AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆಯಲ್ಲಿ ನನ್ನ ಸ್ಪರ್ಧೆ ನಿಶ್ಚಿತ ಎಂದ ಶೋಭಾ; ಎರಡೂ ಬಾರಿ ಗೆಲ್ಲಿಸಿದ್ದು ಮೋದಿ ಮುಖ ನೋಡಿ ಎಂದ ಸಿಟಿ ರವಿ

ಒಂದೆಡೆ, ಕಾರ್ಯಕರ್ತರು ಹಾಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಗೋ ಬ್ಯಾಕ್ ಘೋಷಣೆ ಕೂಗುತ್ತಿದ್ದು, ಇನ್ನೊಂದೆಡೆ, ತಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡೇ ಮಾಡುತ್ತೇನೆ ಎಂದು ಶೋಭಾ ಹೇಳಿದ್ದಾರೆ. ಟಿಕೆಟ್ ಫೈಟ್ ವಿಚಾರವಾಗಿ ಮಾತನಾಡಿದ ಸಿಟಿ ರವಿ, ಯಾರೇ ಅಭ್ಯರ್ಥಿಯಾದರೂ ಮೋದಿ ಮುಖ ನೋಡಿ ವೋಟ್ ಹಾಕಿ. ಈ ಹಿಂದೆ ಎರಡು ಬಾರಿ ಮೋದಿ ಮುಖ ನೋಡಿಯೇ ಗೆಲ್ಲಿಸಿದ್ದು ಎಂದು ಹೇಳಿದ್ದಾರೆ.

ಚುನಾವಣೆಯಲ್ಲಿ ನನ್ನ ಸ್ಪರ್ಧೆ ನಿಶ್ಚಿತ ಎಂದ ಶೋಭಾ; ಎರಡೂ ಬಾರಿ ಗೆಲ್ಲಿಸಿದ್ದು ಮೋದಿ ಮುಖ ನೋಡಿ ಎಂದ ಸಿಟಿ ರವಿ
ಚುನಾವಣೆಯಲ್ಲಿ ನನ್ನ ಸ್ಪರ್ಧೆ ನಿಶ್ಚಿತ ಎಂದ ಶೋಭಾ ಕರಂದ್ಲಾಜೆ; ಎರಡೂ ಬಾರಿ ಗೆಲ್ಲಿಸಿದ್ದು ಮೋದಿ ಮುಖ ನೋಡಿ ಎಂದ ಸಿಟಿ ರವಿ
ಅಶೋಕ್​ ಪೂಜಾರಿ
| Edited By: Rakesh Nayak Manchi|

Updated on: Mar 11, 2024 | 4:59 PM

Share

ಮಂಗಳೂರು, ಮಾ.11: ಬಿಜೆಪಿ ಹೈಕಮಾಂಡ್​ಗೆ ಕರ್ನಾಟಕದಲ್ಲಿ ಕೆಲವು ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ. ದಕ್ಷಿಣ ಕನ್ನಡ, ಮಂಡ್ಯದ ನಂತರ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಟಿಕೆಟ್​ಗಾಗಿ ಜಿದ್ದಾಜಿದ್ದಿ ನಡೆಯುತ್ತಿದೆ. ಒಂದೆಡೆ, ಕಾರ್ಯಕರ್ತರು ಹಾಲಿ ಸಂಸದೆ ಶೋಭಾ ಕರಂದ್ಲಾಜೆ (Shobha Karandlaje) ವಿರುದ್ಧ ಗೋ ಬ್ಯಾಕ್ ಘೋಷಣೆ ಕೂಗುತ್ತಿದ್ದು, ಇನ್ನೊಂದೆಡೆ, ತಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡೇ ಮಾಡುತ್ತೇನೆ ಎಂದು ಶೋಭಾ ಹೇಳಿದ್ದಾರೆ. ಟಿಕೆಟ್ ಫೈಟ್ ವಿಚಾರವಾಗಿ ಮಾತನಾಡಿದ ಸಿಟಿ ರವಿ (CT Ravi), ಯಾರೇ ಅಭ್ಯರ್ಥಿಯಾದರೂ ಮೋದಿ ಮುಖ ನೋಡಿ ವೋಟ್ ಹಾಕಿ. ಈ ಹಿಂದೆ ಎರಡು ಬಾರಿ ಮೋದಿ ಮುಖ ನೋಡಿಯೇ ಗೆಲ್ಲಿಸಿದ್ದು ಎಂದರು.

ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಬಿಳಿನೆಲೆಯಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ, ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡಿಯೇ ಮಾಡುತ್ತೇನೆ ಎಂದು ಪುನರುಚ್ಚರಿಸಿದರು. ಒಂದೆರಡು ದಿನಗಳಲ್ಲಿ ಬಿಜೆಪಿ ಟಿಕೆಟ್ ಘೋಷಣೆಯಾಗಲಿದೆ. ಭಾರತೀಯ ಜನತಾ ಪಾರ್ಟಿಯ ನಿರ್ಧಾರಕ್ಕೆ ನಾವೆಲ್ಲ ಬದ್ಧರಾಗಿದ್ದೇವೆ ಎಂದರು.

ಇದನ್ನೂ ಓದಿ: ಟಿಕೆಟ್ ತಪ್ಪಿಸಲು ಉಡುಪಿ ಚಿಕ್ಕಮಗಳೂರಿನಲ್ಲಿ ಪಿತೂರಿ: ಬೆಳಗಾವಿಯಲ್ಲಿ ಶೋಭಾ ಕರಂದ್ಲಾಜೆ ಗಂಭೀರ ಆರೋಪ

ರಾಜಕೀಯದಲ್ಲಿ ಗೆಲ್ಲುವ ಕ್ಷೇತ್ರವನ್ನು ಎಲ್ಲರೂ ಕೇಳುತ್ತಾರೆ. ಸೀಟು ಕೇಳುವಾಗ ಗೊಂದಲ ಆಗುತ್ತದೆ, ಇದಕ್ಕೂ ಚುನಾವಣೆಗೂ ಸಂಬಂಧ ಇಲ್ಲ. ನಾನು ಸ್ಪರ್ಧೆ ಮಾಡೇ ಮಾಡುತ್ತೇನೆ, ಚುನಾವಣಾ ಮಂಡಳಿ ನಿರ್ಧಾರಕ್ಕೆ ಬದ್ಧ ಎಂದು ಶೋಭಾ ಕರಂದ್ಲಾಜೆ ಹೇಳಿದರು.

ಬಹಳ ದೊಡ್ಡ ಪ್ರಮಾಣದಲ್ಲಿ ಎಲ್ಲರ ಕ್ಷೇತ್ರಗಳಲ್ಲಿ ಕೆಲಸ ಆಗಿದೆ. ರಸ್ತೆ, ರೈಲ್ವೇ, ಅಮೃತ ರೈಲ್ವೇ ಯೋಜನೆಗಳು ಜಾರಿಗೆ ಬಂದಿದೆ. ಯಾವುದೇ ಹಳ್ಳಿಗೆ ಹೋದರೂ ಜನ ಅಭಿವೃದ್ಧಿ ಕಂಡಿದ್ದಾರೆ. ಅಭಿವೃದ್ಧಿಯ ಆಧಾರದಲ್ಲಿ ನಾವು ವೋಟ್ ಕೇಳುತ್ತೇವೆ. ಕರ್ನಾಟಕದಲ್ಲಿ ಶೇಕಡಾ 100 ರಷ್ಟು ಸೀಟ್ ಬರುತ್ತದೆ ಅನ್ನೋದು ನಮ್ಮ ವಿಶ್ವಾಸವಾಗಿದೆ. ಮೋದಿಯನ್ನ ಜನ ಪ್ರೀತಿಸುತ್ತಾರೆ, ಮೋದಿಯನ್ನ ಜನ ಗೆಲ್ಲಿಸುತ್ತಾರೆ ಎಂದರು.

ಎರಡು ಬಾರಿ ಗೆಲ್ಲಿಸಿದ್ದು ಮೋದಿ ಮುಖ ನೋಡಿ

ಚಿಕ್ಕಮಗಳೂರಿನ ಪಾಂಚಜನ್ಯ ಕಚೇರಿಯಲ್ಲಿ ನೂತನ ಕಾರ್ಯಕರ್ತರ ಪದಗ್ರಹಣ ಕಾರ್ಯಕ್ರಮದಲ್ಲಿ ಸಿಟಿ ರವಿ ಅವರು ಕ್ಷೇತ್ರದ ಟಿಕೆಟ್ ವಿಚಾರವಾಗಿ ನಡೆಯುತ್ತಿರುವ ಜಟಾಪಟಿ ಬಗ್ಗೆ ಮಾತನಾಡಿದರು. ಯಾರು ಅಭ್ಯರ್ಥಿ ಎಂಬುದು ಮುಖ್ಯವಲ್ಲ. ಯಾರೇ ಅಭ್ಯರ್ಥಿ ಆಗಲಿ ಮೋದಿ‌ ಮುಖ ನೋಡಿ ಗೆಲ್ಲಿಸಿ. ಹಿಂದೆ ಎರಡು ಬಾರಿ ಗೆಲ್ಲಿಸಿದ್ದೂ ಮೋದಿ ಮುಖ ನೋಡಿ. ಇದೀಗ ಯಾವುದೇ ರಾಜಿ ಇಲ್ಲದೆ ಮೂರನೇ ಬಾರಿಯೂ ಮೋದಿಯವರ‌ ಮುಖ‌ ನೊಡಿಯೇ ಗೆಲ್ಲಿಸಿ ಎಂದು ಮನವಿ ಮಾಡಿದರು. ಅಲ್ಲದೆ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಿಸಿ. ಒಂದೊಂದು ವೋಟ್, ಒಂದೊಂದ್ದು ಸೀಟು ಬಹಳ ಮುಖ್ಯ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಶೋಕ್​ ಪೂಜಾರಿ
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ