ಮದ್ಯ ಪ್ರಿಯರಿಗೆ ಶಾಕ್, ಬಿಯರ್​ ಬೆಲೆ ಮತ್ತೊಮ್ಮೆ ಏರಿಕೆ

ಮದ್ಯಪಾನ ಆರೋಗ್ಯ ಹಾನಿಕಾರ ಅಂದ್ರೂ ಮದ್ಯ ಕುಡಿಯುವರ ಸಂಖ್ಯೆ ಕಡಿಮೆಯಾಗಿಲ್ಲ. ಬಿಯರ್​ ಕುಡಿಯುವವರಿಗೆ ಉತ್ಪಾದನಾ ಕಂಪನಿಗಳು ಮತ್ತೊಮ್ಮೆ ಶಾಕ್​ ನೀಡಿವೆ. ಒಂದು ತಿಂಗಳ ಹಿಂದೆಯಷ್ಟೆ ಬಿಯರ್​ ಬೆಲೆ ಏರಿಕೆಯಾಗಿತ್ತು. ಇದೀಗ ಮತ್ತೆ ಬಿಯರ್ ಬೆಲೆ ಏರಿಕೆಯಾಗಿದೆ.

ಮದ್ಯ ಪ್ರಿಯರಿಗೆ ಶಾಕ್, ಬಿಯರ್​ ಬೆಲೆ ಮತ್ತೊಮ್ಮೆ ಏರಿಕೆ
ಬಿಯರ್​
Follow us
Kiran Surya
| Updated By: ವಿವೇಕ ಬಿರಾದಾರ

Updated on:Jul 30, 2024 | 11:08 AM

ಬೆಂಗಳೂರು, ಜುಲೈ 30: ರಾಜ್ಯದಲ್ಲಿ ಬಿಯರ್ (Beer) ಬೆಲೆ 10 ರಿಂದ 20 ರೂಪಾಯಿ ಏರಿಕೆ ಮಾಡಲಾಗಿದೆ. ರಾಜ್ಯದಲ್ಲಿ ಕಳೆದ 17 ತಿಂಗಳಲ್ಲಿ 5ನೇ ಬಾರಿಗೆ ಬಿಯರ್ ಬೆಲೆ ಏರಿಕೆಯಾಗಿದೆ. ಕಂಪನಿಗಳು ಒಂದು ತಿಂಗಳ ಹಿಂದೆಯಷ್ಟೆ ಬಿಯರ್ ದರ ಏರಿಸಿದ್ದವು. ಕಚ್ಚಾ ವಸ್ತುಗಳ ಬೆಲೆ ಏರಿಕೆ ಕಾರಣ ನೀಡಿ ಮತ್ತೆ ದರ ಏರಿಕೆ ಮಾಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಕರ್ನಾಟಕ ಸರ್ಕಾರ (Karnataka Government) ಅಧಿಕಾರಕ್ಕೆ ಬಂದ ಮೇಲೆ ಬಿಯರ್ ದರ 50ರಿಂದ 60 ರೂ.ವರೆಗೆ ಏರಿಕೆಯಾಗಿದೆ.

ಸರ್ಕಾರ ಈ ಹಿಂದೆ ಬಿಯರ್‌ ಮೇಲೆ ಶೇ.20ರಷ್ಟು ಹೆಚ್ಚುವರಿ ಸುಂಕ ವಿಧಿಸಿತ್ತು. ಆ ನಂತರ ಉತ್ಪಾದನಾ ವೆಚ್ಚ ಸರಿದೂಗಿಸಿಕೊಳ್ಳಲು ಬಿಯರ್ ಕಂಪನಿಗಳು ಫೆಬ್ರವರಿ ತಿಂಗಳಲ್ಲಿ ಬಿಯರ್​ ಬೆಲೆ 10 ರೂ.ವರೆಗೆ ಏರಿಕೆ ಮಾಡಿತ್ತು. ಈಗ ಕಂಪನಿಗಳು ಕಚ್ಚಾ ವಸ್ತುಗಳ ಬೆಲೆ ಏರಿಕೆ ಕಾರಣ ನೀಡಿ ಬಿಯರ್ ದರ ಏರಿಕೆ ಮಾಡಿವೆ. ಈ ಮೂಲಕ 15 ತಿಂಗಳ ಅಂತರದಲ್ಲಿ ಬಿಯರ್‌ ಬೆಲೆ ಸುಮಾರು 50 ರಿಂದ 60 ರೂ. ವರೆಗೆ ಹೆಚ್ಚಳವಾದಂತಾಗಿದೆ.

ಕೆಲವು ಕಂಪನಿಗಳ ಬಿಯರ್​ ದರ ಕಳೆದ ಗುರುವಾರದಿಂದ ಏರಿಕೆಯಾಗಿದೆ. ಇನ್ನು ಕೆಲವು ಕಂಪನಿಗಳ ಪರಿಷ್ಕೃತ ದರ ಮಂಗಳವಾರ, ಬುಧವಾರದಿಂದ ಜಾರಿಯಾಗಲಿದೆ. ಎಲ್ಲ ಬ್ರ್ಯಾಂಡ್​ಗಳ ಬಿಯರ್ ಬೆಲೆ ಪ್ರತಿ ಬಾಟಲಿಗೆ 10 ರಿಂದ 20 ರೂಪಾಯಿವರೆಗೆ ಹೆಚ್ಚಳವಾಗಿದೆ.

ಇದನ್ನೂ ಓದಿ: ನಂದಿನಿ ಹಾಲಿನ ದರ ಹೆಚ್ಚಳ; ಕೆಎಂಎಫ್​ನಿಂದ ಬೆಲೆ ಏರಿಕೆ ಬರೆ

ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕೆ ಒಂದಲ್ಲಾ ಒಂದು ವಸ್ತುಗಳು ಏರಿಕೆಯಾಗುತ್ತಲೇ ಬಂದಿವೆ. ರಾಜ್ಯ ಸರ್ಕಾರ ಮೊದಲಿಗೆ ಮದ್ಯದ ಮೇಲಿನ ಸುಂಕ ಏರಿಸಿತ್ತು. ನಂತರ ವಾಣಿಜ್ಯ ವಾಹನಗಳ ಮೇಲಿನ ಸಾರಿಗೆ ಸೆಸ್​ ಅನ್ನು ಏರಿಕೆ ಮಾಡಿತ್ತು.

ನಂತರ ಮುಂದ್ರಾಂಕ ಶುಲ್ಕವನ್ನು ಏರಿಕೆ ಮಾಡಿತ್ತು. ನಂತರ ಬಿತ್ತನೆ ಬೀಜದ ಬೆಲೆ ಶೇ50-60 ರಷ್ಟು ಹೆಚ್ಚಳ ಮಾಡಿತ್ತು. ಪೆಟ್ರೋಲ್​ ಡೀಸೆಲ್​ ಬೆಲೆ ಪ್ರತಿ ಲೀಟರ್​ಗೆ 3 ರೂ. ಹೆಚ್ಚಳವಾಗಿತ್ತು. ತದನಂತರದಲ್ಲಿ ನಂದಿನಿ ಹಾಲಿನ ದರ 2 ರೂ. ಏರಿಕೆ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:32 am, Tue, 30 July 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ