ಕೆಆರ್​ಎಸ್​ ಡ್ಯಾಂನಲ್ಲಿ ಬಿರುಕು ತೋರಿಸಿದರೆ ಸಾಮೂಹಿಕ ರಾಜೀನಾಮೆ: ಸಂಸದೆ ಸುಮಲತಾಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಸವಾಲು

KRS Dam: ಸಂಸದೆ ಸುಮಲತಾ ತಮ್ಮ ಬೇಜವಾಬ್ದಾರಿ ನಡವಳಿಕೆ ಮುಚ್ಚಿಕೊಳ್ಳಲು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ಶಾಸಕ ಶ್ರೀಕಂಠಯ್ಯ, ಅವರು ಇಂತಹ ಬಾಲಿಶ ಹೇಳಿಕೆ ನೀಡಬಾರದು ಎಂದು ಕಿಡಿ ಕಾರಿದ್ದಾರೆ.

ಕೆಆರ್​ಎಸ್​ ಡ್ಯಾಂನಲ್ಲಿ ಬಿರುಕು ತೋರಿಸಿದರೆ ಸಾಮೂಹಿಕ ರಾಜೀನಾಮೆ: ಸಂಸದೆ ಸುಮಲತಾಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಸವಾಲು
ಶಾಸಕ ರವೀಂದ್ರ ಶ್ರೀಕಂಠಯ್ಯ ಮತ್ತು ಸಂಸದೆ ಸುಮಲತಾ ಅಂಬರೀಶ್
Follow us
|

Updated on:May 30, 2021 | 4:18 PM

ಮಂಡ್ಯ: ಕೆಆರ್​ಎಸ್​ ಡ್ಯಾಂ ಬಿರುಕು ಬಿಟ್ಟಿದೆ ಎಂಬ ಸಂಸದೆ ಸುಮಲತಾ ಹೇಳಿಕೆಯನ್ನು ಪ್ರಶ್ನಿಸಿ ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಸವಾಲು ಹಾಕಿದ್ದಾರೆ. ನಾಳೆ ಬೆಳಗ್ಗೆ ಕೆಆರ್​ಎಸ್​ಗೆ ಬನ್ನಿ, ಎಲ್ಲಾ ಶಾಸಕರು ಸಹ ಬರುತ್ತೇವೆ. ಕೆಆರ್​ಎಸ್​ ಜಲಾಶಯದಲ್ಲಿ ಎಲ್ಲಿ ಬಿರುಕು ಬಿಟ್ಟಿದೆ ಎಂದು ತೋರಿಸಿ. ಕೆಆರ್​ಎಸ್ ಡ್ಯಾಂ ಬಿರುಕು ಬಿಟ್ಟಿದ್ದರೆ ಜಿಲ್ಲೆಯ ಎಲ್ಲಾ ಶಾಸಕರು ಸಾಮೂಹಿಕ ರಾಜೀನಾಮೆ ನೀಡಿ ನಿಮ್ಮ ಹೇಳಿಕೆಯನ್ನು ಬೆಂಬಲಿಸುತ್ತೇವೆ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಸಂಸದೆ ಸುಮಲತಾ ಅವರಿಗೆ ಸವಾಲು ಹಾಕಿದ್ದಾರೆ.

ಸಂಸದೆ ಸುಮಲತಾ ತಮ್ಮ ಬೇಜವಾಬ್ದಾರಿ ನಡವಳಿಕೆ ಮುಚ್ಚಿಕೊಳ್ಳಲು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ಶಾಸಕ ಶ್ರೀಕಂಠಯ್ಯ, ಅವರು ಇಂತಹ ಬಾಲಿಶ ಹೇಳಿಕೆ ನೀಡಬಾರದು ಎಂದು ಕಿಡಿ ಕಾರಿದ್ದಾರೆ. ಡ್ಯಾಂ ನಮ್ಮ ಜೀವನಾಡಿ, ಅದಕ್ಕಿಂತ ಬೇರೆ ವಿಚಾರವಿಲ್ಲ. ಕೂತಲ್ಲಿ, ನಿಂತಲ್ಲಿ ಡ್ಯಾಂ ಬಿರುಕು ಬಿಟ್ಟಿದೆ ಎನ್ನುವುದು ತಪ್ಪು. ಮಂಡ್ಯದ ಜನ ನಿಮ್ಮ ಮೇಲೆ ನಂಬಿಕೆಯಿಟ್ಟು ಗೆಲ್ಲಿಸಿದ್ದಾರೆ. ಸಂಸದರೇ ಇಂತಹ ಕ್ಷುಲ್ಲಕ ಹೇಳಿಕೆ ನೀಡುವುದನ್ನು ಬಿಡಿ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಸಂಸದೆ ಸುಮಲತಾ ಅಂಬರೀಶ್​ರನ್ನು ಟೀಕಿಸಿದ್ದಾರೆ.

ನೀವು ಅಪರೂಪಕ್ಕೊಮ್ಮೆ ಮಂಡ್ಯಕ್ಕೆ ಬಂದು ಹೋಗುತ್ತೀರಿ. ನಮಗೆ ಪ್ರತಿದಿನವೂ ರೈತರ ಜೊತೆ ಒಡನಾಡವಿದೆ. ಕೆಆರ್​ಎಸ್​ ಬಗ್ಗೆ ನಿಮಗಿಂತಲೂ ಹೆಚ್ಚಿನ ಜವಾಬ್ದಾರಿಯಿದೆ ಎಂದು  ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಸಂಸದೆ ಸುಮಲತಾ ಅಂಬರೀಶ್​ರಿಗೆ ಸವಾಲೆಸೆದಿದ್ದಾರೆ.

ಇದನ್ನೂ ಓದಿ: ಕೊರೊನಾ ಗೆದ್ದ ಬಳ್ಳಾರಿಯ ಶತಾಯುಷಿ ದಂಪತಿ; ಹದಿನೈದು ದಿನಗಳಲ್ಲಿ ಕೊವಿಡ್​ನಿಂದ ಗುಣಮುಖ 

Covid Warriors: ಇನ್ಮುಂದೆ ನಗರ ಮತ್ತು ಸ್ಥಳೀಯ ಸಂಸ್ಥೆಗಳು, ಜಿ.ಪಂ, ತಾ.ಪಂ ಸದಸ್ಯರು ಮತ್ತು ಗ್ರಾ.ಪಂ. ಸದಸ್ಯರೂ ಕೊವಿಡ್ ವಾರಿಯರ್ಸ್​

(Shrirangapattana MLA Ravindra Srikantaya questions MP Sumalatha Ambareesh statement on KRS Dam)

Published On - 4:16 pm, Sun, 30 May 21

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​