ಎಣ್ಣೆ ಪ್ರಿಯರಿಗೆ ಮತ್ತೊಮ್ಮೆ ಶಾಕಿಂಗ್ ನ್ಯೂಸ್, ಮೇ 15ರ ವರೆಗೆ ಓಪನ್ ಆಗಲ್ಲ ಬಾರ್
ಬೆಂಗಳೂರು: 2ನೇ ಹಂತದ ಲಾಕ್ಡೌನ್ ಮೇ 3ಕ್ಕೆ ಅಂತ್ಯವಾಗಲಿದೆ. ಹೀಗಾಗಿ ಇಂದು ಪ್ರಧಾನಿ ಮೋದಿ ಸಿಎಂಗಳ ಜೊತೆ ಸಂವಾದ ನಡೆಸಿದ್ದಾರೆ. ಪ್ರಧಾನಿ ಜೊತೆಗಿನ ವಿಡಿಯೋ ಸಂವಾದದ ವೇಳೆ ರಾಜ್ಯದ ಅಭಿಪ್ರಾಯ ಹೇಳಿರುವ ಸಿಎಂ ಯಡಿಯೂರಪ್ಪ ಎಣ್ಣೆ ಪ್ರಿಯರಿಗೆ ಶಾಕಿಂಗ್ ನ್ಯೂಸ್ ನೀಡಿದ್ದಾರೆ. ಪ್ರಧಾನಿ ಜೊತೆ ವಿಡಿಯೋ ಸಂವಾದದ ವೇಳೆ ಮೇ 15ರವರೆಗೆ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕೊಡುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ. ಹೀಗಾಗಿ ಮೇ 15ರವರೆಗೆ ಎಣ್ಣೆ ಪ್ರಿಯರಿಗೆ […]
ಬೆಂಗಳೂರು: 2ನೇ ಹಂತದ ಲಾಕ್ಡೌನ್ ಮೇ 3ಕ್ಕೆ ಅಂತ್ಯವಾಗಲಿದೆ. ಹೀಗಾಗಿ ಇಂದು ಪ್ರಧಾನಿ ಮೋದಿ ಸಿಎಂಗಳ ಜೊತೆ ಸಂವಾದ ನಡೆಸಿದ್ದಾರೆ. ಪ್ರಧಾನಿ ಜೊತೆಗಿನ ವಿಡಿಯೋ ಸಂವಾದದ ವೇಳೆ ರಾಜ್ಯದ ಅಭಿಪ್ರಾಯ ಹೇಳಿರುವ ಸಿಎಂ ಯಡಿಯೂರಪ್ಪ ಎಣ್ಣೆ ಪ್ರಿಯರಿಗೆ ಶಾಕಿಂಗ್ ನ್ಯೂಸ್ ನೀಡಿದ್ದಾರೆ.
ಪ್ರಧಾನಿ ಜೊತೆ ವಿಡಿಯೋ ಸಂವಾದದ ವೇಳೆ ಮೇ 15ರವರೆಗೆ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕೊಡುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ. ಹೀಗಾಗಿ ಮೇ 15ರವರೆಗೆ ಎಣ್ಣೆ ಪ್ರಿಯರಿಗೆ ಎಣ್ಣೆ ಸಿಗುವುದು ಬಹುತೇಕ ಡೌಟ್ ಆಗಿದೆ.
ಮೇ 3 ಲಾಕ್ಡೌನ್ ಮುಗಿದ ನಂತರ ಎಣ್ಣೆ ಕುಡಿದು ಮಜಾ ಮಾಡಬೇಕು ಎಂದುಕೊಂಡಿರುವವರಿಗೆ ಸಿಎಂ ಶಾಕಿಂಗ್ ನ್ಯೂಸ್ ನೀಡಿದ್ದಾರೆ. ರಾಜ್ಯದ ಅಭಿಪ್ರಾಯ ಸಲ್ಲಿಕೆ ವೇಳೆ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಮೇ 15ರವರೆಗೆ ಲಾಕ್ಡೌನ್ ಮುಂದುವರಿಸಲು ಕೇಂದ್ರ ಸರ್ಕಾರದ ನಿರ್ಧಾರಕ್ಕೆ ರಾಜ್ಯ ಸರ್ಕಾರ ಸಹಮತ ಸೂಚಿಸಿದೆ.
ಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ: ಮದ್ಯ ಮಾರಾಟಕ್ಕೆ ಸಂಬಂಧಿಸಿ ಮಾತನಾಡಿದ ಅಬಕಾರಿ ಸಚಿವ ಹೆಚ್.ನಾಗೇಶ್ ನಾನು ಮೇ 3ರ ಬಳಿಕ ಗ್ರೀನ್‌ಜೋನ್‌ನಲ್ಲಿ ಮದ್ಯ ಮಾರಾಟಕ್ಕೆ ಸಿಎಂ ಬಳಿ ಮನವಿ ಮಾಡಿದ್ದೇನೆ. ಆದ್ರೆ ಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ಕೋಲಾರದಲ್ಲಿ ಪ್ರತಿಕ್ರಿಯಿಸಿದ್ದಾರೆ. https://www.facebook.com/Tv9Kannada/videos/305645457105158/
Published On - 1:52 pm, Mon, 27 April 20