ರೆಮ್ಡಿಸಿವಿರ್ ಇಂಜೆಕ್ಷನ್ ಅಭಾವ, ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ಘನಾ ಅಧ್ಯಕ್ಷ ಡಾ. ಹೆಚ್ ಎಮ್​ ಪ್ರಸನ್ನ

ಡಾ ಪ್ರಸನ್ನ ಅವರು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರಿಗೆ ಪತ್ರ ಬರೆದಿದ್ದು ಅದರ ಪ್ರತಿಯನ್ನು ಅರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೆದ್ ಅಖ್ತರ್ ಅವರಿಗೆ ರವಾನಿಸಿದ್ದಾರೆ. ಡ್ರಗ್ಸ್ & ಲಾಜಿಸ್ಟಿಕ್ ಇಲಾಖೆಗೆ ಸೂಚನೆ ನೀಡಿ ಅಗತ್ಯವಿರುವ ಆಸ್ಪತ್ರೆಗಳಿಗೆ ರೆಮ್ಡಿಸಿವಿರ್ ವಾಯ್ಲ್​ಗಳನ್ನು ಪೂರೈಸಲು ವ್ಯವಸ್ಥೆ ಮಾಡಬೇಕೆಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.

ರೆಮ್ಡಿಸಿವಿರ್ ಇಂಜೆಕ್ಷನ್ ಅಭಾವ, ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ಘನಾ ಅಧ್ಯಕ್ಷ ಡಾ. ಹೆಚ್ ಎಮ್​ ಪ್ರಸನ್ನ
ರೆಮ್​ಡೆಸಿವಿರ್ ಇಂಜೆಕ್ಷನ್ (ಪ್ರಾತಿನಿಧಿಕ ಚಿತ್ರ)
Follow us
|

Updated on:Apr 10, 2021 | 9:02 PM

ಬೆಂಗಳೂರು: ಭಾರತದಲ್ಲಿ ಕೊರೊನಾ ಸ್ಥಿತಿ ದಿನೇದಿನೆ ಬಿಗಡಾಯಿಸುತ್ತಿದೆ ಮತ್ತು ಕರ್ನಾಟಕವೂ ಸೇರಿದಂತೆ ಕೆಲ ರಾಜ್ಯಗಳಲ್ಲಿ ಪ್ರಸಕ್ತ ಸ್ಥಿತಿಯು ಕಳೆದ ವರ್ಷಗಿಂತ ಹದಗೆಟ್ಟಿದೆ. ಸೋಂಕಿತರ ಚಿಕಿತ್ಸೆಗೆ ಬಳಸುವ ರೆಮ್ಡಿಸಿವಿರ್ ಇಂಜೆಕ್ಷನ್ ಲಭ್ಯವಿಲ್ಲದಿರುವುದು ವೈದ್ಯರ ಮತ್ತು ಸೋಂಕಿತರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ರೆಮ್ಡಿಸಿವಿರ್ ಇಂಜೆಕ್ಷನ್ ಕೊರೊನಾ ವಿರುದ್ಧ ಚಿಕಿತ್ಸೆಯ ಅವಿಭಾಜ್ಯವಾಗಿದ್ದು ಸೋಂಕಿನ ಪ್ರಮಾಣ ತಗ್ಗಬೇಕಾದರೆ ಇದು ಬೇಕೇಬೇಕು. ಈ ಹಿನ್ನೆಲೆಯಲ್ಲಿ ಘನಾ ಅಧ್ಯಕ್ಷ ಡಾ. ಹೆಚ್ ಎಮ್​ ಪ್ರಸನ್ನ ಅವರು ಸರ್ಕಾರಕ್ಕೆ ಪತ್ರವೊಂದನ್ನು ಬರೆದು ರಾಜ್ಯದಲ್ಲಿ ದಿನೇದಿನೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ, ಆಸ್ಪತ್ರೆಗೆ ಬರುತ್ತಿರುವ ಹಲವಾರು ಜನ ರೋಗ ಲಕ್ಷಣ ಇರುವ ಸೋಂಕಿತರಾಗಿರುವುದರಿಂದ ಅವರ ಚಿಕಿತ್ಸೆಗೆ ರೆಮ್ಡಿಸಿವಿರ್ ಇಂಜೆಕ್ಷನ್ ಬೇಕು. ಆದರೆ ಇದು ಲಭ್ಯವಾಗುತ್ತಿಲ್ಲ, ಪುರೈಕೆ ಹಾಗೂ ಸರಬರಾಜಿನಲ್ಲಿ ಭಾರಿ ಆಡಚಣೆ ಉಂಟಾಗಿರುವುದರಿಂದ ಸೋಂಕಿತರಿಗೆ ಚಿಕಿತ್ಸೆ ಒದಗಿಸುವುದು ಸಮಸ್ಯೆಯಾಗುತ್ತಿದೆ. ರೆಮ್ಡಿಸಿವಿರ್ ಇಂಜೆಕ್ಷನ್ ಅಲಭ್ಯತೆ ಖಾಸಗಿ ಆಸ್ಪತ್ರೆಗಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಿದೆ ಎಂದು ಹೇಳಿದ್ದಾರೆ.

ಡಾ ಪ್ರಸನ್ನ ಅವರು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರಿಗೆ ಪತ್ರ ಬರೆದಿದ್ದು ಅದರ ಪ್ರತಿಯನ್ನು ಅರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೆದ್ ಅಖ್ತರ್ ಅವರಿಗೆ ರವಾನಿಸಿದ್ದಾರೆ. ಡ್ರಗ್ಸ್ & ಲಾಜಿಸ್ಟಿಕ್ ಇಲಾಖೆಗೆ ಸೂಚನೆ ನೀಡಿ ಅಗತ್ಯವಿರುವ ಆಸ್ಪತ್ರೆಗಳಿಗೆ ರೆಮ್ಡಿಸಿವಿರ್ ವಾಯ್ಲ್​ಗಳನ್ನು ಪೂರೈಸಲು ವ್ಯವಸ್ಥೆ ಮಾಡಬೇಕೆಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಆದರೆ, ರೆಮ್ಡಿಸಿವಿರ್ ಇಂಜೆಕ್ಷನ್​ಗಳಿಗೆ ಸಂಬಂಧಿಸಿದ ಚಿತ್ರಣ ಅಷ್ಟು ಸರಳವಾಗಿಲ್ಲ. ಅಸಲಿಗೆ ಅದನ್ನು ತಯಾರಿಸುವ ಕಂಪನಿಗಳಲ್ಲೇ ಅದು ಲಭ್ಯವಿಲ್ಲ. ಡಿಸೆಂಬರ್-ಫೆಬ್ರುವರಿ ನಡುವಿನ ಅವಧಿಯಲ್ಲಿ ಕೊರೊನಾ ಪ್ರಕರಣಗಳು ತೀವ್ರವಾಗಿ ಇಳಿಮುಖಗೊಂಡು, ರೆಮ್ಡಿಸಿವಿರ್​ಗೆ ಬೇಡಿಕೆ ಸಂಪೂರ್ಣವಾಗಿ ಕಡಿಮೆಯಾಗಿದ್ದರಿಂದ ಅದರ ಉತ್ಪಾದನೆ ಪ್ರಮಾಣ ತಗ್ಗಿ ಸರಬರಾಜಿನ ಮೇಲೆ ಪ್ರಭಾವ ಬೀರಿತು ಎಂದು ಕಂಪನಿಗಳು ಹೇಳುತ್ತಿವೆ. ಈಗ ಕೊವಿಡ್-19 ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿರುವುದರಿಂದ ಉತ್ಪಾದನೆ ಮತ್ತು ಸರಬರಾಜು ಪುನಃ ಮೊದಲಿನಂತಾಗಬೇಕಾದರೆ ಕನಿಷ್ಠ 10 ದಿನಗಳ ಕಾಲಾವಕಾಶ ಬೇಕು ಎಂದು ಅವು ಹೇಳಿವೆ.

DR HM Prasanna

ಡಾ ಹೆಚ್ ಎಮ್​ ಪ್ರಸನ್ನ

ಕರ್ನಾಟಕವಲ್ಲದೆ, ಮಹಾರಾಷ್ಟ್ರ, ದೆಹಲಿ, ಗುಜರಾತ್, ಛತ್ತೀಸ್​ಗಢ್ ಮತ್ತು ಮಧ್ಯಪ್ರದೇಶಗಳಲ್ಲೂ ರೆಮ್ಡಿಸಿವಿರ್ ಇಂಜೆಕ್ಷನ್​ನ ತೀವ್ರ ಅಭಾವ ತಲೆದೋರಿದೆ. ಬಾರತದಲ್ಲೀಗ ಪ್ರತಿದಿನ 1 ಲಕ್ಷಕ್ಕಿಂತ ಹೆಚ್ಚಿನ ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿವೆ ಮತ್ತು ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 10 ಲಕ್ಷವನ್ನು ಸಮೀಪಿಸಿದೆ. ಇದರಲ್ಲಿ ಅರ್ಧಕ್ಕಿಂತ ಹೆಚ್ಚು ಪ್ರಕರಣಗಳು ಮಹಾರಾಷ್ಟ್ರದಲ್ಲಿದ್ದು ಆ ರಾಜ್ಯಕ್ಕೆ 40,000-50,000 ರೆಮ್ಡಿಸಿವಿರ್ ವಾಯ್ಲ್​ಗಳ ಅವಶ್ಯಕತೆಯಿದೆ

ಏತನ್ಮಧ್ಯೆ, ಬೆಂಗಳೂರಿನಲ್ಲಿ ವೈರಸ್​ನ ನಾಗಾಲೋಟವನ್ನು ತಡೆಯಲು ಬಿಗಿಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು ಇಂದಿನಿಂದ (ಶನಿವಾರ) ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ. ಈ ಕುರಿತು ಹೇಳಿಕೆಯೊಂದನ್ನು ನೀಡಿರುವ ನಗರದ ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ, ‘ಬೆಂಗಳೂರಿನ ರಾತ್ರಿ 9.50ಕ್ಕೆ ಫ್ಲೈಓವರ್​ಗಳನ್ನು ಬಂದ್ ಮಾಡಲಿದ್ದೇವೆ. ರಿಯಾಯಿತಿ ಇರುವ ವಾಹನಗಳಿಗೆ ಮಾತ್ರ ಸಂಚರಿಸುವ ಅವಕಾಶ ನೀಡಲಾಗುತ್ತದೆ. ದ್ವಿಮುಖ ರಸ್ತೆಯಲ್ಲಿ ಒಂದು ಕಡೆಯ ಮಾರ್ಗ ಬಂದ್ ಮಾಡುತ್ತೇವೆ, ಒಂದು ರಸ್ತೆಯಲ್ಲಿ ಮಾತ್ರ ಸಂಚಾರಕ್ಕೆ ಅವಕಾಶ ನೀಡುತ್ತೇವೆ. ಪೊಲೀಸರ ಕಣ್ತಪ್ಪಿಸಿ ಸಂಚರಿಸುವ ವಾಹನಗಳ ಮೆಲೆ ಸಿಸಿಟಿವಿಗಳಲ್ಲಿ ಸೆರೆಯಾಗುವ ಫುಟೇಜ್ ಆಧರಿಸಿ ಕ್ರಮ ತೆಗೆದುಕೊಳ್ಳಲಾಗುವುದು,’ ಎಂದು ಹೇಳಿದ್ದಾರೆ.

ಇದನ್ನೂ ಓದಿ: Coronavirus India Update: 1,15,736 ಹೊಸ ಕೊವಿಡ್ ಪ್ರಕರಣ ಪತ್ತೆ, ಮುಂದಿನ ನಾಲ್ಕು ವಾರಗಳಲ್ಲಿ ಗಂಭೀರ ಪರಿಸ್ಥಿತಿ ಎದುರಾಗಬಹುದು: ಕೇಂದ್ರ ಎಚ್ಚರಿಕೆ

Published On - 6:06 pm, Sat, 10 April 21

ತಾಜಾ ಸುದ್ದಿ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್