AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುದಾನಿತ ಶಾಲೆಗಳಲ್ಲಿ 7 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ, ವಿದ್ಯಾರ್ಥಿಗಳಿಗೆ ಸಮಸ್ಯೆ: ವೈಹೆಚ್ ಹುಚ್ಚಯ್ಯ

ಕರ್ನಾಟಕ ರಾಜ್ಯದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದ್ದು, ನೇಮಕಾತಿ ಮೂಲಕ ಶಿಕ್ಷಕರನ್ನು ನೇಮಿಸಲಾಗುತ್ತಿದೆ. ಆದರೆ, ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರ ಕೊರೆತೆಯಿದ್ದರೂ 2015 ರಿಂದ ನೇಮಕಾತಿಗೆ ಸರ್ಕಾರ ಅನುಮತಿ ನೀಡಿಲ್ಲ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ಅನುದಾನಿತ ಶಿಕ್ಷಣ ಸಂಸ್ಥೆ ಅದ್ಯಕ್ಷ ವೈಹೆಚ್ ಹುಚ್ಚಯ್ಯ, ಕೋರ್ಟ್ ಆದೇಶವಿದ್ದರೂ ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದರು.

ಅನುದಾನಿತ ಶಾಲೆಗಳಲ್ಲಿ 7 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ, ವಿದ್ಯಾರ್ಥಿಗಳಿಗೆ ಸಮಸ್ಯೆ: ವೈಹೆಚ್ ಹುಚ್ಚಯ್ಯ
ಕರ್ನಾಟಕದ ಅನುದಾನಿತ ಶಾಲೆಗಳಲ್ಲಿ 7 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ (ಸಾಂದರ್ಭಿಕ ಚಿತ್ರ)
Vinayak Hanamant Gurav
| Updated By: Rakesh Nayak Manchi|

Updated on: Jan 12, 2024 | 2:26 PM

Share

ಬೆಂಗಳೂರು, ಜ.12: ರಾಜ್ಯದಲ್ಲಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ (Aided Educational Institution) ಏಳು ಸಾವಿರಕ್ಕೂ ಅಧಿಕ ಶಿಕ್ಷಕರ (Teachers) ಕೊರತೆ ಇದೆ ಎಂದು ಕರ್ನಾಟಕ ರಾಜ್ಯ ಅನುದಾನಿತ ಶಿಕ್ಷಣ ಸಂಸ್ಥೆ ಅದ್ಯಕ್ಷ ವೈಹೆಚ್ ಹುಚ್ಚಯ್ಯ ಹೇಳಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋರ್ಟ್ ಆದೇಶವಿದ್ದರೂ ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಶಿಕ್ಷಕರ ನೇಮಕ ಮಾಡಲು ಸರ್ಕಾರ 2015 ರಿಂದ ಅವಕಾಶ ನೀಡುತ್ತಿಲ್ಲ. 7,129 ಶಿಕ್ಷಕರ ಕೊರತೆ ನಮ್ಮನ್ನು ಕಾಡುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ. ಇಂಗ್ಲಿಷ್ ಹಾಗೂ ಗಣಿತ ಶಿಕ್ಷಕರು ಇಲ್ಲದೇ ಸಮಸ್ಯೆಯಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತುಂಬಾ ಹೊಡೆತ ನೀಡಿದೆ. ಶಿಕ್ಷಕರು ಇಲ್ಲದೇ ಅನೇಕ ಶಾಲೆಗಳು ಮುಚ್ಚಿವೆ. ಆದರೂ ಸರ್ಕಾರ ನಮಗೆ ಶಿಕ್ಷಕರ ನೇಮಕಕ್ಕೆ ಅವಕಾಶ ಮಾಡಿ ಕೊಟ್ಟಿಲ್ಲ ಎಂದರು.

ಇದನ್ನೂ ಓದಿ: ಬಾಕಿ ಸಂಬಳ ಸಿಕ್ಕಿಲ್ಲ ಎಂದು ಸ್ಮೃತಿ ಇರಾನಿಗೆ ದೂರು ನೀಡಿದ ಶಿಕ್ಷಕರು; ಅಧಿಕಾರಿಗೆ ಫೋನ್ ಮಾಡಿ ತರಾಟೆಗೆ ತೆಗೆದುಕೊಂಡ ಸಚಿವೆ

ಶಿಕ್ಷಣ ಮಸೂದೇ ಆಧಾರದ ಮೇಲೆ ಖಾಸಗಿಯಾಗಿ ಶಾಲೆ ನಡೆಸಲು ಅವಕಾಶ‌ ಇದೆ ಎಂದು ಹೇಳಿದ ಹುಚ್ಚಯ್ಯ, ನಿವೃತ್ತಿ ಹಾಗೂ ರಾಜೀನಾಮೆ ಹಾಗೂ ಮರಣದಿಂದ ಶಿಕ್ಷಕರ ಕೊರತೆಯಾಗಿದೆ. ನೇಮಕಾತಿಗೆ ಯಾವುದೇ ಬಜೆಟ್ ಅವಶ್ಯಕತೆ ಇಲ್ಲ. ನಾವು ನೇಮಕಾತಿ ವಿಚಾರವಾಗಿ ಹೈಕೋರ್ಟ್ ಹೋಗಿದ್ದೇವೆ. ಕೋರ್ಟ್ ಕೂಡ ಶಿಕ್ಷಕರ ನೇಮಕಾತಿ ಮಾಡಲು ಅನುಮತಿ ನೀಡಿದೆ. ಆದರೆ ಇಲಾಖೆ ಹಾಗೂ ಸರ್ಕಾರ ಯಾವುದೇ ತೀರ್ಮಾನ ಮಾಡಿಲ್ಲ ಎಂದರು.

ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ

ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದೆ ಎಂದು ಆರೋಪಿಸಿದ ಹುಚ್ಚಯ್ಯ, ಶಿಕ್ಷಣ ಇಲಾಖೆಯಿಂದ ಎಲ್ಲಾ ಸಂಸ್ಕಾರ ಬೆಳೆಯುತ್ತದೆ. ಆದರೆ ಶಿಕ್ಷಣ ಇಲಾಖೆಯಲ್ಲೂ ದುಡ್ಡು ನೀಡದೇ ಹೋದರೆ ಏನೂ ಆಗುವುದಿಲ್ಲ. ಇದನ್ನು ಮೊದಲು ಸರಿ ಪಡಿಸಬೇಕು. ಇಲ್ಲವಾದರೆ ನಾವು ಬೀದಿಗಿಳಿಯಲು ಸಜ್ಜಾಗಿದ್ದೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ