AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೃಂಗೇರಿ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ: ವಿಜಯೇಂದ್ರ ಹರ್ಷ, ಜೀವರಾಜ್‌ಗೆ ಅಭಿನಂದನೆ!

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹರ್ಷ ವ್ಯಕ್ತಪಡಿಸಿದ್ದಾರೆ. ಹೈಕೋರ್ಟ್ ಆದೇಶದಂತೆ ನಡೆದ ಈ ಪ್ರಕ್ರಿಯೆಯು ನ್ಯಾಯಾಂಗದ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ ಎಂದು ಅವರು ತಮ್ಮ ಎಕ್ಸ್ ಪೋಸ್ಟ್​ನಲ್ಲಿ ತಿಳಿಸಿದ್ದು, ಡಿ.ಎನ್. ಜೀವರಾಜ್​ಗೆ ಅಭಿನಂದನೆ ತಿಳಿಸಿದ್ದಾರೆ.

ಶೃಂಗೇರಿ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ: ವಿಜಯೇಂದ್ರ ಹರ್ಷ, ಜೀವರಾಜ್‌ಗೆ ಅಭಿನಂದನೆ!
ಶೃಂಗೇರಿ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ: ವಿಜಯೇಂದ್ರ ಹರ್ಷ
ಭಾವನಾ ಹೆಗಡೆ
|

Updated on: May 03, 2026 | 12:24 PM

Share

ಬೆಂಗಳೂರು , ಮೇ 03: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯ (postal ballot recount)  ಫಲಿತಾಂಶ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಹೈಕೋರ್ಟ್ ಆದೇಶದಂತೆ ನಡೆದ ಈ ಮರು ಎಣಿಕೆ ಪ್ರಕ್ರಿಯೆಯ ನಂತರ ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆಮಾಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶೃಂಗೇರಿಯ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯೇಂದ್ರ ಅವರ ಎಕ್ಸ್ (ಟ್ವಿಟರ್) ಪೋಸ್ಟ್

ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ವಿಜಯೇಂದ್ರ, ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರ ಈ ಗೆಲುವು ನಮ್ಮ ಚುನಾವಣಾ ವ್ಯವಸ್ಥೆ ಹಾಗೂ ನ್ಯಾಯಾಂಗದ ಮೇಲಿನ ವಿಶ್ವಾಸಕ್ಕೆ ಸಂದ ಗೆಲುವು. ಸತತ ಪರಿಶ್ರಮ ಮತ್ತು ದಣಿವರಿಯದ ಹೋರಾಟಕ್ಕೆ ಇಂದು ಪ್ರತಿಫಲ ದೊರೆತಿದೆ ಎಂದು ಹೇಳಿದ್ದಾರೆ. ಸಂವಿಧಾನಾತ್ಮಕ ಹೋರಾಟದ ಮೂಲಕ ಪ್ರತಿ ಮತಕ್ಕೂ ಗೌರವ ತಂದುಕೊಟ್ಟ ಜೀವರಾಜ್ ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿರುವ ಅವರು, ಶೃಂಗೇರಿಯ ಮತದಾರರಿಗೆ ಕೃತಜ್ಞತೆ ಅರ್ಪಿಸಿದ್ದಾರೆ.

ಪ್ರಕರಣದ ಹಿನ್ನೆಲೆ

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಅವರು ಡಿ.ಎನ್. ಜೀವರಾಜ್ ವಿರುದ್ಧ ಕೇವಲ 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಆದರೆ, ಅಂಚೆ ಮತಗಳ ಎಣಿಕೆಯಲ್ಲಿ ಅಧಿಕಾರಿಗಳು ಲೋಪ ಎಸಗಿದ್ದಾರೆ ಎಂದು ಜೀವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಸುದೀರ್ಘ ಕಾನೂನು ಹೋರಾಟದ ನಂತರ, ಹೈಕೋರ್ಟ್ ನ್ಯಾಯಮೂರ್ತಿ ಆರ್. ನಟರಾಜ್ ಅವರ ಪೀಠವು ಅಂಚೆ ಮತಗಳ ಮರು ಎಣಿಕೆಗೆ ಐತಿಹಾಸಿಕ ಆದೇಶ ನೀಡಿತ್ತು.

ಇದನ್ನೂ ಓದಿ ರಾಜೇಗೌಡ vs ಜೀವರಾಜ್: ಅಂಚೆ ಮತಗಳ ಮರು ಎಣಿಕೆ ಹೈಕೋರ್ಟ್ ಆದೇಶದಿಂದ ಇಲ್ಲಿಯವರೆಗೆ ಆಗಿದ್ದೇನು? ಯಾರಿಗೆ ಗೆಲುವು?

ಮರು ಎಣಿಕೆಯಲ್ಲಿ ಅತಂತ್ರ ಸ್ಥಿತಿ

ನಿನ್ನೆ (ಮೇ 2) ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಅಂಚೆ ಮತಗಳ ಮರು ಎಣಿಕೆ ನಡೆಯಿತು. ವರದಿಗಳ ಪ್ರಕಾರ, ಮರು ಎಣಿಕೆಯ ನಂತರ ಕಾಂಗ್ರೆಸ್ ಶಾಸಕ ರಾಜೇಗೌಡ ಅವರ ಮತಗಳ ಸಂಖ್ಯೆಯಲ್ಲಿ ಕುಸಿತ ಕಂಡುಬಂದಿದ್ದು, ಬಿಜೆಪಿಯ ಜೀವರಾಜ್ ಅವರಿಗೆ ಮುನ್ನಡೆ ಸಿಕ್ಕಿದೆ ಎನ್ನಲಾಗಿದೆ. ಈ ಬೆಳವಣಿಗೆಯು ಪ್ರಜಾಪ್ರಭುತ್ವದಲ್ಲಿ ಸತ್ಯ ಯಾವತ್ತೂ ಸೋಲದು ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಬಿಜೆಪಿ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

ವರದಿ: ಅನಿಲ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ