ಡಿಜಿ ಲಾಕರ್ ಹಾಗೂ ಎಂಪರಿವಾಹನ್ ಆ್ಯಪ್​ಗಳ ಮೂಲಕವೇ ಪೊಲೀಸರಿಗೆ ಡ್ರೈವಿಂಗ್ ಲೈಸೆನ್ಸ್, ಆರ್ ಸಿ ಬುಕ್ ತೋರಿಸಿ; ಭೌತಿಕ ದಾಖಲೆ ಅಗತ್ಯವಿಲ್ಲ

ಇನ್ನುಮುಂದೆ ಪೊಲೀಸರು ಕೂಡ ಭೌತಿಕವಾಗಿ ದಾಖಲಾತಿಗಳನ್ನು ತೋರಿಸುವಂತೆ ಒತ್ತಾಯ ಮಾಡುವಂತಿಲ್ಲ. ಪೊಲೀಸರಿಗೂ ಕೂಡ ಈಗಾಗಲೇ ಸೂಚನೆ ನೀಡಲಾಗಿದೆ. ಪೊಲೀಸರು ಭೌತಿಕವಾಗಿ ತೋರಿಸುವಂತೆ ಒತ್ತಾಯ ಮಾಡಿದ್ರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ವಾಹನ ಸವಾರರು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಬೆಂಗಳೂರಿನಲ್ಲಿ ಹೆಚ್ಚುವರಿ ಆಯುಕ್ತ ರವಿಕಾಂತೇಗೌಡ ತಿಳಿಸಿದರು.

ಡಿಜಿ ಲಾಕರ್ ಹಾಗೂ ಎಂಪರಿವಾಹನ್ ಆ್ಯಪ್​ಗಳ ಮೂಲಕವೇ ಪೊಲೀಸರಿಗೆ ಡ್ರೈವಿಂಗ್ ಲೈಸೆನ್ಸ್, ಆರ್ ಸಿ ಬುಕ್ ತೋರಿಸಿ; ಭೌತಿಕ ದಾಖಲೆ ಅಗತ್ಯವಿಲ್ಲ
ಸಾಂದರ್ಭಿಕ ಚಿತ್ರ
Follow us
| Edited By: guruganesh bhat

Updated on: Jul 08, 2021 | 10:47 PM

ಬೆಂಗಳೂರು: ಕೇಂದ್ರ ಸರ್ಕಾರ ಡಿಜಿ ಲಾಕರ್ ಹಾಗೂ ಎಂಪರಿವಾಹನ್ ಆ್ಯಪ್​ಗಳನ್ನು ಸಾರ್ವಜನಿಕರು ಬಳಸಬಹುದು. ಡ್ರೈವಿಂಗ್ ಲೈಸೆನ್ಸ್, ಆರ್ ಸಿ ಬುಕ್ ಸೇರಿದಂತೆ ಹಲವು ದಾಖಲೆಗಳನ್ನು ಡಿಜಿ‌ ಲಾಕರ್​ನಲ್ಲಿ ತೋರಿಸಬಹುದು. ಇನ್ನುಮುಂದೆ ಭೌತಿಕ ಸ್ವರೂಪದಲ್ಲೇ ಅಗತ್ಯ ದಾಖಲಾತಿಗಳನ್ನು ಪೊಲೀಸರಿಗೆ ತೋರಿಸುವ ಅಗತ್ಯ ಇಲ್ಲ. ಡಿಜಿ ಲಾಕರ್ ಅಥವಾ ಎಂ ಪರಿವಾಹನ್ ನಲ್ಲಿ ತೋರಿಸಬಹುದು ಎಂದು ಬೆಂಗಳೂರಿನಲ್ಲಿ ಹೆಚ್ಚುವರಿ ಆಯುಕ್ತ ರವಿಕಾಂತೇಗೌಡ ತಿಳಿಸಿದರು.

ಇನ್ನುಮುಂದೆ ಪೊಲೀಸರು ಕೂಡ ಭೌತಿಕವಾಗಿ ದಾಖಲಾತಿಗಳನ್ನು ತೋರಿಸುವಂತೆ ಒತ್ತಾಯ ಮಾಡುವಂತಿಲ್ಲ. ಪೊಲೀಸರಿಗೂ ಕೂಡ ಈಗಾಗಲೇ ಸೂಚನೆ ನೀಡಲಾಗಿದೆ. ಪೊಲೀಸರು ಭೌತಿಕವಾಗಿ ತೋರಿಸುವಂತೆ ಒತ್ತಾಯ ಮಾಡಿದ್ರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ವಾಹನ ಸವಾರರು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಬೆಂಗಳೂರಿನಲ್ಲಿ ಹೆಚ್ಚುವರಿ ಆಯುಕ್ತ ರವಿಕಾಂತೇಗೌಡ ತಿಳಿಸಿದರು.

ಕರ್ನಾಟಕ ಹೈಕೋರ್ಟ್ ಆದೇಶ ಪಾಲಿಸಿದ ಬೆಂಗಳೂರು ಪೊಲೀಸರು; ಪತ್ರಿಕಾ ಪ್ರಕಟಣೆಗಳಲ್ಲಿ ಆರೋಪಿಯ ಹೆಸರು ಬಹಿರಂಗ ಇಲ್ಲ, ಫೋಟೊ ಬ್ಲರ್ ಜೂನ್ 23 ರಂದು ಬೆಂಗಳೂರು ಪೊಲೀಸರ ಕೇಂದ್ರ ಅಪರಾಧ ಶಾಖೆ ಘಟಕವು ಐಟಿ ವಲಯದ ಯುವಕರಿಗೆ ಮಾದಕ ದ್ರವ್ಯಗಳನ್ನು ಪೂರೈಸುವ ಕಾರ್ಯದಲ್ಲಿ ಭಾಗಿಯಾಗಿದ್ದ ಐದು ಜನರ ಬಂಧಿಸಿತ್ತು. ಇವರಿಂದ 30 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ, ಎಲ್‌ಎಸ್‌ಡಿ ಮತ್ತು ಹಶಿಶ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆ ಹೊರಡಿಸಿತ್ತು. ಆದಾಗ್ಯೂ ಆ ಪತ್ರಿಕಾ ಪ್ರಕಟಣೆಯಲ್ಲಿ ಬಂಧಿತ ವ್ಯಕ್ತಿಗಳ ಹೆಸರನ್ನು ನೀಡಿಲ್ಲ.

ಮರುದಿನ ನಕಲಿ ವಿದೇಶಿ ಕರೆನ್ಸಿ ವ್ಯವಹಾರದಲ್ಲಿ ಭಾಗಿಯಾಗಿದ್ದ ಮತ್ತು ವೀಸಾಗಳ ಅವಧಿ ಮೀರಿ ಭಾರತದಲ್ಲಿ ಹೆಚ್ಚು ದಿನಗಳ ಕಾಲಉಳಿದುಕೊಂಡಿದ್ದ ಇಬ್ಬರು ಕ್ಯಾಮರೂನಿಯನ್ನರ ಬಂಧನದ ಕುರಿತು ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿದರು.ಈ ಬಾರಿಯೂ ಪತ್ರಿಕಾ ಪ್ರಕಟಣೆಯಲ್ಲಿ ಬಂಧಿತ ವ್ಯಕ್ತಿಗಳ ಹೆಸರು ಇರಲಿಲ್ಲ.

ಕಳೆದ ಹದಿನೈದು ದಿನಗಳಿಂದ ಬೆಂಗಳೂರು ಪೊಲೀಸರು ಕರ್ನಾಟಕ ಹೈಕೋರ್ಟ್‌ನ ಜೂನ್ 15 ರ ಆದೇಶದ ಮೇರೆಗೆ ಪತ್ರಿಕಾ ಪ್ರಕಟಣೆಗಳಲ್ಲಿ ಬಂಧಿತ ವ್ಯಕ್ತಿಗಳ ಹೆಸರುಗಳು ಮತ್ತು ಬ್ಲರ್ ಮಾಡಿದ ಫೋಟೊಗಳನ್ನು ಮಾತ್ರ ನೀಡಲು ಪ್ರಾರಂಭಿಸಿದ್ದಾರೆ. ಮಾಧ್ಯಮಗಳಿಗೆ ನೀಡುವ ಪ್ರಕಟಣೆಗಳಲ್ಲಿ ಶಂಕಿತರನ್ನು ಗುರುತಿಸುವುದನ್ನು ನಿಲ್ಲಿಸುವಂತೆ ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ ನೀಡಿತ್ತು.

ಇದನ್ನೂ ಓದಿ: 

Big News: ರೈತರಿಗೆ ಎಪಿಎಂಸಿ ಮೂಲಕ 1 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಣೆ, 23,123 ಕೋಟಿ ತುರ್ತು ಕೊವಿಡ್​ ಫಂಡ್ ಬಿಡುಗಡೆ: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

K Annamalai: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ನೇಮಕ

(Show police license RC book through Digilocker and Mparivahan App No physical record is required)

ತಾಜಾ ಸುದ್ದಿ
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ