಲೀಸರು ಎಫ್​ಐಆರ್ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ. ಐಪಿಸಿ ಸೆಕ್ಷನ್ 279, 304(A), 283 ಅಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದ್ದು, ಈ ಸಂಬಂಧ ಪೊಲೀಸರಿಂದ ಇಬ್ಬರೂ ಚಾಲಕರಿಗೆ ನೋಟಿಸ್ ನೀಡಲಾಗಿದೆ.

ಇತ್ತ ಮರಣೋತ್ತರ ಪರೀಕ್ಷೆ ವರದಿಗೆ ಪೊಲೀಸರು ಕಾಯುತ್ತಿದ್ದು, ಮರಣೋತ್ತರ ಪರೀಕ್ಷೆ ವರದಿ ಬಂದ ಮೇಲೆ ಸಾವು ಹೇಗೆ ಸಂಭವಿಸಿತು ಎಂದು ತಿಳಿಯಲಿದೆ. ಸದ್ಯ ಘಟನೆ ಸ್ಥಳದಲ್ಲಿದ್ದ ಸಿಸಿ ಕ್ಯಾಮೆರಾಗಳನ್ನ ಪರಿಶೀಲಿಸಲಾಗುತ್ತಿದೆ.

ಇದನ್ನೂ ಓದಿ: ಶೋಭಾ ಕರಂದ್ಲಾಜೆ ರ್‍ಯಾಲಿ ವೇಳೆ ಓರ್ವ ಸಾವು, ಬಿಜೆಪಿ ಮುಖಂಡನ ಎಡವಟ್ಟಿನಿಂದ ಜೀವ ಬಲಿ

ಹಾಗೆ ಘಟನಾ ಸ್ಥಳದಲ್ಲಿ ಇದ್ದವರ ಬಳಿ ಅಪಘಾತದ ಬಗ್ಗೆ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ.  ಘಟನೆ ನಡೆದ ವೇಳೆ ಕಾರಿನಲ್ಲಿ ಯಾರು ಯಾರು ಇದ್ದರು, ಕಾರಿನ ಮಾಲೀಕರು ಯಾರು ಎಂಬುದರ ಬಗ್ಗೆಯೂ ಮಾಹಿತಿ ಕಲೆ ಹಾಕಲಾಗುತ್ತಿದೆ.

ಮೃತ ವ್ಯಕ್ತಿಯನ್ನು ಪ್ರಕಾಶ್ (60) ಎಂದು ಗುರುತಿಸಲಾಗಿದೆ. ಮೃತ ಪ್ರಕಾಶ್ ಬೈಕ್​ ಚಲಾಯಿಸುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಕರಂದ್ಲಾಜೆ ಅವರ ಚಾಲಕ ಕಾರಿನ ಬಾಗಿಲು ತೆರೆದ ವೇಳೆ ಡಿಕ್ಕಿ ಹೊಡೆದಿದ್ದಾರೆ. ರಸ್ತೆಗೆ ಬಿದ್ದ ಅವರ ಮೇಲೆ ಹಿಂಬದಿಯಿಂದ ಬಂದ ಖಾಸಗಿ ಬಸ್ ಹರಿದು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಯುಗಾದಿ ಹಬ್ಬದ ದಿನ ಬಾಗಲಕೋಟೆಯ ಬೀಳಗಿ ಪಟ್ಟಣದ ರೈತರ ಎಕ್ಕೆ ಎಲೆ, ಜಕನೇರನ ಕಟ್ಟೆ ಭವಿಷ್ಯ

ಇನ್ನು ಪ್ರಕರಣ ಕುರಿತಾಗಿ ಕರಂದ್ಲಾಜೆ ಅವರ ಚಾಲಕ ಮತ್ತು ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದರು. ಹೆಚ್ಚಿನ ತನಿಖೆಗಾಗಿ ನಾವು ಅವರನ್ನು ವಶಕ್ಕೆ ತೆಗೆದುಕೊಂಡಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ನಿನ್ನೆ ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ